ETV Bharat / state

ಬಂದ್ ನಡೆಸಿದವರಿಂದಲೇ ಸಾರ್ವಜನಿಕ ಆಸ್ತಿ ನಷ್ಟ ವಸೂಲಿ ವಿಚಾರ : ವಿವರ ಕೇಳಿದ ಹೈಕೋರ್ಟ್

ಮನವಿ ಪರಿಗಣಿಸಿದ ಪೀಠ, ಪ್ರಕರಣಗಳ ಸಂಬಂಧ ನ್ಯಾಯಾಲಯ 2020ರ ಫೆಬ್ರವರಿ 25ರಂದು ನೀಡಿರುವ ನಿರ್ದೇಶಗಳ ಪ್ರಕಾರ ಬಂದ್​ನಿಂದ ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಿದವರಿಂದಲೇ ನಷ್ಟದ ಮೊತ್ತವನ್ನು ವಸೂಲು ಮಾಡಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸಿ ಎಂದು ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿತು..

high court
ಹೈಕೋರ್ಟ್
author img

By

Published : Jan 19, 2022, 3:15 PM IST

ಬೆಂಗಳೂರು : ಮಹಾದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ 2018ರಲ್ಲಿ ಕರೆ ನೀಡಿದ್ದ ಕರ್ನಾಟಕ ಬಂದ್ ಹಾಗೂ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ 2019ರಲ್ಲಿ ನಡೆದ ಪ್ರತ್ಯೇಕ ಬಂದ್​​ಗಳಿಂದ ಆಗಿರುವ ಸಾರ್ವಜನಿಕ ಆಸ್ತಿ ನಷ್ಟವನ್ನು ಕರೆ ನೀಡಿದವರಿಂದ ವಸೂಲಿ ಮಾಡುವ ಸಂಬಂಧ ಹೈಕೋರ್ಟ್ ನಿರ್ದೇಶನಗಳ ಪ್ರಕಾರ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಪಿಐಎಲ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಎರಡೂ ಬಂದ್​​ಗಳ ವೇಳೆ ಉಂಟಾದ ಸಾರ್ವಜನಿಕ ಆಸ್ತಿ ನಷ್ಟದ ಪ್ರಮಾಣ ಅಂದಾಜಿಸಲು ಪ್ರತ್ಯೇಕ ಕ್ಲೇಮು ಕಮಿಷನರ್​​ಗಳನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಬಂದ್​​ನಿಂದ ಆಗಿರುವ ನಷ್ಟ ಅಂದಾಜಿಸಲು ನೇಮಿಸಿರುವ ಕ್ಲೇಮ್ ಕಮಿಷನರ್ ರಾಮನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಅಗತ್ಯ ಕಚೇರಿ ಮತ್ತು ಮೂಲಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

ಮತ್ತೊಂದು ಬಂದ್​ಗೆ ಸಂಬಂಧಿಸಿದಂತೆ ಆಗಿರುವ ನಷ್ಟ ಅಂದಾಜಿಸಲು ನೇಮಿಸಿರುವ ಕ್ಲೇಮ್ ಕಮಿಷನರ್ ಕೂಡ ಕಾರ್ಯಪ್ರವೃತ್ತರಾಗಿದ್ದಾರೆ. ಕ್ಲೇಮು ಕಮಿಷನರ್ ಕಚೇರಿಗಳಿಂದ ಮಾಹಿತಿ ಪಡೆದು ವರದಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು.

ಮನವಿ ಪರಿಗಣಿಸಿದ ಪೀಠ, ಪ್ರಕರಣಗಳ ಸಂಬಂಧ ನ್ಯಾಯಾಲಯ 2020ರ ಫೆಬ್ರವರಿ 25ರಂದು ನೀಡಿರುವ ನಿರ್ದೇಶಗಳ ಪ್ರಕಾರ ಬಂದ್​ನಿಂದ ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಿದವರಿಂದಲೇ ನಷ್ಟದ ಮೊತ್ತವನ್ನು ವಸೂಲು ಮಾಡಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸಿ ಎಂದು ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿತು.

ಇದನ್ನೂ ಓದಿ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಬಿದ್ದ ಜೂನಿಯರ್ ಆರ್ಟಿಸ್ಟ್ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.