ಬೆಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಸುಮಾರು ಐದು ವರ್ಷಗಳ ಕಾಲ ಲೈಂಗಿಕ ಸಂಪರ್ಕ ಬೆಳೆಸಿ ಬಳಿಕ ವಿವಾಹವಾಗಲು ನಿರಾಕರಿಸಿದ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶಿಸಿದೆ. ತನ್ನ ವಿರುದ್ಧ ಯುವತಿ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಲ್ಲಿಕಾರ್ಜುನ ದೇಸಾಯಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಸಂತ್ರಸ್ತೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆದಿದೆ ಎಂಬುದನ್ನು ಒಪ್ಪಲಾಗುವುದಿಲ್ಲ: ಪ್ರಸ್ತುತ ಪ್ರಕರಣದಲ್ಲಿ ಒಂದೆರಡು ಅಲ್ಲ ಹಲವು ವರ್ಷಗಳಿಂದ ದೂರುದಾರ ಸಂತ್ರಸ್ತೆ ಮತ್ತು ಆರೋಪಿತರು ಪ್ರೀತಿಸುತ್ತಿದ್ದರು ಎಂದು ವಿವರಿಸಲಾಗಿದೆ. ಹೀಗಾಗಿ ಐದು ವರ್ಷಗಳ ಕಾಲ ಜೊತೆಗಿರುವಾಗ ಸಂತ್ರಸ್ತೆಯ ವಿರುದ್ಧವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂಬ ಅಂಶವನ್ನು ಒಪ್ಪಲಾಗುವುದಿಲ್ಲ. ಹೀಗಾಗಿ ಪ್ರಕರಣ ಮುಂದುವರಿದಲ್ಲಿ ಕಾನೂನಿನ ದುರುಪಯೋಗವಾಗಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅಲ್ಲದೇ, ಅರ್ಜಿದಾರರ ವಿರುದ್ಧ ಇಪಿಸಿ 376(ಬಲತ್ಕಾರ), 354 (ಬಲತ್ಕಾರಕ್ಕಾಗಿ ಹಲ್ಲೆ), 406(ನಂಬಿಕೆ ದ್ರೋಹ), 504 (ಉದ್ದೇಶಪೂರ್ವಕವಾಗಿ ಅವಮಾನ) ಸೆಕ್ಷನ್‌ಗಳ ಅಡಿ ದಾಖಲಿಸಿದ್ದ ಎಫ್‌ಐಅರ್ ಮತ್ತು ಈ ಸಂಬಂಧ ತನಿಖಾಧಿಕಾರಿಗಳು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದು ಪಡಿಸಿ ಆದೇಶಿಸಿದೆ.
ಇದನ್ನೂ ಓದಿ: ಹುಕ್ಕಾ ಬಾರ್ಗೆ ಆಹ್ವಾನಿಸಿದ ಇನ್ಸ್ಟಾಗ್ರಾಂ ಸ್ನೇಹಿತ : ವೈದ್ಯನ ಅಪ್ರಾಪ್ತ ಮಗಳ ಮೇಲೆ ಗ್ಯಾಂಗ್ ರೇಪ್!
ವಿಚಾರಣೆ ವೇಳೆ ದೂರದಾರರ ಪರ ವಕೀಲರು, ನಮ್ಮ ಕಕ್ಷಿದಾರರು ಮತ್ತು ಅರ್ಜಿದಾರರ ಹಲವು ವರ್ಷಗಳ ಪರಿಚಯ ಸ್ನೇಹವಾಗಿ ಬದಲಾಗಿ ಲೈಂಗಿಕ ಸಂಬಂಧಕ್ಕೆ ತಿರುಗಿತ್ತು. ಮದುವೆಯಾಗುವ ನೆಪದಲ್ಲಿ ಅರ್ಜಿದಾರರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾರೆ ಮತ್ತು ನಂತರ ಮದುವೆಯಾಗುವುದಾಗಿ ನೀಡಿದ್ದ ಭರವಸೆ ಉಲ್ಲಂಘಿಸಿದ್ದಾರೆ. ಆದ್ದರಿಂದ, ವಿವಾಹದ ಸುಳ್ಳು ಭರವಸೆ ನೀಡಿ ಸಂತ್ರಸ್ತೆಯನ್ನು ಪ್ರೇರೇಪಿಸಿ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ವಾದ ಮಂಡಿಸಿದ್ದರು.
ಇದನ್ನೂ ಓದಿ: ಬಲವಂತದಿಂದ ಬಾಲಕಿ ಎಳೆದೊಯ್ದು ಮದುವೆ; ತಾಯಿ ಮಗನಿಗೆ 20 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್
ಅರ್ಜಿದಾರರ ಪರ ವಕೀಲರು, ದೂರದಾರರು ಅರ್ಜಿದಾರರನ್ನು ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಿರ್ಧರಿಸಿದ್ದರು. ಆದರೆ, ಜಾತಿ ಕಾರಣದಿಂದ ಸಾಕಷ್ಟು ಪ್ರಯತ್ನ ಮಾಡಿದರೂ ವಿವಾಹ ಸಂಬಂಧ ಏರ್ಪಟ್ಟಿರಲಿಲ್ಲ. ಹೀಗಾಗಿ ಈ ಬೆಳವಣಿಗೆಯನ್ನು ಅತ್ಯಾಚಾರ ಆರೋಪ ಮಾಡಲಾಗಿದೆ. ಜೊತೆಗೆ, ಇಬ್ಬರೂ ಇಚ್ಛೆಯಿಂದ ನಡೆಸುವ ಲೈಂಗಿಕ ಕ್ರಿಯೆಗೆ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ. ಹೀಗಾಗಿ ಆರೋಪಿಯ ವಿರುದ್ಧದ ಪ್ರಕರಣ ರದ್ದು ಮಾಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಕರಣವನ್ನು ರದ್ದು ಪಡಿಸಿ ಆದೇಶಿಸಿದೆ.
ಇದನ್ನೂ ಓದಿ: ನವಾಜುದ್ದೀನ್ ಸಿದ್ದಿಕಿ ವಿರುದ್ಧ ಪತ್ನಿಯಿಂದಲೇ ರೇಪ್ ಕೇಸ್: ಮಕ್ಕಳಿಗಾಗಿ ಕೋರ್ಟ್ ಮೆಟ್ಟಿಲೇರಿದ ನಟ!
ಇದನ್ನೂ ಓದಿ: ಬುಲ್ಡೋಜರ್ ಚಲಾಯಿಸಿ ಅತ್ಯಾಚಾರ ಆರೋಪಿಯ ಮನೆ ಧ್ವಂಸಗೊಳಿಸಿದ ಮಹಿಳಾ ಪೊಲೀಸರು!