ETV Bharat / state

ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸುವ ಸಮೀಕ್ಷೆ: ದಾಖಲೆಗಳ ಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ - High Court directs review of survey documents identifying children

ರಾಜ್ಯದಲ್ಲಿ ಕಡ್ಡಾಯ ಶಿಕ್ಷಣ ಕಾಯ್ದೆ ಸಮರ್ಥವಾಗಿ ಜಾರಿಗೊಳಿಸಲು ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಲು ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

high-court
ಹೈಕೋರ್ಟ್
author img

By

Published : Jun 23, 2021, 9:25 PM IST

ಬೆಂಗಳೂರು: ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಲು ನಡೆಸಿರುವ ಸರ್ವೇ ದಾಖಲೆಗಳನ್ನು ಪರಿಶೀಲಿಸಲು ಸರ್ಕಾರ ಸಭೆ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ರಾಜ್ಯದಲ್ಲಿ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಸಮರ್ಥವಾಗಿ ಜಾರಿಗೊಳಿಸಲು ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಲು ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಲು ಪ್ರತಿ ಮನೆಗೂ ತೆರಳಿ ಸರ್ವೇ ನಡೆಸಬೇಕು. 2020ರ ಏಪ್ರಿಲ್ 30ರೊಳಗೆ ಪೂರ್ಣಗೊಳಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಆದರೆ, ಕೋವಿಡ್ 1 ಮತ್ತು 2ನೇ ಅಲೆಯಿಂದಾಗಿ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಈ ನಡುವೆ ರಾಜ್ಯ ಸರ್ಕಾರ 2021ರ ಜೂನ್ 22 ರಂದು ಮೆಮೊ ಸಲ್ಲಿಸಿ, ಮಕ್ಕಳನ್ನು ಗುರುತಿಸಲು ಸರ್ವೇ ನಡೆಸಿರುವುದಾಗಿ ಹೇಳಿದೆ.

ಆದರೆ, ಮನೆ ಮನೆಗೆ ತೆರಳಿ ಸರ್ವೇ ನಡೆಸಿದ ಬಗ್ಗೆ ಸ್ಪಷ್ಟತೆ ಇಲ್ಲ. ಆದ್ದರಿಂದ, ಸಮೀಕ್ಷೆ ಹೇಗೆ ಮತ್ತು ಯಾವ ವಿಧಾನಗಳಿಂದ ನಡೆಸಲಾಗಿದೆ ಎಂಬುದನ್ನು ತಿಳಿಯಲು ದಾಖಲೆಗಳನ್ನು ಪರಿಶೀಲಿಸುವ ಅಗತ್ಯವಿದೆ. ಅದಕ್ಕಾಗಿ ಪ್ರಕರಣದ ಅಮೈಕಸ್ ಕ್ಯೂರಿ ಮತ್ತು ಇತರ ವಕೀಲರೊಂದಿಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆ ನಡೆಸಬೇಕು. ಸಭೆಯಲ್ಲಿ ಸರ್ಕಾರ ನಡೆಸಿರುವ ಸರ್ವೇ ದಾಖಲೆಗಳು ಹಾಗೂ ಮಾಹಿತಿಯನ್ನು ವಕೀಲರಿಗೆ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಓದಿ: 43ನೇ ಆಕ್ಸಿಜನ್ ಎಕ್ಸ್‌ಪ್ರೆಸ್​ನಲ್ಲಿ ಬಂತು 97 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.