ETV Bharat / state

ಕೋವಿಡ್-19: ಮೃತದೇಹಗಳ ನಿರ್ವಹಣೆ ಬಗ್ಗೆ ಸ್ಪಷ್ಟನೆ ಕೇಳಿದ ಹೈಕೋರ್ಟ್​

ಕೋವಿಡ್ ಸೋಂಕಿತ ಮೃತದೇಹಗಳ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಹಲವು ವಿಚಾರಗಳು ತಾಳೆಯಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ.

High Court asked clarification on carcass management
ಹೈಕೋರ್ಟ್
author img

By

Published : Aug 4, 2020, 10:45 PM IST

ಬೆಂಗಳೂರು : ಕೋವಿಡ್ ಸೋಂಕಿತ ಮೃತದೇಹಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಗಳಲ್ಲಿ ಸಾಕಷ್ಟು ಅಸ್ಪಷ್ಟತೆ ಮತ್ತು ಗೊಂದಲಗಳಿದ್ದು ಈ ಬಗ್ಗೆ ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ಅರ್ಜಿ ವಿಚಾರಣೆ ವೇಳೆ, ಸರ್ಕಾರದ ಮಾರ್ಗಸೂಚಿಗಳನ್ನು ಪರಿಶೀಲಿಸಿದ ಪೀಠ, ಕೊರೊನಾ ಸೋಂಕಿತ ಮತ್ತು ಶಂಕಿತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸುವ, ವೈದ್ಯಕೀಯ ಪ್ರಮಾಣಪತ್ರ ಹಾಗೂ ಮರಣ ಪ್ರಮಾಣಪತ್ರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳಲ್ಲಿ ಸ್ಪಷ್ಟತೆ ಇಲ್ಲ. ರಾಜ್ಯ ಸರ್ಕಾರ ಹೊರಡಿಸಿರುವ ಮತ್ತು ಬಿಬಿಎಂಪಿ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಹಲವು ವಿಚಾರಗಳು ತಾಳೆಯಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸರ್ಕಾರ ಮತ್ತು ಪಾಲಿಕೆಗೆ ಸೂಚಿಸಿತು.

ಅಲ್ಲದೇ, ವೈದ್ಯಕೀಯ ದಾಖಲೆಗಳ ನಿರ್ವಹಣೆಗೆ ಮರಣದ ಕಾರಣ ಬೇಕಾಗಬಹುದು. ಆದರೆ, ಕೊರೊನಾ ಸೋಂಕಿತರು ಇತರ ಕಾರಣಗಳಿಂದ ಮೃತಪಟ್ಟರೆ ಇಲ್ಲವೇ ಸೋಂಕಿನ ಕಾರಣದಿಂದಲೇ ಸಾವನ್ನಪ್ಪಿದ್ದರೆ ಮರಣ ಪ್ರಮಾಣಪತ್ರದಲ್ಲಿ ಕೊರೊನಾ ಸೋಂಕಿನ ಸ್ಥಿತಿಗತಿಯ ಬಗ್ಗೆ ನಮೂದು ಮಾಡುವ ಅವಶ್ಯಕತೆ ಇಲ್ಲ. ವೈದ್ಯಕೀಯ ಪ್ರಕ್ರಿಯೆಗಳಲ್ಲಿ ಸರ್ಕಾರದ ಮಧ್ಯಪ್ರವೇಶ ಸಮಂಜಸವಲ್ಲ. ಮರಣ ಪ್ರಮಾಣಪತ್ರ ನೀಡುವಾಗ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಯ ಅರ್ಜಿ ನಮೂನೆ 4 ಹಾಗೂ 4ಎ ಪ್ರಕಾರವೇ ನೀಡಬೇಕು ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.