ETV Bharat / state

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಆರೋಪ: ವರದಿ ನೀಡಲು​ ಸಮಿತಿಗೆ ಹೈಕೋರ್ಟ್​ ಗಡುವು - illegal allegation under BBMP

ಬಿಬಿಎಂಪಿ ವಿವಿಧ ಗುತ್ತಿಗೆ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಂಬಂಧ ವರದಿ ನೀಡಲು ನ್ಯಾ. ನಾಗಮೋಹನ್ ದಾಸ್​​ ಆಯೋಗಕ್ಕೆ ಹೈಕೋರ್ಟ್​ 45 ದಿನಗಳ ಗಡುವು ವಿಧಿಸಿದೆ.

high-court-deadline-for-committee-to-submit-report-on-allegations-of-illegal-contract-work-in-bbmp
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಆರೋಪ : ವರದಿ ನೀಡಲು​ ಸಮಿತಿಗೆ ಹೈಕೋರ್ಟ್​ ಗಡುವು
author img

By ETV Bharat Karnataka Team

Published : Dec 13, 2023, 8:46 PM IST

ಬೆಂಗಳೂರು : ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಅವರ ಏಕ ವ್ಯಕ್ತಿ ಆಯೋಗಕ್ಕೆ ವರದಿ ಸಲ್ಲಿಸಲು ಹೈಕೋರ್ಟ್‌ 45 ದಿನಗಳ ಗಡುವು ವಿಧಿಸಿದೆ.

ರಾಜ್ಯ ಸರ್ಕಾರವು ನ್ಯಾ.ನಾಗಮೋಹನ್‌ ದಾಸ್‌ ಅವರ ಏಕವ್ಯಕ್ತಿ ಆಯೋಗ ರಚಿಸಿ 2023ರ ಆ.5ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೆರ್ಸಸ್‌ ನಿಕ್ಷೇಪ್‌ ಇನ್ಫ್ರಾ ಪ್ರಾಜೆಕ್ಟ್ಸ್‌ ಸೇರಿದಂತೆ ಹಲವು ಗುತ್ತಿಗೆ ಕಂಪನಿಗಳು ಮತ್ತು ಗುತ್ತಿಗೆದಾರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಏಕ ವ್ಯಕ್ತಿ ಆಯೋಗಕ್ಕೆ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.

ಅಲ್ಲದೆ, 2019-20ರಿಂದ 2022-23ರವರೆಗೆ ಬಿಬಿಎಂಪಿ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳು ಗುತ್ತಿಗೆದಾರರಿಗೆ ವಹಿಸಿದ ಎಲ್ಲ ಗುತ್ತಿಗೆ ಕಾಮಗಾರಿಗಳ ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ಘಟಕವನ್ನು (ಎಸ್‌ಐಟಿ) ರಚಿಸಿದೆ. ಈ ಎಸ್‌ಐಟಿಯ ರಚನೆಯ ಸಿಂಧುತ್ವವನ್ನು ಈ ನ್ಯಾಯಾಲಯದ ಮುಂದೆ ಪ್ರಶ್ನಿಸಲಾಗಿದೆ. ಎಸ್‌ಐಟಿ ರಚನೆಯ ನಂತರ ಯಾವುದೇ ಪ್ರಕ್ರಿಯೆಗಳೂ ನಡೆದಿಲ್ಲ. ಇದರ ಬೆನ್ನಲ್ಲೆ 2019ರಿಂದ 2023ರವರೆಗೆ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ಏಕವ್ಯಕ್ತಿ ಆಯೋಗ ರಚಿಸಲಾಗಿದೆ. ಅಲ್ಲಿಯೂ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಎಸ್‌ಐಟಿ ಕೈಗೊಂಡ ಎಲ್ಲಾ ಶೋಧನೆಗಳನ್ನು (ಫೈಡಿಂಗ್ಸ್‌) ಏಕವ್ಯಕ್ತಿಯ ಆಯೋಗ ಪರಿಗಣಿಸಲಿದೆ. ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿ ಎಲ್ಲ ಪಾಲುದಾರರು ಮತ್ತು ಆಯೋಗವು ಇರಿಸುವ ಎಲ್ಲ ದಾಖಲೆಗಳನ್ನು ಪರಿಗಣಿಸಲು ಆಯೋಗಕ್ಕೆ 45 ದಿನಗಳ ಕಾಲಮಿತಿ ನಿಗದಿಪಡಿಸಲಾಗುತ್ತಿದೆ. ಎಲ್ಲ ಪಾಲುದಾರರ ವಾದವನ್ನು ಆಯೋಗವು ಆಲಿಸಿದ ನಂತರ ಕಾನೂನು ಪ್ರಕಾರ ವರದಿಯನ್ನು ಸಿದ್ಧಪಡಿಸಬೇಕು. ಆ ವರದಿಯನ್ನು 45 ದಿನಗಳ ಪೂರ್ಣಗೊಂಡ ನಂತರ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ ಹೈಕೋರ್ಟ್‌ ವಿಚಾರಣೆಯನ್ನು 2024ರ ಫೆ.6ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ರಾಜ್ಯ ಅಡ್ವೋಕೇಟ್‌ ಜನರಲ್‌ ಶಶಿಕಿರಣ್ ಶೆಟ್ಟಿ ಹಾಜರಾಗಿ, ಸೂಕ್ತ ಸಮಯಾವಕಾಶ ಕಲ್ಪಿಸಿದರೆ ಆಯೋಗವು ವಿಚಾರಣೆ ನಡೆಸಲಿದೆ. ಗುತ್ತಿಗೆ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಆರೋಪಗಳ ಕುರಿತು ಸಮಗ್ರ ತನಿಖೆಗಾಗಿ ಎಸ್‌ಐಟಿಯ ಶೋಧನೆಗಳನ್ನು ಸಹ ಆಯೋಗಕ್ಕೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು. ಈ ವಾದ ಪರಿಗಣಿಸಿದ ನ್ಯಾಯಪೀಠ, ಏಕವ್ಯಕ್ತಿ ಆಯೋಗಕ್ಕೆ ವಿಚಾರಣಾ ವರದಿ ಸಲ್ಲಿಸಲು 45 ದಿನಗಳ ಕಾಲಾವಕಾಶ ನೀಡಿತು.

