ETV Bharat / state

ಜೈಲುಗಳಲ್ಲಿ ವಿಚಾರಣಾಧೀನ ಕೈದಿಗಳ ಅಸ್ವಾಭಾವಿಕ ಸಾವು: ಪರಿಹಾರದ ವರದಿ ಕೇಳಿದ ಹೈಕೋರ್ಟ್

ಕಾರಾಗೃಹಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ವಿಚಾರಣಾಧೀನ ಕೈದಿಗಳ ಅವಲಂಬಿತರಿಗೆ ಪರಿಹಾರ ನೀಡಿರುವ ಬಗ್ಗೆ ಸಮಗ್ರ ವರದಿ ನೀಡುವಂತೆ ಹೈಕೋರ್ಟ್​ ತಿಳಿಸಿದೆ.

high-court-asked-relief-report-on-prisoners-unnatural-deaths-in-jails
ಜೈಲುಗಳಲ್ಲಿ ವಿಚಾರಣಾಧೀನ ಕೈದಿಗಳ ಅಸ್ವಾಭಾವಿಕ ಸಾವು ಪರಿಹಾರ
author img

By

Published : Jan 19, 2022, 10:07 PM IST

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ವಿಚಾರಣಾಧೀನ ಕೈದಿಗಳ ಅವಲಂಬಿತರಿಗೆ ಪರಿಹಾರ ನೀಡಿರುವ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ವಿಚಾರಣಾಧೀನ ಕೈದಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿದ ಪ್ರಕರಣಗಳಲ್ಲಿ ಅವಲಂಬಿತರಿಗೆ ಪರಿಹಾರ ನೀಡುವ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ವಿಚಾರಣಾಧೀನ ಕೈದಿಗಳು ಅಸ್ವಾಭಾವಿಕ ರೀತಿಯಲ್ಲಿ ಸಾವನ್ನಪ್ಪಿದರೆ ಅವರ ಅವಲಂಬಿತರಿಗೆ ಪರಿಹಾರ ನೀಡಲಾಗುತ್ತಿದೆ. 2020ರ ನಂತರದ ಪ್ರಕರಣಗಳಲ್ಲಿ ಯಾರಿಗೆ ಎಷ್ಟು ಪರಿಹಾರ ನೀಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಲು 2 ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಕೋರಿಕೆ ಪರಿಗಣಿಸಿದ ಪೀಠ ಪರಿಹಾರ ನೀಡಿರುವ ಕುರಿತು ಸಮಗ್ರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ಪ್ರಕರಣ: ಕಾಳಿಮಠದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.