ETV Bharat / state

ಕಲ್ಲು ತೂರಿದ ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ - ಹುಬ್ಬಳ್ಳಿಯಲ್ಲಿ ಪೋಲಿಸರ ಮೇಲೆ ಕಲ್ಲು ತೂರಾಟ

ಹುಬ್ಬಳ್ಳಿಯ ಅರಳಿಕಟ್ಟಿ ಕಾಲೋನಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಿದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

High Court denies bail for accused
ಪೊಲೀಸರ ಮೇಲೆ ಕಲ್ಲು ತೂರಿದ ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
author img

By

Published : May 4, 2020, 7:51 PM IST

ಬೆಂಗಳೂರು: ಹುಬ್ಬಳ್ಳಿಯ ಅರಳಿಕಟ್ಟಿ ಕಾಲೊನಿಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಮಸೀದಿಗೆ ಹೋಗುತ್ತಿದ್ದವರನ್ನು ತಡೆಯಲು ಮುಂದಾದ ಪೊಲೀಸರ ಮೇಲೆ ಕಲ್ಲು ತೂರಿದ 23 ಆರೋಪಿಗಳ ಪೈಕಿ 6 ಮಹಿಳೆಯರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್ ಉಳಿದ 17 ಆರೋಪಿಗಳಿಗೆ ಜಾಮೀನು ತಿರಸ್ಕರಿಸಿದೆ.

ಜಾಮೀನು ಕೋರಿ ಪ್ರಕರಣದ ಆರೋಪಿಗಳಾದ ಶಬಾನಾ ಎಂ. ರೋಣ ಹಾಗೂ ಇತರ 22 ಮಂದಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆರೋಪಿಗಳು ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲದೇ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳ ಈ ವರ್ತನೆ ಸಮರ್ಥನೀಯವಲ್ಲ. ಪೊಲೀಸ್​​​​ ವಿಚಾರಣೆ ಪೂರ್ಣಗೊಳ್ಳುವವರೆಗೆ ಆರೋಪಿಗಳು ಜಾಮೀನು ಪಡೆದುಕೊಳ್ಳಲು ಅರ್ಹರಲ್ಲ. ಆದರೆ, ಮೊದಲ 6 ಆರೋಪಿಗಳು ಮಹಿಳೆಯರಾಗಿದ್ದು, ಅವರಿಗೆ ಚಿಕ್ಕ ಮಕ್ಕಳು ಇವೆ ಎಂಬ ಕಾರಣಕ್ಕಾಗಿ ಅವರಿಗೆ ವಿನಾಯಿತಿ ನೀಡಬಹುದು ಎಂದು ಅಭಿಪ್ರಾಯಪಟ್ಟು, 6 ಮಹಿಳೆಯರಿಗೆ ಷರತ್ತು ಬದ್ಧ ಜಾಮೀನು ನೀಡಿ, ಉಳಿದ ಆರೋಪಿಗಳ ಅರ್ಜಿಗಳನ್ನು ವಜಾಗೊಳಿಸಿದೆ.

ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿರುವ ಮಹಿಳೆಯರ ಪೈಕಿ ಕೆಲವರ ಹೆಸರು ಎಫ್‍ಐಆರ್ ನಲ್ಲಿ ಇಲ್ಲ. ಪ್ರಾರ್ಥನೆಗೆ ಎಂದು ಹೊರಬಂದಿದ್ದರು. ಎಲ್ಲ ಅರ್ಜಿದಾರರ ವಿರುದ್ಧ ಪೊಲೀಸರು ಸುಳ್ಳು ದೂರುಗಳನ್ನು ದಾಖಲಿಸಿಕೊಂಡಿದ್ದಾರೆ ಎಂದರು. ಇದಕ್ಕೆ, ಸರ್ಕಾರದ ಪರ ವಕೀಲರು ಆಕ್ಷೇಪಿಸಿ, ಕಲ್ಲು ತೂರಾಟದಲ್ಲಿ ಐವರು ಪೊಲೀಸರು ಗಾಯಗೊಂಡ ಬಗ್ಗೆ ಪ್ರಮಾಣ ಪತ್ರಗಳನ್ನು ಪೀಠಕ್ಕೆ ಒದಗಿಸಿದರು. ಇದನ್ನು ಪರಿಗಣಿಸಿದ ಪೀಠ ಮಹಿಳೆಯರನ್ನು ಹೊರತುಪಡಿಸಿ ಉಳಿದವರಿಗೆ ಜಾಮೀನು ನಿರಾಕರಿಸಿತು.

ಕಳೆದ ಏಪ್ರಿಲ್ 3 ರಂದು ಹುಬ್ಬಳ್ಳಿಯ ಮಂಟೂರು ರಸ್ತೆಯ ಅರಳಿಕಟ್ಟಿ ಕಾಲೋನಿಯ ಕೆಲವರು ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಮುಂದಾಗಿದ್ದರು. ಇದನ್ನು ತಡೆಯಲು ಹೋದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಜಾಮೀನು ಪಡೆದಿರುವ 6 ಮಹಿಳೆಯರು ತಲಾ 50 ಸಾವಿರ ರೂಪಾಯಿ ಮೊತ್ತದ ಬಾಂಡ್ ಒದಗಿಸಬೇಕು. ಜತೆಗೆ ಸರ್ಕಾರ ಲಾಕ್‍ಡೌನ್ ಆದೇಶ ವಾಪಸ್ ಪಡೆಯುವವರೆಗೆ ಈ ಮಹಿಳೆಯರು ತಮ್ಮ ಮನೆಯಿಂದ ಹೊರಬಾರದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.