ETV Bharat / state

ಮದುವೆ, ಮಕ್ಕಳಿರುವುದನ್ನು ಮರೆಮಾಚಿ 2ನೇ ಮದುವೆ; ಕೌಟುಂಬಿಕ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್ - ಈಟಿವಿ ಭಾರತ ಕನ್ನಡ

ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿತು.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Aug 22, 2023, 10:21 PM IST

ಬೆಂಗಳೂರು: ಮೊದಲನೇ ಮದುವೆ ಮತ್ತು ಮಕ್ಕಳಿರುವ ಸಂಗತಿಯನ್ನು ಮರೆಮಾಚಿ ಮತ್ತೊಂದು ಮದುವೆಯಾಗಿರುವುದನ್ನು ಅನೂರ್ಜಿತಗೊಳಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ತುಮಕೂರಿನ ಮಹಿಳೆಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠ ಈ ಆದೇಶ ಮಾಡಿತು.

ಪ್ರಕರಣದಲ್ಲಿ ಪತಿಯ (ಎರಡನೇ ಪತಿ) ವಿಚ್ಛೇದನ ಅರ್ಜಿ ಸಂಬಂಧ ಮೇಲ್ಮನವಿದಾರೆ ಕೌಟುಂಬಿಕ ನ್ಯಾಯಾಲಯಕ್ಕೆ ಯಾವುದೇ ಆಕ್ಷೇಪಣಾ ಹೇಳಿಕೆ ಸಲ್ಲಿಸಿಲ್ಲ. ತಮ್ಮ ಪರವಾದ ಯಾವುದೇ ಸಾಕ್ಷ್ಯಧಾರಗಳನ್ನು ಒದಗಿಸಿಲ್ಲ. ಪತಿಯನ್ನು ಪಾಟಿ ಸವಾಲಿಗೆ ಗುರಿಪಡಿಸಿ, ಅವರ ಸಾಕ್ಷ್ಯಗಳನ್ನು ಅಲ್ಲಗೆಳೆಯುವ ಪ್ರಯತ್ನವೇ ಪತ್ನಿ ಮಾಡಿಲ್ಲ. ಕೌಟುಂಬಿಕ ನ್ಯಾಯಾಲಯವು ಪತಿ ಒದಗಿಸಿದ್ದ ಸಾಕ್ಷ್ಯಧಾರಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ ನಂತರವೇ ವಿಚ್ಛೇದನ ಮಂಜೂರು ಮಾಡಿದೆ. ಆ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಮತ್ತು ಪತಿಯ ಸಾಕ್ಷ್ಯಧಾರಗಳನ್ನು ತಿರಸ್ಕರಿಸಲು ಯಾವುದೇ ಸಕಾರಣ ಹೈಕೋರ್ಟ್ ಮುಂದೆ ಇಲ್ಲ ಎಂದು ತೀರ್ಮಾನಿಸಿದ ವಿಭಾಗೀಯ ಪೀಠ ಮೇಲ್ಮನವಿಯನ್ನು ವಜಾಗಳಿಸಿ ಆದೇಶಿಸಿದೆ. ಆ ಮೂಲಕ ಮೇಲ್ಮನವಿದಾರೆಯ ಎರಡನೇ ವಿವಾಹವನ್ನು ಅಸಿಂಧುಗೊಳಿಸಿ ವಿಚ್ಛೇದನ ಮಂಜೂರು ಮಾಡಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ಪ್ರಕರಣದ ಹಿನ್ನೆಲೆ: ತುಮಕೂರಿನ ಕವಿತಾ ಮತ್ತು ಗಿರೀಶ್ (ಇಬ್ಬರ ಹೆಸರು ಬದಲಿಸಲಾಗಿದೆ) 2016ರ ಮೇ 20ರಂದು ಮದುವೆಯಾಗಿದ್ದರು. ಕವಿತಾಗೆ ಈ ಹಿಂದೆಯೇ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದುವೆಯಾಗಿದೆ. ಆ ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಈ ವಿಷಯ ಮರೆಮಾಚಿ ಕವಿತಾ ತನ್ನೊಂದಿಗೆ ಎರಡನೇ ಮದುವೆಯಾಗಿದ್ದಾರೆ ಎಂಬುದಾಗಿ ವಿವಾಹವಾದ ಕೆಲವೇ ದಿನಗಳಲ್ಲಿ ಗಿರೀಶ್ ಮನಗಂಡಿದ್ದರು. ಇದರಿಂದ ಕವಿತಾ ಜೊತೆಗಿನ ಮದುವೆ ಅನೂರ್ಜಿತಗೊಳಿಸಿ ವಿವಾಹ ವಿಚ್ಛೇದನ ಮಂಜೂರು ಮಾಡುವಂತೆ ಕೋರಿ ಗಿರೀಶ್ ಸ್ಥಳೀಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಸಂಬಂಧ ಕೌಟುಂಬಿಕ ನ್ಯಾಯಾಲಯವು ಕವಿತಾಗೆ ನೊಟೀಸ್ ಜಾರಿ ಮಾಡಿತ್ತು. ಪ್ರಕರಣದಲ್ಲಿ ತನ್ನ ಪರ ವಾದ ಮಂಡನೆಗೆ ಆಕೆ ವಕೀಲರೊಬ್ಬರನ್ನು ಸಹ ನಿಯೋಜಿಸಿಕೊಂಡಿದ್ದರು. ಆ ವಕೀಲ ಕೋರ್ಟ್‌ಗೆ ಹಾಜರಾಗಿ ವಕಾಲತ್ತು ಸಹ ಸಲ್ಲಿಸಿದ್ದರು. ಆದರೆ, ನಂತರದ ದಿನಗಳಲ್ಲಿ ಕವಿತಾ ವತಿಯಿಂದ ಅರ್ಜಿ ಕುರಿತಂತೆ ಯಾವುದೇ ಆಕ್ಷೇಪಣಾ ಹೇಳಿಕೆ ಸಲ್ಲಿಕೆಯಾಗಲಿಲ್ಲ. ಪತಿ ಗಿರೀಶ್ ಅವರನ್ನು ಪಾಟಿ ಸವಾಲಿಗೂ ಗುರಿಪಡಿಸಲಿಲ್ಲ. ಇದರಿಂದ ಗಿರೀಶ್ ಅರ್ಜಿಯನ್ನು ಪುರಸ್ಕರಿಸಿದ ವಿವಾಹ ಅಸಿಂಧುಗೊಳಿಸಿ ವಿಚ್ಛೇದನ ಮಂಜೂರು ಮಾಡಿ ಕೌಟುಂಬಿಕ ನ್ಯಾಯಾಲಯವು ಆದೇಶಿಸಿತ್ತು. ಅದನ್ನು ರದ್ದುಪಡಿಸುವಂತೆ ಕೋರಿ ಕವಿತಾ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಗಿರೀಶ್ ಪ್ರಕರಣದ ಸತ್ಯಾಂಶಗಳನ್ನು ಮರೆಮಾಚಿ ವಿಚ್ಛೇದನ ಆದೇಶ ಪಡೆದುಕೊಂಡಿದ್ದಾರೆ. ಹಾಗಾಗಿ, ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಮೇಲ್ಮನವಿಯಲ್ಲಿ ಕವಿತಾ ಕೋರಿದ್ದರು.

ಇದನ್ನೂ ಓದಿ: ಮಧುಮೇಹದ ಕಾರಣ ನೀಡಿ ಪತ್ನಿಗೆ ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.