ETV Bharat / state

ಎಂಸಿಐ ನಿಯಮಗಳಂತೆ ಪ್ರಾಯೋಗಿಕ ಪರೀಕ್ಷೆ ನಡೆಸದ RGUHS: ಮರು ಪರೀಕ್ಷೆಗೆ ಹೈಕೋರ್ಟ್​ ನಿರ್ದೇಶನ - ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ

ಅನಿರುದ್ಧ್ ಹಾಗೂ ಇತರ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು.

Highcourt
ಹೈಕೋರ್ಟ್​
author img

By

Published : Jun 29, 2023, 8:05 PM IST

ಬೆಂಗಳೂರು: ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ನಿಯಮದಂತೆ ಪ್ರಾಯೋಗಿಕ ಪರೀಕ್ಷೆ ನಡೆಸದ ಹಿನ್ನೆಲೆಯಲ್ಲಿ ಸುಮಾರು 70 ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳನ್ನು ಹೊಸದಾಗಿ ನಡೆಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್)ಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಅನಿರುದ್ಧ ಎಂಬವರು ಸೇರಿದಂತೆ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿತು.

ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ಎಂಸಿ) ಎಂದು ಕರೆಯಲಾಗುತ್ತಿರುವ ಎಂಸಿಐ ನಿಯಮದಂತೆ ಪ್ರಾಯೋಗಿಕ ಮತ್ತು ಪಠ್ಯ(ಥಿಯರಿ) ಪರೀಕ್ಷೆಗೆ ನಾಲ್ವರು ಪರೀಕ್ಷಾ ಮೇಲ್ವಿಚಾರಕರು ಇರಬೇಕು. ಪ್ರತಿಯೊಬ್ಬ ಪರೀಕ್ಷಕರು ಸ್ವತಂತ್ರವಾಗಿ ವಿದ್ಯಾರ್ಥಿಗಳ ಮೌಲ್ಯಮಾಪನ ಮಾಡಿ ಅಂಕಗಳನ್ನು ನೀಡಬೇಕು. ಆದರೆ, ನ್ಯಾಯಾಲಯ ಈ ಬಗ್ಗೆ ಹಲವು ಬಾರಿ ಆದೇಶ ನೀಡಿದ್ದರೂ ಸಹ ಆರ್‌ಜಿಯುಎಚ್‌ಎಸ್ ಮತ್ತದೇ ದೋಷಗಳನ್ನು ಮಾಡುತ್ತಿರುವುದು ದುರದೃಷ್ಟಕರ ಎಂದು ಪೀಠ ಬೇಸರ ವ್ಯಕ್ತಪಡಿಸಿತು.

ಅಲ್ಲದೇ, ಎಂಸಿಐನ ಪದವಿ ವೈದ್ಯಕೀಯ ಶಿಕ್ಷಣ 1977 ನಿಯಮ 13ರ ಪ್ರಕಾರ ಪ್ರಾಯೋಗಿಕ /ಕ್ಲಿನಿಕಲ್ ಪರೀಕ್ಷೆಗಳನ್ನು ಹೊಸದಾಗಿ ನಡೆಸಬೇಕು ಎಂದು ನಿರ್ದೇಶನ ನೀಡಿರುವ ನ್ಯಾಯಾಲಯ, ಪೂರಕ ಪರೀಕ್ಷೆಗೂ ಮುನ್ನ ಹೊಸದಾಗಿ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಬೇಕು ಎಂದು ಆದೇಶಿಸಿದೆ. ಪ್ರತಿಯೊಬ್ಬ ಪರೀಕ್ಷಾ ಮೇಲ್ವಿಚಾರಕರು ಸ್ವತಂತ್ರವಾಗಿ ಅಂಕ ನೀಡಬೇಕಾಗಿಲ್ಲ ಎಂಬ ವಿಶ್ವವಿದ್ಯಾಲಯದ ವಾದವನ್ನು ಕೋರ್ಟ್ ತಿರಸ್ಕರಿಸಿದೆ.

ವೈದ್ಯಕೀಯ ಶಿಕ್ಷಣದ ಥಿಯರಿ ಮತ್ತು ಪ್ರಾಕ್ಟಿಕಲ್ ಪರೀಕ್ಷೆಗಳಲ್ಲಿ ನಾಲ್ವರು ಪರೀಕ್ಷಕರು ಇರಬೇಕೆನ್ನುವುದು ಏಕಪಕ್ಷೀಯವಾಗಿ ಮೌಲ್ಯಮಾಪನ ಮಾಡಬಾರದು ಎಂಬ ಉದ್ದೇಶದಿಂದ. ಪರೀಕ್ಷಾ ಮೌಲ್ಯಮಾಪನದಲ್ಲಿ ಖಚಿತತೆ, ನ್ಯಾಯ ಮತ್ತು ವಿಶ್ವಾಸಾರ್ಹತೆ ಇರಲಿ ಎಂಬುದು ಇದರ ಹಿಂದಿನ ಆಶಯ. ಮೌಲ್ಯಮಾಪನದಲ್ಲಿ ಪಕ್ಷಪಾತ ಆಗದಿರಲಿ ಎಂಬ ಕಾರಣಕ್ಕೆ ನಾಲ್ವರು ಪರೀಕ್ಷಕರನ್ನು ನಿಯೋಜಿಸಲು ಎಂಸಿಐ ನಿಯಮಗಳಿಗೆ ತಿದ್ದುಪಡಿ ತಂದಿದೆ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ ಹೀಗಿದೆ..: ಅರ್ಜಿದಾರರು 2023ರ ಫೆಬ್ರವರಿಯಲ್ಲಿ ನಡೆದ ಪ್ರಾಯೋಗಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ಉತ್ತರ ಪತ್ರಿಕೆಗಳನ್ನು ಪಡೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯ ಮೌಲ್ಯಮಾಪನವನ್ನು ಸರಿಯಾಗಿ ಮಾಡಿಲ್ಲ ಎಂಬ ವಿಚಾರ ಗೊತ್ತಾಗಿತ್ತು. ಅಲ್ಲದೆ, ಪದವಿ ವೈದ್ಯಕೀಯ ಶಿಕ್ಷಣ ಕಾಯಿದೆ 1997 ನಿಯಮ 13(2)ರಡಿ ನಾಲ್ವರು ಪರೀಕ್ಷಕರು ಪ್ರಾಯೋಗಿಕ ಪರೀಕ್ಷೆ ನಡೆಸಿ ಪ್ರತ್ಯೇಕವಾಗಿ ಅಂಕಗಳನ್ನು ನೀಡಬೇಕು. ಆದರೆ ವಿಶ್ವವಿದ್ಯಾಲಯ ನಿಯಮಗಳನ್ನು ಪಾಲನೆ ಮಾಡದೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿದೆ. ಇದರಿಂದಾಗಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೊಮ್ಮ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತೆ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ: High Court: ವಿದ್ಯಾರ್ಥಿಗಳ ಮೇಲೆ ಕಠಿಣ ಶಿಸ್ತು ಕ್ರಮ ಪರಿಶೀಲಿಸಲು ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.