ETV Bharat / state

ಮಠದ ಚೆಕ್​ಗಳಿಗೆ ಸಹಿ ಹಾಕಲು ಅವಕಾಶ ಕೋರಿ ಅರ್ಜಿ: ಮೆಮೋ ಸಲ್ಲಿಸುವಂತೆ ಮುರುಘಾ ಶರಣರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ - ಪೋಕ್ಸೋ ಮತ್ತು ಜಾತಿ ನಿಂದನೆ ಆರೋಪ

ಚೆಕ್​ಗಳಿಗೆ ಸಹಿ ಹಾಕಲು ಅವಕಾಶ ಕೋರಿದ್ದ ಚಿತ್ರದುರ್ಗ ಮುರುಘಾ ಶರಣರು. ಸಮಗ್ರ ಮಾಹಿತಿಯುಳ್ಳ ಮೆಮೋ ಸಲ್ಲಿಸುವಂತೆ ಶರಣರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ.

ಹೈಕೋರ್ಟ್ ಸೂಚನೆ
ಹೈಕೋರ್ಟ್ ಸೂಚನೆ
author img

By

Published : Sep 29, 2022, 3:46 PM IST

ಬೆಂಗಳೂರು: ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವೇತನ ಪಾವತಿಸುವ ಸಂಬಂಧ ಸಮಗ್ರ ಮಾಹಿತಿಯುಳ್ಳ ಮೆಮೊ ಸಲ್ಲಿಸುವಂತೆ ಶಿವಮೂರ್ತಿ ಮುರುಘರಾಜೇಂದ್ರ ಶರಣರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಪೋಕ್ಸೋ ಮತ್ತು ಜಾತಿ ನಿಂದನೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘ ರಾಜೇಂದ್ರ ಬೃಹನ್ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್‌ ಖಾತೆಗಳ ಚೆಕ್‌ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮೆಮೊ ಸಲ್ಲಿಸಿ ಬಸವೇಶ್ವರ ಆಸ್ಪತ್ರೆ ಸಿಬ್ಬಂದಿಗೆ ವೇತನ ನೀಡಲು 101 ಚೆಕ್​​ಗಳಿಗೆ ಸಹಿ ಹಾಕಬೇಕಾಗಿದೆ ಎಂದು ದಾಖಲೆಗಳೊಂದಿಗೆ ವಿವರಿಸಿದರು. ಈ ವೇಳೆ, ಎಲ್ಲ ಚೆಕ್​​ಗಳು ಸೆಲ್ಫ್ ಅಂತ ಇದೆ. ಸಂಸ್ಥೆಯ ಹೆಸರಿನಲ್ಲಿ ಯಾವುದೇ ಚೆಕ್ ಇಲ್ಲ‌ ಏಕೆ ಎಂದು ಪ್ರಶ್ನಿಸಿತು. ಅಲ್ಲದೆ, ಈ ಸಂಬಂಧ ಸಮಗ್ರ ಮಾಹಿತಿಯುಳ್ಳ ಮೆಮೊ ಸಲ್ಲಿಸಿ ಎಂದು ಸೂಚನೆ ನೀಡಿತು.

ಪ್ರಕರಣದ ಹಿನ್ನೆಲೆ? ಮುರುಘಾ ಮಠ ಮತ್ತು ಮಠದ ಅಧೀನದ ಶಿಕ್ಷಣ ಸಂಸ್ಥೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ವೇತನ ನೀಡಬೇಕಾದರೆ ಮಠದ ಏಕೈಕ ಟ್ರಸ್ಟಿ ಆಗಿರುವ ಶಿವಮೂರ್ತಿ ಶರಣರು ಚೆಕ್​​ಗಳಿಗೆ ಸಹಿ ಮಾಡಬೇಕು. ಪ್ರತಿ ತಿಂಗಳು 200 ಚೆಕ್​​ಗಳಿಗೆ ಸಹಿ ಮಾಡಬೇಕು. ಇಲ್ಲವಾದಲ್ಲಿ ವೇತನ ಬಿಡುಗಡೆ ಆಗುವುದಿಲ್ಲ.

ಹೀಗಾಗಿ ಚೆಕ್​​ಗಳಿಗೆ ಸಹಿ ಹಾಕಲು ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಕರ್ನಾಟಕ ಕಾರಾಗೃಹ ಕಾಯಿದೆ 1963ರ ಸೆಕ್ಷನ್ 40ರ ಅಡಿ ಅರ್ಜಿದಾರರು ವಿಚಾರಣಾಧೀನ ಕೈದಿಯಾಗಿದ್ದು, ಚೆಕ್ ಮತ್ತು ಸಂಬಂಧಿತ ದಾಖಲೆಗಳಿಗೆ ಸಹಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಅರ್ಜಿಯಲ್ಲಿ ವಕೀಲರು ಕೋರಿದ್ದರು.

(ಓದಿ:ಮುರುಘಾ ಮಠ, ಶಿಕ್ಷಣ ಸಂಸ್ಥೆಯಲ್ಲಿ ಹೇಗೆ ಸಂಬಳ ನೀಡಲಾಗುತ್ತಿತ್ತು?: ಮಾಹಿತಿ ನೀಡಲು ಹೈಕೋರ್ಟ್ ಸೂಚನೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.