ETV Bharat / state

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

ರಾಜ್ಯದಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಹೊರಡಿಸಿದ್ದ ತಾತ್ಕಾಲಿಕ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

high-court-cancels-provisional-list-of-graduate-primary-teachers-recruitment
ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್
author img

By

Published : Jan 30, 2023, 6:00 PM IST

Updated : Jan 30, 2023, 8:27 PM IST

ಬೆಂಗಳೂರು : ಸುಮಾರು 15 ಸಾವಿರಕ್ಕೂ ಹೆಚ್ಚು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹೊರಡಿಸಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ಅಭ್ಯರ್ಥಿಗಳ ತಂದೆಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಿ ಹೊಸದಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿ ಆದೇಶಿಸಿದೆ.

ತಂದೆಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದ್ದ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಕೈಬಿಟ್ಟಿದ್ದ ಕ್ರಮವನ್ನು ಪ್ರಶ್ನಿಸಿ ಅಕ್ಷತಾ ಚೌಗುಲೆ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದ್ದು, ಅರ್ಜಿಯನ್ನು ಪುರಸ್ಕರಿಸಲಾಗಿದೆ.

ಪದವೀಧರರ ಪ್ರಾರ್ಥಮಿಕ ಶಾಲಾ ಶಿಕ್ಷಕರ(6-8 ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ 2022ರ ಫೆಬ್ರವರಿ 22ರಂದು ಅಧಿಸೂಚನೆ ಹೊರಡಿಸಿತ್ತು. ಈ ನೇಮಕಾತಿ ಪ್ರಕ್ರಿಯೆಗೆ ಅರ್ಜಿದಾರರು ಅರ್ಜಿಗಳನ್ನು ಸಲ್ಲಿಸಿದ್ದರು. ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ರ‍್ಯಾಂಕ್ ಕೂಡ ಗಳಿಸಿದ್ದರು. ಅಲ್ಲದೆ, 1:2 ದಾಖಲೆಗಳ ಪರಿಶೀಲನೆಗೆಗಾಗಿ ಅರ್ಜಿದಾರರು ಅರ್ಹರಾಗಿದ್ದರು. ಬಳಿಕ ದಾಖಲೆ ಪರಿಶೀಲಿಸಿದ ಇಲಾಖೆಯು ಯಾವುದೇ ಪ್ರತಿಕ್ರಿಯೆ ನೀಡರಲಿಲ್ಲ. ಆದರೆ, 2022ರ ನವೆಂಬರ್ 18ರಂದು ಹೊರಡಿಸಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಅರ್ಜಿ ಸಲ್ಲಿಸಿರುವ ಯಾವುದೇ ಅಭ್ಯರ್ಥಿ ಆಯ್ಕೆಯಾಗಿರಲಿಲ್ಲ. ಆದರೆ, ಅರ್ಜಿದಾರರಿಗಿಂತಲೂ ಕಡಿಮೆ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಇದನ್ನು ಕಂಡು ಅರ್ಜಿದಾರರು ಗಾಬರಿಗೊಳ್ಳುವಂತಾಗಿತ್ತು.

ಈ ಬಗ್ಗೆ ಪರಿಶೀಲಿಸಿದಾಗಿ ಅರ್ಜಿದಾರರು ತಮ್ಮ ಪತಿ, ಪತ್ನಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಿರಲಿಲ್ಲ. ಬದಲಾಗಿ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಲಾಗಿತ್ತು. ಇದೇ ಕಾರಣದಿಂದ ಎಲ್ಲ ಅರ್ಜಿದಾರರನ್ನು ಸಾಮಾನ್ಯ ವರ್ಗಕ್ಕೆ ಸೇರಿಸಿರುವುದಾಗಿ ತಿಳಿಸಿದರು.