ಇದಲ್ಲದೇ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅಡ್ವೋಕೇಟ್‌ ಜನರಲ್‌, ಯಾವುದೇ ಅಕ್ರಮಗಳ ಆರೋಪ ಹೊಂದಿರದ ಗುತ್ತಿಗೆದಾರರಿಗೆ ಅವರು ಕ್ಲೇಮು ಮಾಡಿದ ಹಣದ ಪೈಕಿ ಶೇ.75ರಷ್ಟು ಹಿರಿತನದ ಆಧಾರದ ಮೇಲೆ ಪಾವತಿಸಲಾಗುತ್ತದೆ. ಜತೆಗೆ, ಆರೋಪ ಹೊತ್ತಿರುವ ಗುತ್ತಿಗೆದಾರಿಗೆ ಶೇ.50ರಷ್ಟು ಮಾತ್ರ ಪಾವತಿಸಲಾಗುತ್ತದೆ. ಈ ಕುರಿತ ಸರ್ಕಾರದ ಆದೇಶಗಳು ಹೈಕೋರ್ಟ್‌ ಅಥವಾ ಏಕವ್ಯಕ್ತಿ ಆಯೋಗದ ಮುಂದಿರುವ ಪ್ರಕ್ರಿಯೆಗಳಿಗೆ ಬದ್ಧವಾಗಿರುತ್ತವೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಪ್ರಕರಣದ ಹಿನ್ನೆಲೆ : ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನ, ನಗರೋತ್ಥಾನ ಅನುದಾನ ಮತ್ತು ಬಿಬಿಎಂಪಿ ಅನುದಾನಗಳ ಅಡಿ ಕೈಗೊಂಡಿದ್ದ ಹಲವು ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ನಾಲ್ಕು ಪ್ರತ್ಯೇಕ ಎಸ್‌ಐಟಿಗಳನ್ನು ರಚನೆ ಮಾಡಿ 2023ರ ಆ.5ರಂದು ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಈ ಆದೇಶಗಳನ್ನು ಪ್ರಶ್ನಿಸಿ ಇದೇ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಗಳನ್ನು 2023ರ ಡಿ.7ರಂದು ವಿಚಾರಣೆ ನಡೆಸಿದ್ದ ನ್ಯಾ.ಎಂ. ನಾಗಪ್ರಸನ್ನ ಅವರ ಪೀಠ, ಎಸ್‌ಐಟಿಗಳ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಅರ್ಜಿಯ ಮುಂದಿನ ವಿಚಾರಣೆಯನ್ನು ಡಿ.19ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ :ವರ್ಗಾವಣೆ ಆದೇಶಕ್ಕೆ ಡೋಂಟ್ ಕೇರ್ ಎಂದ 44 ಇನ್​​ಸ್ಪೆಕ್ಟರ್​ಗಳಿಗೆ ಸಸ್ಪೆಂಡ್ ಭೀತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.