ETV Bharat / state

ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ - supreme court

ಶಿವರಾಮ ಕಾರಂತ ಬಡಾವಣೆಯಲ್ಲಿ ತನ್ನ ಅನುಮತಿ ಇಲ್ಲದೆ ನಿವೇಶನ ಹಂಚಿಕೆ ಮಾಡದಂತೆ ಹೈಕೋರ್ಟ್​ ತಿಳಿಸಿದೆ.

High Court direction on allotment of plots in Shivaram Karanta layout
ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಯತಾಸ್ಥಿತಿ ಕಾಯ್ದುಕೊಳ್ಳಿ: ಹೈಕೋರ್ಟ್
author img

By ETV Bharat Karnataka Team

Published : Jan 19, 2024, 7:24 AM IST

ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ(ಬಿಡಿಎ) ನಿವೇಶನ ಹಂಚಿಕೆಗೆ ಅಧಿಸೂಚನೆ ಹೊರಡಿಸಲು ಸಿದ್ಧಗೊಂಡಿರುವ ಬೆನ್ನಲ್ಲೇ ಬಡಾವಣೆ ನಿರ್ಮಾಣದ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಕೋರ್ಟ್ ಅನುಮತಿ ಇಲ್ಲದೆ ನಿವೇಶನ ಹಂಚಿಕೆಗೆ ಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಹಾಗೂ ಬಿಡಿಎಗೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಆದರೆ, ಬಡಾವಣೆ ಅಭಿವೃದ್ಧಿ ಕಾಮಗಾರಿ ಮುಂದುವರೆಸಬಹುದು ಎಂದು ತಿಳಿಸಿದೆ.

ಬಡಾವಣೆಯ ಸಮಸ್ಯೆಗಳನ್ನು ಪರಿಹರಿಸದೇ ಬಿಡಿಎಯಿಂದ ನಿವೇಶನ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವೇಶನ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಿ ಅಧಿಸೂಚನೆ ಹೊರಡಿಸದಂತೆ ಹೈಕೋರ್ಟ್​ ನಿರ್ಬಂಧ ವಿಧಿಸಿ ಆದೇಶಿಸಿದೆ.

ಶಿವರಾಮ ಕಾರಂತ ಬಡಾವಣೆಯ ದಾಖಲೆಗಳನ್ನು ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ನೇತೃತ್ವದ ಸಮಿತಿ ತನ್ನ ಬಳಿಯೇ ಇರಿಸಿಕೊಂಡಿದೆ. ಸುಪ್ರೀಂ ಕೋರ್ಟ್‌ನ ಆದೇಶದಂತೆ ಸಮಿತಿ ದಾಖಲೆಗಳನ್ನು ಬಿಡಿಎಗೆ ಹಸ್ತಾಂತರಿಸಿಲ್ಲ. ಹಾಗಾಗಿ ದಾಖಲೆಗಳಿರುವ ಕೊಠಡಿಯ ಬೀಗವೂ ಸಮಿತಿಯ ಬಳಿ ಇದೆ ಎಂದು ಬಿಡಿಎ ವಾದ ಮಂಡಿಸಿರುವ ಹಿನ್ನೆಲೆಯಲ್ಲಿ ಆ ಕೊಠಡಿಗೆ ಮತ್ತೊಂದು ಬೀಗ ಹಾಕಿ, ಅದನ್ನು ಹೈಕೋರ್ಟ್ ರಿಜಿಸ್ಟ್ರಾರ್‌ ಜನರಲ್ ಅವರಿಗೆ ಹಸ್ತಾಂತರಿಸುವಂತೆ ನ್ಯಾಯಪೀಠ ಬಿಡಿಎಗೆ ಸೂಚನೆ ನೀಡಿದೆ.

ವಿಚಾರಣೆ ವೇಳೆ ಬಿಡಿಎ ಪರ ಹಾಜರಿದ್ದ ನ್ಯಾಯವಾದಿ ಶಿವಪ್ರಸಾದ್ ಶಾಂತನಗೌಡರ್, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ದಾಖಲೆಗಳನ್ನು ಬಿಡಿಎಗೆ ಸಲ್ಲಿಸುವಂತೆ ಸಮಿತಿಯನ್ನು ಕೋರಲಾಗಿತ್ತು. ಆದರೆ ಸಮಿತಿ ದಾಖಲೆಗಳನ್ನು ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಿಲ್ಲ ಎಂದು ಹೇಳಿದರು.

