ETV Bharat / state

ಕೋರ್ಟ್‌ ಆದೇಶ ಪಾಲಿಸದ ತಹಶೀಲ್ದಾರ್ ವಿರುದ್ಧ ದೋಷಾರೋಪ ನಿಗದಿಗೆ ತೀರ್ಮಾನ

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ತಹಶೀಲ್ದಾರ್​ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದ ದೋಷಾರೋಪ ನಿಗದಿಪಡಿಸಲು ಹೈಕೋರ್ಟ್ ತೀರ್ಮಾನಿಸಿದೆ.

high-court-decision-to-file-charges-against-tahsildar-for-disobeying-court-orders
ನ್ಯಾಯಾಲಯದ ಆದೇಶ ಪಾಲಿಸದ ತಹಶೀಲ್ದಾರ್ ವಿರುದ್ಧ ದೋಷಾರೋಪ ನಿಗದಿಗೆ ಹೈಕೋರ್ಟ್ ತೀರ್ಮಾನ
author img

By

Published : Aug 11, 2023, 10:02 PM IST

Updated : Aug 11, 2023, 11:00 PM IST

ಬೆಂಗಳೂರು: ನ್ಯಾಯಾಲಯದ ಆದೇಶವಿದ್ದರೂ ಜಮೀನು ಮಾಲೀಕರಿಗೆ ಸಾಗುವಳಿ ಚೀಟಿ ಮಂಜೂರು ಮಾಡಲು ವಿಳಂಬ ಮಾಡಿರುವ ಬೆಂಗಳೂರು ಉತ್ತರ ಹೆಚ್ಚುವರಿ ತಾಲೂಕಿನ (ಪ್ರಸ್ತುತ ಯಲಹಂಕ ತಾಲೂಕು) ತಹಶೀಲ್ದಾರ್​ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದ ದೋಷಾರೋಪ ನಿಗದಿಪಡಿಸಲು ಹೈಕೋರ್ಟ್ ನಿರ್ಧರಿಸಿದೆ.

ಸಾಗುವಳಿ ಚೀಟಿ ನೀಡುವಂತೆ ನ್ಯಾಯಾಲಯದ ನೀಡಿದ್ದ ಆದೇಶ ಪಾಲಿಸದ ತಹಶೀಲ್ದಾರ್​ ವಿರುದ್ಧ ತರಹುಣಸೆ ಬಳಿಯ ಅಗ್ರಹಾರ ನಿವಾಸಿ ದೊಡ್ಡಣ್ಣ ಎಂಬವರು ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಹಾಗೂ ನ್ಯಾ. ಎಂ.ಜಿ.ಎಸ್.ಕಮಾಲ್ ಅವರಿದ್ದ ವಿಭಾಗೀಯ ಪೀಠ, ತಹಶೀಲ್ದಾರ್ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ, ಸಾಗುವಳಿ ಚೀಟಿ ಮಂಜೂರು ಮಾಡುವಂತೆ ಕೋರಿ ಅರ್ಜಿದಾರರು ಮನವಿ ಸಲ್ಲಿಸಿದ್ದರೆ, ಅದನ್ನು ಕಾನೂನು ರೀತಿ ಪರಿಶೀಲಿಸಿ ತಹಶೀಲ್ದಾರರು ಕ್ರಮ ಕೈಗೊಳ್ಳಲಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ತಳ್ಳಿ ಹಾಕಿದ ನ್ಯಾಯಪೀಠ, 2005ರಲ್ಲಿ ಸಾಗುವಳಿ ಚೀಟಿ ನೀಡುವ ತೀರ್ಮಾನವಾಗಿದೆ. ಅರ್ಜಿದಾರರು ತಹಶೀಲ್ದಾರರಿಗೆ ಮನವಿಯನ್ನೂ ಕೊಟ್ಟಿದ್ದಾರೆ.

