ETV Bharat / state

ಸಾರಿಗೆ ನಿಗಮದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ - ವಂಚನೆ ಪ್ರಕರಣದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಸಾರಿಗೆ ನಿಗಮದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದ ಆರೋಪಿಗೆ ಹೈಕೋರ್ಟ್​ ಜಾಮೀನು ನಿರಾಕರಿಸಿದೆ.

High Court denied bail, High Court denied bail to accused in fraud case, Karnataka high court news, ಜಾಮೀನು ನಿರಾಕರಿಸಿದ ಹೈಕೋರ್ಟ್, ವಂಚನೆ ಪ್ರಕರಣದ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್, ಕರ್ನಾಟಕ ಹೈಕೋರ್ಟ್​ ಸುದ್ದಿ
ಸಾರಿಗೆ ನಿಗಮದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ
author img

By

Published : Jan 26, 2022, 9:40 AM IST

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (ಕೆಎಸ್‌ಆರ್‌ಟಿಸಿ) ಕೆಲಸ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಎಸಗಿದ ಪ್ರಕರಣದ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.

ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ನಿವಾಸಿ ಮಂಜುನಾಥ್ ಬಿಲ್ಲಾ ನಾಯಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಚ್.ಪಿ ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಓದಿ: Republic Day: ಲಡಾಖ್​ನಲ್ಲಿ ಕೊರೆಯುವ ಚಳಿಯಲ್ಲಿ ಐಟಿಬಿಪಿಯಿಂದ ಗಣರಾಜ್ಯೋತ್ಸವ ಆಚರಣೆ

ಅರ್ಜಿದಾರನ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ದೂರುದಾರ ಅರಗಿಶೆಟ್ಟಿ ಅಷ್ಟೇ ಅಲ್ಲದೆ ಅನೇಕರಿಗೆ ಉದ್ಯೋಗದ ಆಮಿಷವೊಡ್ಡಿ ಹಣ ಪಡೆದು ವಂಚಿಸಿರುವ ಆರೋಪಗಳಿವೆ. ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟು ಜಾಮೀನು ಕೋರಿಕೆಯನ್ನು ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ: ಬಿಕಾಂ ಪದವೀಧರನಾಗಿರುವ ಬಾಗಲಕೋಟೆ ನಿವಾಸಿ ಅರಗಿಶೆಟ್ಟಿ ಬೆಂಗಳೂರಿನ ಜಲಮಂಡಳಿಯಲ್ಲಿ ಕೆಲಸ ಮಾಡುತ್ತಿರುವ ಸೋದರನ್ನು ಕಾಣಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮಂಜುನಾಥ ಬಿಲ್ಲಾ ನಾಯಕ್ ತನ್ನನ್ನು ಪರಿಚಯಿಸಿಕೊಂಡಿದ್ದರು. ಮತ್ತೊಮ್ಮೆ ಸಿಕ್ಕಾಗ ತನಗೆ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಪರಿಚಯ ಇದ್ದು, ಲಂಚ ನೀಡಿದರೆ ಸಂಚಾರಿ ನಿರೀಕ್ಷಕ ಹುದ್ದೆ ಕೊಡಿಸುವುದಾಗಿ ಆಮಿಷಿವೊಡ್ಡಿದ್ದರು.

ಓದಿ: ಬ್ರಿಟಿಷರಿಗೆ ನಡುಕ ಹುಟ್ಟಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ... ಇಂದು ಬಲಿದಾನ ದಿನ

ಅದರಂತೆ, 2018ರ ನವೆಂಬರ್‌ನಲ್ಲಿ ಬೆಂಗಳೂರಿನ ಮಧು ಹೋಟೆಲ್‌ನಲ್ಲಿ ಅರಗಿಶೆಟ್ಟಿ ಹಾಗೂ ಮಂಜುನಾಥ್ ಭೇಟಿಯಾಗಿ ಚರ್ಚಿಸಿದಾಗ 12 ಲಕ್ಷ ರೂಪಾಯಿ ಲಂಚಕ್ಕೆ ಆರೋಪಿ ಬೇಡಿಕೆಯಿಟ್ಟದ್ದರು. ಬಳಿಕ, ಅರಗಿಶೆಟ್ಟಿ ಆರ್‌ಟಿಜಿಎಸ್ ಮೂಲಕ 11 ಲಕ್ಷ ರೂಪಾಯಿ ನೀಡಿದ್ದರು. ಕೆಲಸವನ್ನೂ ಕೊಡಿಸದೇ, ಹಣವನ್ನೂ ಹಿಂದಿರುಗಿಸದೇ ಇದ್ದಾಗ ಅರಗಿಶೆಟ್ಟಿ ಮಾಗಡಿ ಠಾಣೆ ಪೊಲೀಸರಿಗೆ 2021ರ ಅಕ್ಟೋಬರ್‌ನಲ್ಲಿ ದೂರು ನೀಡಿದ್ದರು.

ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿ ಮಂಜುನಾಥ್ ಅವರನ್ನು ಅಕ್ಟೋಬರ್ 5ರಂದು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 2021ರ ನವೆಂಬರ್ 23ರಂದು ನಗರದ 67ನೇ ಹೆಚ್ಚುವರಿ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆ ಆರೋಪಿ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.