ಆದರೆ, ಅಧಿಸೂಚನೆ ಸಲ್ಲಿಸಿದ ಸಂದರ್ಭದಲ್ಲಿ ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪವನ್ನು ಮಾಡಿರಲಿಲ್ಲ. ಹೀಗಾಗಿ ಅರ್ಜಿದಾರನ್ನು ಪರಿಗಣಿಸದಿರುವುದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ನೀಡಿರುವ ದೃಢೀಕರಣ ಪತ್ರ ಕಾನೂನು ಬಾಹಿರವಾಗಿದ್ದು, ಅದನ್ನು ರದ್ದು ಮಾಡಬೇಕು. ಜೊತೆಗೆ, ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕೋರುವುದು ಕಾನೂನಿಗೆ ವಿರುದ್ಧವಾಗಿದೆ. ಇದನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ನವೆಂಬರ್​ 18ರಂದು ಪ್ರಕಟವಾಗಿದ್ದ ಶಿಕ್ಷಕರ ನೇಮಕಾತಿ ಪಟ್ಟಿ : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಕಳೆದ ವರ್ಷದ ನವೆಂಬರ್​ 18ರಂದು ಪ್ರಕಟಿಸಿದ್ದರು. ಈ ಕುರಿತು ಅಂದು ಸಮಗ್ರ ಶಿಕ್ಷಣ ಕಚೇರಿಯಲ್ಲಿ ಮಾತನಾಡಿದ್ದ ಸಚಿವರು, ತಾತ್ಕಾಲಿಕ ಆಯ್ಕೆ ಪಟ್ಟಿ ‌ಪ್ರಕಟ ಮಾಡಿದ್ದೇವೆ. 1:1 ಆಧಾರದಲ್ಲಿ ಪಟ್ಟಿ ರಿಲೀಸ್ ಮಾಡಲಾಗಿದೆ. ಎಲ್ಲರ ಆರೋಪಕ್ಕೆ ಉತ್ತರ ನೀಡಿದ್ದೇವೆ. ಅತ್ಯುತ್ತಮವಾಗಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದ್ದರು.

15 ಸಾವಿರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಮಾಡಿದ್ದೆವು. 1:1 ಆಧಾರದಲ್ಲಿ 13,363 ಅಭ್ಯರ್ಥಿಗಳು ಪಟ್ಟಿಯಲ್ಲಿ ಇದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 5 ಸಾವಿರ ಹುದ್ದೆ ಇಟ್ಟಿದ್ದೇವೆ. ಆದರೆ ಅಲ್ಲಿ ಸ್ವಲ್ಪ ಕೊರತೆ ಆಗಿದೆ. 5 ಸಾವಿರ ಹುದ್ದೆ ಪೈಕಿ 4,187 ಶಿಕ್ಷಕರ ಪಟ್ಟಿ ಬಿಡುಗಡೆ ಆಗಿದೆ. ಉಳಿದ ಭಾಗದಲ್ಲಿ 9,176 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದರು.

ವಿಷಯವಾರು ಶಿಕ್ಷಕರ ನೇಮಕಾತಿ ಮಾಹಿತಿ : 1,768 ಇಂಗ್ಲಿಷ್‌ ಅಭ್ಯರ್ಥಿಗಳು, ಗಣಿತ 5,450, ಸಮಾಜ ವಿಜ್ಞಾನ - 4,521, ಜೀವ ವಿಜ್ಞಾನ - 1,624 ಅಭ್ಯರ್ಥಿಗಳು ಆಯ್ಕೆ ಆಗಿದ್ದರು. ಒಟ್ಟು 15 ಸಾವಿರ ಹುದ್ದೆಗಳಲ್ಲಿ 13,363 ಹುದ್ದೆಗೆ ಅಭ್ಯರ್ಥಿಗಳು ಆಯ್ಕೆ ಆಗಿರುವ ಕುರಿತು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದರು.

ಪ್ರಥಮ ಬಾರಿಗೆ ಶಿಕ್ಷಕರಾಗಿ ತೃತೀಯ ಲಿಂಗಿಗಳು ಆಯ್ಕೆಯಾಗಿದ್ದರು.. ಯಾವುದೇ ರೀತಿಯ ಗೊಂದಲ‌ ಇಲ್ಲದೆ ಇಲಾಖೆ ಪರೀಕ್ಷೆ ಮಾಡಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಮೂವರು ತೃತೀಯ ಲಿಂಗಿಗಳು ಶಿಕ್ಷಕರಾಗಿ ಆಯ್ಕೆ ಆಗಿದ್ದರು. 10 ತೃತೀಯ ಲಿಂಗಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 3 ಜನ ಆಯ್ಕೆ ಆಗಿದ್ದರು. 34 ಜನ ಎಂಜಿನಿಯರ್ ಅಭ್ಯರ್ಥಿಗಳ ಪೈಕಿ 19 ಜನ ಎಂಜಿನಿಯರಿಂಗ್ ಅಭ್ಯರ್ಥಿಗಳು ಶಿಕ್ಷಕರಾಗಿ ನೇಮವಾಗಿದ್ದರು. 8 ತಿಂಗಳಲ್ಲಿ ನೇಮಕಾತಿ ‌ಪ್ರಕ್ರಿಯೆ ಯಶಸ್ವಿಯಾಗಿ ಮಾಡಿದ್ದೇವೆ ಸಚಿವರು ಅಂದು ನೇಮಕಾತಿ ಬಗ್ಗೆ ವಿವರಿಸಿದ್ದರು.

ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ

Last Updated : Jan 30, 2023, 8:27 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.