ETV Bharat / state

ಮಾರ್ಗಸೂಚಿ ಉಲ್ಲಂಘನೆ: ಸಿಎಂ ಪುತ್ರನ ವಿರುದ್ಧ ಕ್ರಮ ಕೈಗೊಂಡ ವರದಿ ಕೇಳಿದ ಹೈಕೋರ್ಟ್

author img

By

Published : May 25, 2021, 9:24 PM IST

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಕುಟುಂಬ ಸಮೇತ ನಂಜನಗೂಡು ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ವಿಚಾರದಲ್ಲಿ ಕೈಗೊಂಡ ಕ್ರಮಗಳ ಕುರಿತು ಜೂನ್ 3ರ ಒಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ಸೂಚಿಸಿದೆ.

highcourt
highcourt

ಬೆಂಗಳೂರು : ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ರಾಜ್ಯದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಇದೇ ಅರ್ಜಿಗೆ ಪೂರಕವಾಗಿ ವಕೀಲ ಜಿ.ಆರ್ ಮೋಹನ್ ಮೆಮೋ ಸಲ್ಲಿಸಿ ಬಿ.ವೈ. ವಿಜಯೇಂದ್ರ ಕುಟುಂಬ ಸಮೇತರಾಗಿ ಮೇ 18ರಂದು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ವಿಚಾರವನ್ನು ಪೀಠದ ಗಮನಕ್ಕೆ ತಂದರು.

ಮೆಮೋ ಪರಿಶೀಲಿಸಿದ ಪೀಠ, ಒಬ್ಬ ವ್ಯಕ್ತಿಯ ಅನುಕೂಲಕ್ಕಾಗಿ ದೇವಾಲಯ ತೆರೆದು ಪೂಜೆ ನೆರವೇರಿಸಲಾಗಿದ್ದು, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಆದ್ದರಿಂದ, ಈ ವಿಚಾರದಲ್ಲಿ ಕೈಗೊಂಡ ಕ್ರಮಗಳ ಕುರಿತು ಜೂನ್ 3ರ ಒಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ, ವಿಚಾರಣೆ ಮುಂದೂಡಿತು. ಈ ಹಿಂದಿನ ವಿಚಾರಣೆ ವೇಳೆಯೂ ಸರ್ಕಾರ ಕ್ರಮ ಕೈಗೊಳ್ಳುವ ಕುರಿತು ಸೂಚಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.