ETV Bharat / state

ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸರ್ಕಾರ ಎಚ್ಚರಿಕೆ ವಹಿಸಬೇಕು: ಹೈಕೋರ್ಟ್ - ಈಟಿವಿ ಭಾರತ್​ ಕನ್ನಡ ನ್ಯೂಸ್

ಗುತ್ತಿಗೆದಾರರ ಭದ್ರತಾ ಠೇವಣಿ ಹಿಂದಿರುಗಿಸಲು ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿ ಆದೇಶಿಸಿದೆ.

high-court
ಹೈಕೋರ್ಟ್
author img

By

Published : Jun 7, 2023, 5:29 PM IST

ಬೆಂಗಳೂರು : ಸಾರ್ವಜನಿಕ ಹಣವನ್ನು ಬಳಕೆ ಮಾಡಿ ನಿರ್ಮಿಸುವ ಯಾವುದೇ ಯೋಜನೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಎಚ್ಚರಿಕೆ ವಹಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕಳಪೆ ಗುಣಮಟ್ಟದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಮಾಡಿದ್ದ ಗುತ್ತಿಗೆದಾರರ ಭದ್ರತಾ ಠೇವಣಿ ಹಿಂದಿರುಗಿಸಲು ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್​ ಆದೇಶಿಸಿದೆ.

ಮಂಡ್ಯ ಮತ್ತು ಚಾಮರಾಜನರದಲ್ಲಿ ಪೊಲೀಸ್ ವಸತಿ ಯೋಜನೆಯಡಿ ಕಳಪೆ ಗುಣಮಟ್ಟದ ಸಮುಚ್ಚಯ ನಿರ್ಮಾಣ ಮಾಡಿದ್ದ ಆರೋಪ ಹೊತ್ತಿರುವ ಪಿಜಿ ಶೆಟ್ಟಿ ಕನ್ಸಸ್ಟ್ರಕ್ಷನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಭದ್ರತಾ ಠೇವಣಿಗೆ ಬಿಡುಗಡೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, ಗುತ್ತಿಗೆದಾರರು ಕಳಪೆ ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡಿದೆ. ಈ ಬಗ್ಗೆ ದೂರು ದಾಖಲಾಗಿದ್ದರೂ ಬಿಲ್‌ಗಳನ್ನು ಮಂಜೂರು ಮಾಡಿರುವ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಮಂಡಳಿಯ ಎಂಜನಿಯರ್‌ಗಳ ಕಾರ್ಯಕ್ಕೆ ಅಚ್ಚರಿ ವ್ಯಕ್ತಪಡಿಸಿದೆ.

ಜೊತೆಗೆ, ಇದು ಸರ್ಕಾರಿ ಯೋಜನೆಯಾಗಿದ್ದು, ಇದಕ್ಕೆ ಸಾರ್ವಜನಿಕರ ಹಣ ಬಳಕೆಯಾಗಿದೆ. ಹೀಗಾಗಿ ಸಾರ್ವಜನಿಕರ ಹಣದಲ್ಲಿ ನಿರ್ಮಾಣವಾಗುವ ಯೋಜನೆಗಳು ಕಳಪೆಯಾಗಿದ್ದಲ್ಲಿ ಸಹಿಸಲಾಗುವುದಿಲ್ಲ. ಅಲ್ಲದೆ, ಸಾರ್ವಜನಿಕ ಹಣವನ್ನು ಒಳಗೊಂಡಿರುವ ಯೋಜನೆಗಳನ್ನು ಮಾಡುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಗುಣಮಟ್ಟ ಕಾಯ್ದುಕೊಳ್ಳವಂತೆ ಎಚ್ಚರಿಕೆಯಿಂದ ನಿರ್ವಹಣೆ ಮಾಡುವಂತೆ ನೋಡಿಕೊಳ್ಳಬೇಕು. ಗುಣಮಟ್ಟ ಪರಿಶೀಲಿಸದೆ ಬಿಲ್ ಬಿಡುಗಡೆ ಮಾಡುವುದು, ಕಳಪೆಯಿದ್ದರೂ ಅನುಮೋದನೆ ನೀಡುವ ಎಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ಪೀಠ ಸೂಚನೆ ನೀಡಿ ಅರ್ಜಿ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ ಏನು? : ಅರ್ಜಿದಾರ ಕಂಪೆನಿಯು ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ನಿಗಮದ ಅಡಿಯಲ್ಲಿ ಮಂಡ್ಯ ಮತ್ತು ಚಾಮರಾಜನಗರದಲ್ಲಿ 144 ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಸಂಬಂಧ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದಂತೆ ಕಾಮಗಾರಿ ಪ್ರಾರಂಭಕ್ಕೂ ಮುನ್ನ ನಿಗಮದಲ್ಲಿ ಕಂಪೆನಿ 1,15,13,500 ಭದ್ರತಾ ಠೇವಣಿ ಮಾಡಿತ್ತು. ಈ ನಡುವೆ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಬಿಲ್‌ಗಳನ್ನು ನಿಗಮ ಪಾವತಿ ಮಾಡಿತ್ತು. ಆದರೆ, ಕಾಮಗಾರಿ ಕಳಪೆಯಿದೆ ಎಂಬ ದೂರು ಬಂದ ತಕ್ಷಣ ಕಂಪೆನಿ ಭದ್ರತಾ ಠೇವಣಿ ಹಿಂಪಡೆಯುವುದಕ್ಕೆ ತಡೆ ಹಿಡಿದಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು, ಸಂಪೂರ್ಣ ಮೊತ್ತವನ್ನು ವಾರ್ಷಿಕ ಶೇ. 15 ರಂತೆ ಬಡ್ಡಿಯೊಂದಿಗೆ ಬಿಡುಗಡೆ ಮಾಡಬೇಕು ಎಂದು ಕೋರಿದ್ದರು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ನಿಗಮದ ಒಪ್ಪಂದದಂತೆ ವಸತಿ ಸಮುಚ್ಚಯದ ಕಾಮಗಾರಿ ಪೂರ್ಣಗೊಂಡಿದ್ದು, ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ ಬಿಲ್ ಸಹ ಪಾವತಿಸಲಾಗಿದೆ. ಆದರೆ, ಕಾಮಗಾರಿಯ ಮೂಲಸೌಲಭ್ಯಗಳಲ್ಲಿ ಸಣ್ಣ ದೋಷಗಳಿವೆ ಎಂಬ ಕಾರಣ ನೀಡಿ ನಿಗಮಕ್ಕೆ ನೀಡಿದ್ದ ಭದ್ರತಾ ಠೇವಣಿ ಹಿಂಪಡೆಯುವುದಕ್ಕೆ ಅವಕಾಶ ನೀಡುತ್ತಿಲ್ಲ. ಇದು ಸಂವಿಧಾನದ ಪರಿಚ್ಛೇದ 12ಕ್ಕೆ ವಿರುದ್ಧವಾಗಿದ್ದು, ತಕ್ಷಣ ಠೇವಣಿಗೆ ಬಡ್ಡಿಯೊಂದಿಗೆ ಬಿಡುಗಡೆ ಮಾಡುವುದಕ್ಕೆ ಸೂಚನೆ ನೀಡಬೇಕು ಎಂದು ವಾದ ಮಂಡಿಸಿದ್ದರು.

