ETV Bharat / state

ವಿಚ್ಚೇದನ ಪ್ರಕರಣಗಳನ್ನು ಒಂದು ವರ್ಷದಲ್ಲಿ ಇತ್ಯರ್ಥಪಡಿಸಲು ಹೈಕೋರ್ಟ್ ನಿರ್ದೇಶನ - ಹೈಕೋರ್ಟ್

ತನ್ನ ವಿವಾಹ ವಿಚ್ಚೇದನ ಅರ್ಜಿಯನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಎನ್ ರಾಜೀವ್ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

High court
ಹೈಕೋರ್ಟ್
author img

By

Published : Jul 27, 2023, 9:03 PM IST

ಬೆಂಗಳೂರು:ವಿವಾಹ ವಿಚ್ಛೇದನ ಸೇರಿದಂತೆ ವೈವಾಹಿಕ ಪ್ರಕರಣಗಳ ವಿಲೇವಾರಿಗೆ ವಿಳಂಬವಾಗದಂತೆ ಗರಿಷ್ಠ ಒಂದು ವರ್ಷದ ಮಿತಿಯಲ್ಲಿ ಇತ್ಯರ್ಥ ಪಡಿಸಲು ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ತನ್ನ ವಿವಾಹ ವಿಚ್ಚೇದನ ಅರ್ಜಿಯನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಎನ್ ರಾಜೀವ್ ಎಂಬುವರು ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

ಮನುಷ್ಯ ಜೀವನದ ಅಲ್ಪಾವಧಿ ಗಮನದಲ್ಲಿಟ್ಟುಕೊಂಡು ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ಯುದ್ದೋಪಾದಿಯಲ್ಲಿ ಕೈಗೊಳ್ಳಬೇಕಿದೆ. ಈ ರೀತಿ ಕೌಟುಂಬಿಕ ಪ್ರಕರಣಗಳು ವಿಲೇವಾರಿಯಲ್ಲಿ ವಿಳಂಬವಾದಲ್ಲಿ ಎರಡೂ ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪೀಠ ತಿಳಿಸಿದೆ.

ಲೈಫ್ ಈಸ್ ಟೂ ಶಾರ್ಟ್ ಟು ಬಿ ಲಿಟ್ಲ್ (ಬದುಕು ತೀರಾ ಚಿಕ್ಕದು) ಎಂಬ ಆಂಗ್ಲ ಇತಿಹಾಸಕಾರರೊಬ್ಬರ ಹೇಳಿಕೆಯನ್ನು ಆದೇಶದಲ್ಲಿ ಉಲ್ಲೇಖಿಸಿರುವ ನ್ಯಾಯಮೂರ್ತಿಗಳು, ಮದುವೆಯ ವಿಸರ್ಜನೆ ಅಥವಾ ಅನೂರ್ಜಿತತೆ ಬಯಸುವ ವೈವಾಹಿಕ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಗರಿಷ್ಠ ಒಂದು ವರ್ಷದ ಮಿತಿಯೊಳಗೆ ವಿಲೇವಾರಿಗೊಳಿಸುವ ಎಲ್ಲ ಪ್ರಯತ್ನಗಳನ್ನು ಕೌಟುಂಬಿಕ ಅಥವಾ ವಿಚಾರಣಾ ನ್ಯಾಯಾಲಯಗಳು ಮಾಡಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.

ವೈವಾಹಿಕ ಪ್ರಕರಣಗಳಲ್ಲಿ ತ್ವರಿತ ತೀರ್ಪು ನೀಡಿದಲ್ಲಿ ಇಬ್ಬರೂ ತಮ್ಮ ಜೀವನನ್ನು ಪುನರ್ ರೂಪಿಸಿಕೊಳ್ಳಬಹುದು. ಲೈಫ್ ಈಸ್ ಲಾಸ್ಟ್ ಇನ್ ಲಿವಿಂಗ್ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ವೈವಾಹಿಕ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬವಾದರೆ ಇಬ್ಬರ ಮೇಲೂ ಕೆಟ್ಟ ಪರಿಣಾಮ ಬೀರಲಿದೆ ಎಂದು ಪೀಠ ತಿಳಿಸಿದೆ.

ತ್ವರಿತ ವಿಲೇವಾರಿಗೆ ನಿರ್ದೇಶನ: ಹೀಗಾಗಿ ಕಳೆದ ಏಳು ವರ್ಷಗಳ ಹಳೆಯದಾದ ರಾಜೀವ್ ಅವರ ಪ್ರಕರಣವನ್ನು ಮೂರು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ಸಂಬಂಧಿಸಿದ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಿಗೆ ಮನವಿ ಮಾಡಿರುವ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಇಂತಹದ್ದೇ ಪ್ರಕರಣಗಳನ್ನು ಎದುರಿಸುತ್ತಿರುವವರು ತಮ್ಮ ಅರ್ಜಿಗಳ ತ್ವರಿತ ವಿಲೇವಾರಿಗೆ ನಿರ್ದೇಶನ ನೀಡುವಂತೆ ಕೋರಿ ನ್ಯಾಯಾಲಯದ ಕದ ತಟ್ಟುವ ಪ್ರಮೇಯ ಉದ್ಭವಿಸಬಾರದು. ಆದ್ದರಿಂದ ಈ ಆದೇಶವನ್ನು ಸಂಬಂಧಪಟ್ಟ ಎಲ್ಲರಿಗೂ ರವಾನಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಪ್ರಕರಣದ ಹಿನ್ನೆಲೆ ಏನು ? ಪತ್ನಿಯೊಂದಿಗಿನ ವಿವಾಹ ಬಂಧವನ್ನು ಅನೂರ್ಜಿತಗೊಳಿಸಬೇಕು ಎಂದು ರಾಜೀವ್ 2016ರಲ್ಲಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ತ್ವರಿತ ವಿಲೇವಾರಿ ಆಗದ ಕಾರಣ, ತಮ್ಮ ಅರ್ಜಿಯನ್ನು ಮೂರು ತಿಂಗಳಲ್ಲಿ ಇತ್ಯರ್ಥ ಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜೀವ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತ್ವರಿತ ನ್ಯಾಯದಾನದ ಹಕ್ಕನ್ನು ಅನುಚ್ಛೇದ 21 ರಡಿ ಸಾಂವಿಧಾನಿಕ ಖಾತರಿ ಎಂದು ಸುಪ್ರೀಂಕೋರ್ಟ್ ಗುರುತಿಸಿದೆ. ಆದ್ದರಿಂದ ತನ್ನ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ : ಭ್ರಷ್ಟಾಚಾರ ಆರೋಪ ಪ್ರಕರಣಗಳಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.