ಅರ್ಜಿದಾರರ ಪರ ವಕೀಲರು, ಬಡಾವಣೆ ನಿರ್ಮಾಣ ಸಂಬಂಧ ಇನ್ನೂ ಹಲವು ದೂರುಗಳು ಬಾಕಿ ಇವೆ. ಹಲವರು ಹಕ್ಕು ಮಂಡಿಸಿದ್ದಾರೆ. ಬಡಾವಣೆ ನಿರ್ಮಾಣ ಕಾಮಗಾರಿ ಮುಂದುವರೆಸಬಹುದು. ಆದರೆ ಹಂಚಿಕೆ ಮಾಡಿದರೆ ಅರ್ಜಿದಾರರ ಹಕ್ಕು ಮೊಟಕಾಗಲಿದೆ. ಹಾಗಾಗಿ ನಿವೇಶನ ಹಂಚಿಕೆಗೆ ಅವಕಾಶ ನೀಡಬಾರದು ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ: 2700ಕ್ಕೂ ಹೆಚ್ಚು ಎಕರೆ ವ್ಯಾಪ್ತಿಯಲ್ಲಿ ಬಿಡಿಎ ಶಿವರಾಮ ಕಾರಂತ ಬಡಾವಣೆ ನಿರ್ಮಿಸುತ್ತಿದೆ. ಅದರಲ್ಲಿ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿದ್ದವು. ಆ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆದು, ಕೊನೆಗೆ ನ್ಯಾಯಾಲಯಗಳು ಭೂ ಸ್ವಾಧೀನವನ್ನು ಎತ್ತಿಹಿಡಿದಿದ್ದವು. ಆದರೆ ಪರಿಹಾರ ಹಂಚಿಕೆಯಲ್ಲಿ ತಾರತಮ್ಯ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿದ್ದವು.

ಆ ಹಿನ್ನೆಲೆಯಲ್ಲಿ ಹಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ, ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು 2020ರ ಡಿ.3ರಂದು ರಚನೆ ಮಾಡಿತ್ತು. ಆ ಸಮಿತಿ ನ್ಯಾಯಾಲಯದ ನಿರ್ದೇಶನದಂತೆ ಹಸ್ತಕ್ಷೇಪ ಮಾಡಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿತು. ಸಮಿತಿಯ ಅವಧಿ 2023ರ ಡಿ.31ಕ್ಕೆ ಮುಕ್ತಾಯವಾಗಿತ್ತು.

ಸಮಿತಿಯ ಅಧ್ಯಕ್ಷರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಯಾವ ಉದ್ದೇಶಕ್ಕಾಗಿ ಸಮಿತಿ ರಚನೆ ಮಾಡಲಾಗಿತ್ತೋ ಆ ಉದ್ದೇಶ ಬಹುತೇಕ ಈಡೇರಿರುವುದರಿಂದ ಸಮಿತಿ ಮುಂದುವರೆಸುವುದು ಅಗತ್ಯವಿಲ್ಲ. ಸಮಿತಿಯ ಅಧಿಕಾರಾವಧಿ ಮುಂದುವರಿಸದೆ, ವಿಸರ್ಜನೆ ಮಾಡಬಹುದು ಎಂದು ಹೇಳಿದ್ದರು.

ಆದರೆ ಸಮಿತಿಯ ಇತರೆ ಸದಸ್ಯರು, ಬಡಾವಣೆ ನಿರ್ಮಾಣ ಸಂಬಂಧ ಇನ್ನೂ ಹಲವು ದೂರುಗಳಿದ್ದು, ಅವುಗಳನ್ನು ಪರಿಹರಿಸಬೇಕಾಗಿರುವುದರಿಂದ ಸಮಿತಿಯ ಅಧಿಕಾರವಧಿ ಆರು ತಿಂಗಳು ವಿಸ್ತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಆದರೆ, ಸುಪ್ರೀಂ ಕೋರ್ಟ್ ಆ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಿ ಅದೇ ಸಮಿತಿಯ ಮುಂದುವರಿಕೆ ಸೇರಿದಂತೆ ಎಲ್ಲಾ ಅಂಶಗಳ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸೂಚನೆ ನೀಡಿತ್ತು. ಅದರಂತೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹೊಸದಾಗಿ ವಿಭಾಗೀಯ ಪೀಠ ರಚನೆ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.