ನಿಗಮದ ಪರ ವಾದ ಮಂಡಿಸಿದ ವಕೀಲರು, ಅರ್ಜಿದಾರ ಸಂಸ್ಥೆ ಕಳಪೆ ಗುಣಮಟ್ಟದ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಮಳೆ ಬಂದರೆ ಇಡೀ ಕಟ್ಟಡ ಸೋರಿಕೆಯಾಗುತ್ತದೆ. ಕಟ್ಟಡದ ಬಾಗಿಲುಗಳನ್ನು ಗೆದ್ದಲು ಹುಳುಗಳು ತಿನ್ನುತ್ತಿವೆ. ಮನುಷ್ಯರು ವಾಸಿಸಲು ಯೋಗ್ಯವಿಲ್ಲದಂತೆ ಕಟ್ಟಡ ನಿರ್ಮಾಣ ಮಾಡಿದ್ದು, ಭದ್ರತಾ ಠೇವಣಿ ಪಾವತಿಸಿರುವ ಹಣವನ್ನು ಹಿಂದಿರುಗಿಸುವುದಕ್ಕೆ ಅವಕಾಶವಿಲ್ಲ ಎಂದು ವಾದ ಮಂಡಿಸಿದರು. ಈ ವೇಳೆ ಕಳಪೆ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಛಾಯಾಚಿತ್ರಗಳನ್ನು ಸಲ್ಲಿಸಿದ್ದರು.

ಒಂದು ಚಿತ್ರ ಸಾವಿರ ಪದಗಳಿಗೆ ಸಮ : ಛಾಯಾ ಚಿತ್ರ ಪರಿಶೀಲಿಸಿದ ನ್ಯಾಯಪೀಠ, ಕಾಮಗಾರಿ ಹೇಗೆ ನಡೆದಿದೆ ಎಂಬುದು ಗೊತ್ತಾಗಲಿದೆ. ಇಡೀ ಕಟ್ಟಡದಲ್ಲಿ ನೀರು ನಿಂತಿರುವುದು, ಗೋಡೆಗಳು ಬಿರುಕು ಬಿಟ್ಟಿರುವುದು, ಸೋಲಾರ್ ಪ್ಯಾನಲ್‌ಗಳಲ್ಲಿ ನೀರು ಸೋರಿಕೆ, ಬಾಗಿಲುಗಳಿಗೆ ಕಳಪೆ ಗುಣಮಟ್ಟದ ಮರ ಬಳಕೆ ಮಾಡಿದ್ದು, ಈಗಾಗಲೇ ಗೆದ್ದಲು ತಿಂದಿರುವುದು ಗೊತ್ತಾಗಲಿದೆ. ಒಂದು ಛಾಯಾಚಿತ್ರ ಸಾವಿರ ಪದಗಳಿಗೆ ಸಮಾನ ಎಂಬುದು ಈ ಪ್ರಕರಣದಲ್ಲಿ ಸ್ಪಷ್ಟವಾಗಲಿದೆ ಎಂದು ತಿಳಿಸಿದೆ.

ಅಲ್ಲದೆ, ಅರ್ಜಿದಾರರ ಸಂಸ್ಥೆ ನಿಗಮದೊಂದಿಗಿನ ಒಪ್ಪಂದವನ್ನು ಲಘುವಾಗಿ ಪರಿಗಣಿಸಿದೆ. ಕಳಪೆ ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡಿರುವುದಕ್ಕೆ ದಂಡ ವಿಧಿಸಬಹುದಾಗಿದೆ. ಇದೇ ಕಾರಣದಿಂದ ಮುಂಗಡ ಠೇವಣಿಯನ್ನು ತಡೆಯಿಡಿದಿದೆ. ಇದರಲ್ಲಿ ಯಾವುದೇ ಕಾನೂನು ದೋಷ ಕಂಡು ಬರುತ್ತಿಲ್ಲ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ : ಉದ್ಯೋಗ ಸ್ಥಳ, ಶೈಕ್ಷಣಿಕ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಕೋರಿದ್ದ ಅರ್ಜಿ ಇತ್ಯರ್ಥ ಪಡಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.