ETV Bharat / state

ದ್ವೇಷ ಭಾಷಣ ಆರೋಪ: ತೆಲಂಗಾಣ ಶಾಸಕ ರಾಜಾಸಿಂಗ್‌ ಠಾಕೂರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್ - telangana mal rajasingh hate speech

ತೆಲಂಗಾಣ ಶಾಸಕ ರಾಜಾಸಿಂಗ್ ಠಾಕೂರ್ ವಿರುದ್ಧದ ದ್ವೇಷ ಭಾಷಣ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

Telangana mla rajasingh
ತೆಲಂಗಾಣ ಶಾಸಕ ರಾಜಾಸಿಂಗ್‌ ಠಾಕೂರ್
author img

By ETV Bharat Karnataka Team

Published : Oct 19, 2023, 7:35 AM IST

Updated : Oct 19, 2023, 8:23 AM IST

ಬೆಂಗಳೂರು: ಭಾರತೀಯ ದಂಡ ಸಂಹಿತೆ 153(ಎ) (ಧರ್ಮ, ಜನಾಂಗ, ಜನ್ಮಸ್ಥಳದ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ಘರ್ಷಣೆ) ಅಡಿಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಅಪರಾಧ ಪ್ರಕ್ರಿಯಾ ಸಂಹಿತೆ 196 ಅಡಿಯಲ್ಲಿ ಅನುಮತಿ ಇಲ್ಲದೆ ಕಾಗ್ನಿಜೆನ್ಸ್ ಪಡೆದುಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿರುವ ಹೈಕೋರ್ಟ್, 2017ರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ತೆಲಂಗಾಣ ಶಾಸಕ ರಾಜಾಸಿಂಗ್ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

ರಾಜಾಸಿಂಗ್ ಠಾಕೂರ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಪ್ರಸ್ತುತ ಪ್ರಕರಣದಲ್ಲಿ ಸರ್ಕಾರದಿಂದ ಅನುಮತಿ ಪಡೆಯದಿರುವುದು ಮೂಲಭೂತ ಕೊರತೆಯಾಗಿದೆ. ಜೊತೆಗೆ, ಅರ್ಜಿದಾರರ ವಿರುದ್ಧದ ಶಸ್ತ್ರಾಸ್ತ್ರ ಕಾಯಿದೆ 25(1ಎಎ) ಅಡಿಯಲ್ಲಿ ದಾಖಲಾಗಿದ್ದ ಆರೋಪಕ್ಕೆ ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಸರ್ಕಾರ ಅನುಮತಿ ನೀಡದೆ ನ್ಯಾಯಾಲಯ 196ರ ಅಡಿಯಲ್ಲಿ ಕಾಗ್ನಿಜನ್ಸ್ ಪಡೆದುಕೊಳ್ಳುವುದಕ್ಕೆ ಅವಕಾಶವಿಲ್ಲ. ಹೀಗಾಗಿ ಈಪಿಸಿ ಸೆಕ್ಷನ್ 153 ಅಡಿಯಲ್ಲಿ ಕಾಗ್ನಿಜನ್ಸ್ ಪಡೆದುಕೊಂಡಿರುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಜೊತೆಗೆ, ಕೊಲ್ಲೂ ಅಂಕಬಾಬು ಮತ್ತು ತಿರುಪತಿ ರಮೇಶ್ ನಡುವಿನ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ಸೆಕ್ಷನ್ 153ರ ಅಡಿಯಲ್ಲಿ ಅಪರಾಧ ವಿಚಾರಣೆ ನಡೆಸುವುದಕ್ಕೂ ಮುನ್ನ ನ್ಯಾಯಾಲಯ ಹಲವು ಷರತ್ತುಗಳನ್ನು ಪೂರೈಸಬೇಕಾಗುತ್ತದೆ ಎಂದು ತಿಳಿಸಿದೆ. ಆದ್ದರಿಂದ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿರುವುದಾಗಿ ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ? 2017ರ ಡಿಸೆಂಬರ್ 12ರಂದು ಯಾದಗಿರಿ ಜಿಲ್ಲೆಯ ವಾಣಿಕೆರೆ ಲೇಔಟ್‌ನಲ್ಲಿ ಹಿಂದೂ ವಿರಾಟ್ ಸಮಾವೇಶದಲ್ಲಿ ತೆಲಂಗಾಣ ಶಾಸಕ ರಾಜಾಸಿಂಗ್ ಠಾಕೂರ್ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡುವುದು ಮತ್ತು ಶಸ್ತ್ರಾಸ್ತ್ರಗಳನ್ನು ಬಳಸದಂತೆ ನಿರ್ಬಂಧ ಆದೇಶವಿತ್ತು. ಆದ್ರೂ ಇವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಲ್ಲದೇ ವೇದಿಕೆಯ ಮೇಲೆ ಕತ್ತಿಯನ್ನು ಪ್ರದರ್ಶನ ಮಾಡಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಆರೋಪಿಗಳ ವಿರುದ್ಧ ಐಪಿಸಿ 153(ಎ) ಗುಂಪುಗಳ ನಡುವೆ ದ್ವೇಷ ಉಂಟು ಮಾಡುವುದು, 149 (ಗುಂಪಿನಲ್ಲಿ ಒಬ್ಬರು ಮಾಡಿದ ಅಪರಾಧಕ್ಕೆ ಎಲ್ಲರೂ ಗುರಿಯಾಗುವುದು), 147 (ದೊಂಬಿ), 143 (ನಿರ್ಬಂಧ ಕೂಟಿದಲ್ಲಿ ಸದಸ್ಯನಾಗಿರುವುದು), 145 (ನಿರ್ಬಂಧವಿದ್ದರೂ ಕೂಟ ರಚನೆ ಮಾಡುವುದು) ಮತ್ತು 25 (1ಎಎ) ಅಡಿ ಹಾಗೂ ಶಸ್ತ್ರಾಸ್ತ್ರಗಳ ಕಾಯಿದೆ ಸೆಕ್ಷನ್ 25(1)(ಎ)(ಎ)(ನಿಷೇಧಿತ ಶಸ್ತ್ರಾಸ್ತ್ರಗಳ ಪ್ರದರ್ಶನ) ಅಡಿ ಎಫ್‌ಐಆರ್ ದಾಖಲಿಸಿದ್ದರು. ಅಲ್ಲದೆ, ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು, ಯಾದಗಿರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಅರ್ಜಿದಾರರು ಜನಪ್ರತಿನಿಧಿಯಾಗಿರುವ ವ್ಯಕ್ತಿಯಾದ್ದರಿಂದ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ನ್ಯಾಯಾಲಯ ಆರೋಪಿಗಳ ವಿರುದ್ಧ ಕಾಗ್ನಿಜನ್ಸ್ ತೆಗೆದುಕೊಂಡು ವಿಚಾರಣೆಗೆ ಪರಿಗಣಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಆರೋಪ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ಇತರರ ವಿರುದ್ಧದ ಪ್ರಕರಣ ರದ್ದು

Last Updated : Oct 19, 2023, 8:23 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.