ETV Bharat / state

ನ್ಯಾಯಮೂರ್ತಿ ಅಲೋಕ್ ಅರಾಧೆ ಶೈಕ್ಷಣಿಕ ತಜ್ಞರಾಗಿ ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ: ಹೈಕೋರ್ಟ್ ಸಿಜೆ ಪ್ರಸನ್ನ ಬಾಲಚಂದ್ರ ವರಾಳೆ

author img

By

Published : Jul 22, 2023, 7:22 AM IST

ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದಿರುವ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿಗೆ ಬೆಂಗಳೂರು ವಕೀಲರ ಸಂಘ ಬೀಳ್ಕೊಡುಗೆ ನೀಡಿತು.

ನ್ಯಾಯಮೂರ್ತಿ ಅಲೋಕ್ ಅರಾಧೆ
ನ್ಯಾಯಮೂರ್ತಿ ಅಲೋಕ್ ಅರಾಧೆ

ಬೆಂಗಳೂರು: ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದಿರುವ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರು ಮಾರ್ಗದರ್ಶಕರು, ಆಡಳಿತಗಾರ ಮತ್ತು ಶೈಕ್ಷಣಿಕ ತಜ್ಞರಾಗಿ ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ತಿಳಿಸಿದ್ದಾರೆ.

ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿರುವ ರಾಜ್ಯ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿಗೆ ಬೆಂಗಳೂರು ವಕೀಲರ ಸಂಘ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಾತನಾಡಿದರು. ಪ್ರತಿಯೊಬ್ಬರನ್ನು ನಗುಮೊಗದಿಂದ ಮಾತನಾಡಿಸುತ್ತಿದ್ದ ಅರಾಧೆ ಅವರು ನಾನು ಕಂಡ ಅತ್ಯುತ್ತಮ ವ್ಯಕ್ತಿಗಳಲ್ಲಿ ಒಬ್ಬರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ, ಅವರಿಗೆ ನ್ಯಾಯಾಂಗದ ಉದ್ದೇಶದ ಬಗ್ಗೆ ಬದ್ಧತೆಯಿತ್ತು. ನ್ಯಾಯಾಂಗದ ಆಶಯಗಳ ಈಡೇರಿಕೆಗಾಗಿ ಕಠಿಣ ಪರಿಶ್ರಮ ವಹಿಸಿದ್ದರು. ಅವರು ಮುಂದಿನ ದಿನಗಳಲ್ಲಿಯೂ ತಮ್ಮ ಈ ಸೇವಾಪರತೆಯನ್ನು ಮುಂದುವರಿಸಬೇಕು ಎಂದು ಪ್ರಸನ್ನ ಬಾಲಚಂದ್ರ ವರಾಳೆ ಶುಭ ಹಾರೈಸಿದರು.

ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ನ್ಯಾಯಮೂರ್ತಿ ಅಲೋಕ್ ಅರಾಧೆ, ನಾನು ಬೆಂಗಳೂರಿನಿಂದ ಸುಂದರ ನೆನಪುಗಳೊಂದಿಗೆ ತೆರಳುತ್ತಿದ್ದೇನೆ. ಇಲ್ಲಿನ ವಕೀಲರಿಂದ ಅನೇಕ ವಿಷಯಗಳನ್ನು ಕಲಿತಿದ್ದೇನೆ. ದೇಶದಲ್ಲೇ ಬೆಂಗಳೂರು ವಕೀಲರ ಸಂಘ ಅತ್ಯುತ್ತಮವಾದುದು. ಅಂತೆಯೇ, ಬೆಂಗಳೂರು ಒಂದು ಸುಂದರ ನಗರಿ, ಇಲ್ಲಿನ ಹಿರಿಯ ವಕೀಲರ ಕೌಶಲ್ಯ ಕಂಡು ನಾನು ಬೆರಗಾಗಿದ್ದೇನೆ ಎಂದರು.

ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾತನಾಡಿ, ನ್ಯಾ. ಅರಾಧೆ ಅವರು ಅತ್ಯುತ್ತಮ ಶಿಕ್ಷಕ, ಲೇಖಕ, ನ್ಯಾಯವೆತ್ತ ವಕೀಲರಾಗಿದ್ದಾರೆ. ಇದೆಲ್ಲವು ಅವರ ಸಮರ್ಪಣ ಭಾವ, ಕಠಿಣ ಪರಿಶ್ರಮದಿಂದ ಸಾಧ್ಯವಾಗಿದೆ. ವಕೀಲರಲ್ಲಿ ಸೀನಿಯರ್, ಜೂನಿಯರ್ ಎಂಬ ಭೇದ ಮಾಡದೆ ಸಮಾನ ಪ್ರೀತಿ ಗೌರವದಿಂದ ನೋಡುವುದು ಅವರಲ್ಲಿನ ವಿಶೇಷತೆ ಎಂದು ಶ್ಲಾಘಿಸಿದರು.

ಸಂಘದ ಅಧ್ಯಕ್ಷ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ನ್ಯಾ.ಅರಾಧೆ ಅವರು ತಮ್ಮ ಪ್ರಕರಣಗಳಿಗೆ ಸಂಬಂಧ ಪಟ್ಟ ವಿಷಯಗಳನ್ನಷ್ಟೇ ವಾದಿಸುವಂತೆ ಸೂಚಿಸುತ್ತಿದ್ದರು ಎಂದು ಹೇಳಿದರು. ಇದೇ ವೇಳೆ ವಕೀಲ ಅಮೃತೇಶ್ ಸೇರಿದಂತೆ ಮತ್ತಿತರರಿದ್ದರು.

ಬುಧವಾರ ಕೇಂದ್ರ ಸರ್ಕಾರ ಆದೇಶ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅಲೋಕ್‌ ಆರಾಧೆ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನೇಮಿಸಿ ಬುಧವಾರವಷ್ಟೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಸುಪ್ರೀಂಕೋರ್ಟ್ ಸಿಜೆ ಡಿ ವೈ ಚಂದ್ರಚೂಡ್ ನೇತೃತ್ವದಲ್ಲಿ ನಡೆದಿದ್ದ ಕೊಲಿಜಿಯಂ ಸಭೆಯಲ್ಲಿ ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಅಲೋಕ್ ಆರಾಧೆ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಈ ಶಿಫಾರಸ್ಸಿಗೆ ರಾಷ್ಟ್ರಪತಿಗಳು ಅನುಮೋದಿಸಿದ ಬಳಿಕ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಆದೇಶ ಹೊರಡಿಸಿದೆ.

ಇದನ್ನೂ ಓದಿ: ನ್ಯಾಯಮೂರ್ತಿ ಅಲೋಕ್ ಆರಾಧೆ ತೆಲಂಗಾಣ ಸಿಜೆ ಆಗಿ ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯದಿಂದ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.