ETV Bharat / state

ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಜನ ಕೇಂದ್ರ ಸ್ಥಾಪಿಸುವ ವಿಚಾರ: ವಿದ್ಯಾರ್ಥಿಗಳ ಮನವಿ ವಜಾಗೊಳಿಸಿದ ಹೈಕೋರ್ಟ್ - High Court latest news

ಎನ್‌ಟಿಎಂ ಕನ್ನಡ ಶಾಲೆಯ ಜಾಗದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಜನ ಕೇಂದ್ರ ಸ್ಥಾಪಿಸುವ ವಿಚಾರದಲ್ಲಿ ರಾಮಕೃಷ್ಣ ಆಶ್ರಮಕ್ಕೆ ಮುನ್ನಡೆ ಸಿಕ್ಕಿದ್ದು, 22 ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Sep 22, 2021, 6:39 AM IST

ಬೆಂಗಳೂರು: ಮೈಸೂರು ನಗರದ ಎನ್‌ಟಿಎಂ ಕನ್ನಡ ಶಾಲೆಯ ವರ್ಗಾವಣೆ ಪ್ರಶ್ನಿಸಿ ಶಾಲಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಎನ್‌ಟಿಎಂ ಕನ್ನಡ ಶಾಲೆಯ ಜಾಗದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಜನ ಕೇಂದ್ರ ಸ್ಥಾಪಿಸುವ ವಿಚಾರದಲ್ಲಿ ರಾಮಕೃಷ್ಣ ಆಶ್ರಮಕ್ಕೆ ಮುನ್ನಡೆ ಸಿಕ್ಕಿದಂತಾಗಿದೆ.

ಶಾಲೆಯ ಜಾಗ ಹಸ್ತಾಂತರಿಸುವುದನ್ನು ಪ್ರಶ್ನಿಸಿ ಅನುಷಾ ಸೇರಿದಂತೆ ಶಾಲೆಯ 22 ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಸಚಿನ್ ಶಂಕರ್ ಮೊಗದಂ ನೇತೃತ್ವದ ಏಕಸದಸ್ಯ ಪೀಠ ನಿನ್ನೆ ತೀರ್ಪು ಪ್ರಕಟಿಸಿತು.

ಪೀಠ ತನ್ನ ಆದೇಶದಲ್ಲಿ, ಸ್ಮಾಮಿ ವಿವೇಕಾನಂದ ಸಂಸ್ಕೃತಿಕ ಯುವ ಜನ ಕೇಂದ್ರ ಸ್ಥಾಪಿಸಲು ಎನ್‌ಟಿಎಂ ಶಾಲೆಯ ಜಾಗವನ್ನು ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರ ಮಾಡಲು 2013ರ ಜ.9ರಂದು ಹೊರಡಿಸಿರುವ ಆದೇಶ ಜಾರಿಗೆ ತರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು 2020ರ ನ.19 ರಂದು ಮೈಸೂರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

ಇದನ್ನು ವಿದ್ಯಾರ್ಥಿಗಳು ಪ್ರಶ್ನಿಸಿದ್ದು, ಶಾಲೆಯ ವರ್ಗಾವಣೆಯಿಂದ ಶಿಕ್ಷಣ ಪಡೆಯುವ ತಮ್ಮ ಮೂಲ ಹಕ್ಕನ್ನು ಸರ್ಕಾರ ಉಲ್ಲಂಘಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಆದರೆ, 2020ರ ನ.19 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ನೀಡಿರುವ ಸೂಚನೆಯು 2013ರ ಜ.9ರ ಆದೇಶವನ್ನು ಆಧರಿಸಿದೆ.

ಅಲ್ಲದೆ, 2013ರ ಜ.9ರ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಈಗಾಗಲೇ ಹೈಕೋರ್ಟ್ ವಜಾಗೊಳಿಸಿದೆ. ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕಾಗಿದೆ. ಶಾಲೆಯ ವರ್ಗಾವಣೆಯಿಂದ ಮೂಲಭೂತ ಹಕ್ಕು ಉಲ್ಲಂಘನೆಯಾಗುತ್ತದೆ ಎಂಬ ಅರ್ಜಿದಾರರ ವಾದ ಒಪ್ಪಲಾಗದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಸ್ವಾಮಿ ವಿವೇಕಾನಂದರು 1892ರಲ್ಲಿ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿದ್ದಾಗ ನಿರಂಜನಮಠದಲ್ಲಿ ತಂಗಿದ್ದರು. ನಂತರ ಆ ಜಾಗವನ್ನು ಮೈಸೂರು ಮಹಾನಗರ ಪಾಲಿಕೆ, ರಾಮಕೃಷ್ಣ ಮಠಕ್ಕೆ ಹಸ್ತಾಂತರ ಮಾಡಿತ್ತು. ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಸ್ವಾಮಿ ವಿವೇಕಾನಂದ ಸ್ಮಾರಕ, ಯುವ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿತ್ತು.

ಇದರಿಂದ ಮಠಕ್ಕೆ ಹೊಂದಿಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೇರಿದ ಜಾಗವನ್ನು ಎನ್‌ಟಿಎಂ ಕನ್ನಡ ಶಾಲೆ ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರಿಸಬೇಕು. ಎನ್‌ಟಿಎಂ ಶಾಲೆಯನ್ನು ಹತ್ತಿರದ ದೇವರಾಜು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದಿಗೆ ವಿಲೀನ ಮಾಡಿ ವಿದ್ಯಾರ್ಥಿಗಳನ್ನು ವರ್ಗಾಯಿಸಬೇಕು ಎಂದು ಸರ್ಕಾರ 2013ರಲ್ಲಿ ಆದೇಶಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.