ETV Bharat / state

ಎಸಿಬಿ ಸೇರಿ ಉನ್ನತ ಹುದ್ದೆಗಳಿಗೆ ಕಳಂಕಿತ ಅಧಿಕಾರಿಗಳನ್ನು ನೇಮಿಸದಂತೆ ಹೈಕೋರ್ಟ್ ನಿರ್ದೇಶನ - ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ

ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತಡೆಯಲು ರಚನೆಯಾಗಿರುವ ಎಸಿಬಿ ಸೇರಿದಂತೆ ಪ್ರಮುಖ ಸಂಸ್ಥೆಗಳ ಉನ್ನತ ಹುದ್ದೆಗಳಿಗೆ ಕಳಂಕಿತ ಅಧಿಕಾರಿಗಳನ್ನು ನೇಮಕ ಮಾಡಬಾರದೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

high court direction to acb
ಎಸಿಬಿ ಸೇರಿ ಉನ್ನತ ಹುದ್ದೆಗೆ ಕಳಂಕಿತ ಅಧಿಕಾರಿಗಳ ನೇಮಕ ಮಾಡದಿರಲು ಹೈಕೋರ್ಟ್ ನಿರ್ದೇಶನ
author img

By

Published : Jul 12, 2022, 7:23 AM IST

ಬೆಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಭೂ ವ್ಯಾಜ್ಯ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯ ಜಾಮೀನು ಅರ್ಜಿ ಬಗ್ಗೆ ಸೋಮವಾರ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್​ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರು, ಭ್ರಷ್ಟಾಚಾರ ನಿಗ್ರಹ ದಳದಂತಹ ಸಂಸ್ಥೆಗಳಿಗೆ ಮುಖ್ಯಸ್ಥರನ್ನು ನೇಮಕ ಮಾಡುವಾಗ ಕಳಂಕ ಇರುವಂತಹ ಅಧಿಕಾರಿಗಳನ್ನು ಪರಿಗಣಿಸಬಾರದೆಂದು ಸರಕಾರಕ್ಕೆ ಸೂಚಿಸಿದರು.

ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಮುಖ್ಯಸ್ಥರನ್ನು ನೇಮಿಸುವಾಗ ಸರ್ಕಾರವು ಸಂಬಂಧಪಟ್ಟ ಅಧಿಕಾರಿಯ ಪೂರ್ವಾಪರಗಳನ್ನು ವಿಚಾರಿಸಬೇಕು. ಎಸಿಬಿಗೆ ನೇಮಕವಾಗುವ ಅಧಿಕಾರಿ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಎಸಿಬಿ ಅಥವಾ ಲೋಕಾಯುಕ್ತ ತನಿಖೆ ನಡೆಯುತ್ತಿರಬಾರದು ಎಂದೂ ಸಹ ನ್ಯಾಯಾಲಯ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಡಳಿತ ಮತ್ತು ಸಿಬ್ಬಂದಿ ಸುದಾರಣಾ ಇಲಾಖೆ ಕಾರ್ಯದರ್ಶಿಗೆ ನಿರ್ದೇಶನಗಳನ್ನು ನೀಡಿದೆ.

ಎಸಿಬಿಯು ಭ್ರಷ್ಟಾಚಾರದ ಕೂಪವಾಗಿದೆ. ಭ್ರಷ್ಠಾಚಾರ ನಿಗ್ರಹ ದಳ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಇತ್ತೀಚೆಗೆ ಎಸಿಬಿ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಚಾಟಿ ಬೀಸಿದ್ದರು.

ಇದನ್ನೂ ಓದಿ: ಎಂಟು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.