ETV Bharat / state

ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು : ಸುಪ್ರೀಂ ಆದೇಶ ಪಾಲನೆ ವರದಿ ಸಲ್ಲಿಸಲು ಸರ್ಕಾರಕ್ಕೆ ತಾಕೀತು - ಸುಪ್ರೀಂ ಆದೇಶ ಪಾಲನೆ ವರದಿ ಸಲ್ಲಿಸಲು ಸರ್ಕಾರಕ್ಕೆ ತಾಕೀತು

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರೊಬ್ಬರ ಪರ ವಕೀಲರು ವಾದಿಸಿ, ಸರ್ಕಾರ ಹಾಗೂ ಬಿಬಿಎಂಪಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಲು ಇಲ್ಲದ ನೆಪಗಳನ್ನೇ ಹುಡುಕುತ್ತಿದೆ. ಇದೀಗ ಕೊರೊನಾ ಕಾರಣ ಮುಂದಿಟ್ಟುಕೊಂಡು ಕಾಲಹರಣ ಮಾಡುತ್ತಿವೆ ಎಂದು ಆರೋಪಿಸಿದರು..

High Court
High Court
author img

By

Published : Apr 17, 2021, 7:15 PM IST

ಬೆಂಗಳೂರು : ಸಾರ್ವಜನಿಕ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಿರುವ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ರಸ್ತೆ, ಉದ್ಯಾನ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು 6 ವಾರಗಳಲ್ಲಿ ತೆರವು ಮಾಡುವಂತೆ 2010ರ ಫೆ.16ರಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿತ್ತು. ಈ ನಿರ್ದೇಶನದ ಅನುಸಾರ ಸರ್ಕಾರ ಕೈಗೊಂಡ ಹಾಗೂ ಕೈಗೊಳ್ಳಲಿರುವ ಕ್ರಮಗಳ ಕುರಿತು ಮುಖ್ಯ ಕಾರ್ಯದರ್ಶಿ ಮುಂದಿನ ಆರು ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು.

ಅಲ್ಲದೇ, ಸರ್ಕಾರಿ ಜಾಗಗಳಲ್ಲಿ ನಿರ್ಮಿಸಿರುವ ಕಟ್ಟಡಗಳೂ ಸೇರಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ತಂಡ ರಚಿಸಬೇಕು. ಹಾಗೆಯೇ, ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ವ್ಯಾಪಕ ಪ್ರಚಾರ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರೊಬ್ಬರ ಪರ ವಕೀಲರು ವಾದಿಸಿ, ಸರ್ಕಾರ ಹಾಗೂ ಬಿಬಿಎಂಪಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಲು ಇಲ್ಲದ ನೆಪಗಳನ್ನೇ ಹುಡುಕುತ್ತಿದೆ. ಇದೀಗ ಕೊರೊನಾ ಕಾರಣ ಮುಂದಿಟ್ಟುಕೊಂಡು ಕಾಲಹರಣ ಮಾಡುತ್ತಿವೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದೆ. ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದನ್ನು ಕೋರ್ಟ್ ಗಮನಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.