ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಸುದೀರ್ಘ ವಾದ ಪ್ರತಿವಾದ ಆಲಿಸಿದ ಪೀಠ, ತೀರ್ಪು ಕಾಯ್ದಿಸಿರಿಸಿರುವುದಾಗಿ ತಿಳಿಸಿತು. ಕುಲಕರ್ಣಿ ಪರ ವಕೀಲ ಶಶಿಕಿರಣ್ ಶೆಟ್ಟಿ ವಾದಿಸಿದರೆ, ಸಿಬಿಐ ಪರ ಪ್ರಸನ್ನ ಕುಮಾರ್ ವಾದ ಮಂಡಿಸಿದರು.
ಇದನ್ನೂ ಓದಿ: ಹಣ ಪಡೆದು ಕೋವಿಡ್ ಪಾಸಿಟಿವ್ ವರದಿ ನೀಡ್ತಿದ್ದ ಇಬ್ಬರು ವಜಾ; ಎಫ್‌ಐಆರ್ ದಾಖಲು
ಯೋಗೇಶ್ ಗೌಡ ಹತ್ಯೆಗೆ ಸುಪಾರಿ ನೀಡಿದ್ದ ಹಾಗೂ ಸಾಕ್ಷ್ಯ ನಾಶಪಡಿಸಿದ ಆರೋಪದಡಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ವಿನಯ್ ಕುಲಕರ್ಣಿ ಕಳೆದ ಐದು ತಿಂಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.