ಸಾಗುವಳಿ ಚೀಟಿ ನೀಡಲು ಸಾಧ್ಯವಿಲ್ಲ ಎಂಬ ತಹಶೀಲ್ದಾರರ ಹಿಂಬರಹವನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ರದ್ದುಪಡಿಸಿ, ಎರಡು ತಿಂಗಳೊಳಗೆ ಸಾಗುವಳಿ ಚೀಟಿ ಮಂಜೂರು ಮಾಡಬೇಕು ಎಂದು 2022ರ ಸೆ.28ರಂದು ನಿರ್ದೇಶನ ನೀಡಿದೆ. ಆದರೆ, ಆಧಾರರಹಿತ ತಾಂತ್ರಿಕ ನೆಪಗಳನ್ನು ಮುಂದಿಟ್ಟುಕೊಂಡು ತಹಶೀಲ್ದಾರ್​ ಸಾಗುವಳಿ ಚೀಟಿ ನೀಡಲು ವಿಳಂಬ ಮಾಡಿದ್ದಾರೆ ಎಂದು ನ್ಯಾಯಪೀಠ ತಿಳಿಸಿತು.

ಇದನ್ನೂ ಓದಿ: High Court news: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬಸ್ಥರ ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ

ಸಾಮಾನ್ಯವಾಗಿ ಅಧಿಕಾರಿಗಳ ಇಂತಹ ಬೇಜವಾಬ್ದಾರಿ ವರ್ತನೆಯಿಂದ ಸಾರ್ವಜನಿಕರು ಕೋರ್ಟ್ ಮೊರೆ ಹೋಗುತ್ತಾರೆ. ಸುಲಭವಾಗಿ ಇತ್ಯರ್ಥವಾಗಬಹುದಾದ ಇಂತಹ ಪ್ರಕರಣಗಳು ನ್ಯಾಯಾಲಯಕ್ಕೆ ಬರುವುದರಿಂದ ನ್ಯಾಯಾಲಯದ ಅಮೂಲ್ಯ ಸಮಯವೂ ಅಪವ್ಯಯ ಆಗುತ್ತದೆ. ಈ ಪ್ರಕರಣದಲ್ಲಿ ತಹಶೀಲ್ದಾರರಿಗೆ ನ್ಯಾಯಾಲಯದ ಆದೇಶದ ಬಗ್ಗೆ ಗಂಭೀರತೆ ಇಲ್ಲವಾಗಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಮುಂದಿನ ವಿಚಾರಣೆ ವೇಳೆ ತಹಶೀಲ್ದಾರ್​ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ದೋಷಾರೂಪಣೆ ನಿಗದಿಪಡಿಸಲಾಗುವುದು. ಆ ದಿನ ತಹಶೀಲ್ದಾರ ಅವರು ವಿಚಾರಣೆಗೆ ಖದ್ದು ಹಾಜರಾಗಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಎರಡು ವಾರಗಳ ಕಾಲ ಮುಂದೂಡಿತು.

ಇದನ್ನೂ ಓದಿ: ವಿಮೆ ತಿರಸ್ಕರಿಸಿದ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿಗೆ ₹5 ಲಕ್ಷ ದಂಡ

ಬಿಬಿಎಂಪಿಗೆ ಹೈಕೋರ್ಟ್​ ನಿರ್ದೇಶನ: ನಗರದಲ್ಲಿನ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ವಿಚಾರದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ಹಾಗೂ ರಾಜ್ಯ ಸರ್ಕಾರದ ಮೌನವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ, ಈ ಸಂಬಂಧ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದರ ಸಂಬಂಧ ಮುಂದಿನ ಮೂರು ವಾರಗಳಲ್ಲಿ ಹೊಸದಾಗಿ ಪರಿಷ್ಕೃತ ವರದಿ ಸಲ್ಲಿಸುವಂತೆ ಕೋರ್ಟ್​ ನಿರ್ದೇಶನ ನೀಡಿತ್ತು.

ನಗರದಲ್ಲಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಲೆಟ್ಜ್‌ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಾಲ್ ಅವರಿದ್ದ ವಿಭಾಗೀಯ ಪೀಠವು ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತ್ತು.

Last Updated : Aug 11, 2023, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.