ಬೆಂಗಳೂರು: ರಾಜಧಾನಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ನಗರವಾಸಿಗಳ ಸಮಸ್ಯೆ ಪರಿಹರಿಸಲು ತಕ್ಷಣವೇ ವಾರ್ಡ್‌ವಾರು ಕುಂದುಕೊರತೆ ಘಟಕವನ್ನು ತೆರೆಯುವಂತೆ ಬಿಬಿಎಂಪಿಗೆ ಹೈಕೋರ್ಟ್ ತಿಳಿಸಿದೆ.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಸೇರಿ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ಪೀಠ, ಪ್ರತಿ ವಾರ್ಡ್‌ನ ಎಂಜಿನಿಯರ್‌ಗಳು ಆಯಾ ವಾರ್ಡ್ ನಿವಾಸಿಗಳ ಕುಂದುಕೊರತೆ ಆಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
2022 ರ ಜುಲೈ 26ರ ನಂತರ ಈವರಗೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಿರುವುದಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಇದನ್ನೂ ಓದಿ: ಬೆಂಗಳೂರು: ಮಳೆ ನಿಂತರೂ ಲೇಔಟ್ಗಳಲ್ಲಿ ಕಡಿಮೆ ಆಗದ ನೀರು, ಜನರ ಪರದಾಟ