ETV Bharat / state

ವಾಹನಗಳಲ್ಲಿ ಮೂವಿಂಗ್ ಗಾರ್ಡನ್​​ ಅಳವಡಿಸಲು ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - ವಾಹನಗಳಲ್ಲಿ ಮೂವಿಂಗ್ ಗಾರ್ಡನ್

ವಾಹನಗಳಲ್ಲಿ ಚಲಿಸುವ ಉದ್ಯಾನ ವ್ಯವಸ್ಥೆ ಅಳವಡಿಸುವಂತೆ ಸೂಚನೆ ನೀಡಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

KN_BN
ಹೈಕೋರ್ಟ್
author img

By

Published : Nov 22, 2022, 6:53 PM IST

ಬೆಂಗಳೂರು: ನಗರದಲ್ಲಿ ಸಂಚರಿಸುವ ವಾಹನಗಳಲ್ಲಿ ಚಲಿಸುವ ಉದ್ಯಾನ(ಮೂವಿಂಗ್ ಗಾರ್ಡನ್​) ವ್ಯವಸ್ಥೆ ಅಳವಡಿಸಲು ಸೂಚನೆ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ವಜಾಗೊಳಿಸಿರುವ ಹೈಕೋರ್ಟ್, ಖಾಸಗಿ ವಾಹನಗಳನ್ನು ಇದೇ ರೀತಿಯಲ್ಲಿ ಬಳಕೆ ಮಾಡಿ ಎಂದು ಸೂಚನೆ ನೀಡಲು ಅವಕಾಶವಿಲ್ಲ ಎಂದು ತಿಳಿಸಿದೆ.

ಬೆಂಗಳೂರಿನ ಕಬ್ಬನ್ ಪೇಟೆ ನಿವಾಸಿ ಕೆ.ಸುರೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಅವರ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ವಜಾಗೊಳಿಸಿದ್ದು, ಖಾಸಗಿ ವಾಹನಗಳನ್ನು ಸಂಚಾರಕ್ಕೆ ಹೊರತು ಪಡಿಸಿ, ಇತರ ಕಾರ್ಯಗಳಿಗೆ ಬಳಕೆ ಮಾಡುವಂತೆ ಸೂಚನೆ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅಲ್ಲದೇ, ಅರ್ಜಿದಾರರ ತಮ್ಮ ವಾಹನದಲ್ಲಿ ಮೂವಿಂಗ್ ಗಾರ್ಡನ್​ ಅಳವಡಿಕೆ ಮಾಡಿರುವುದಾಗಿ ಹೇಳಿದ್ದು, ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಆದರೆ, ಅದೇ ರೀತಿಯಲ್ಲಿ ಇತರರಲ್ಲಿ ಜಾಗೃತಿ ಬಂದು ತಮ್ಮ ವಾಹನಗಳಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಬೆಳವಣಿಗೆಯಾಗಲಿದೆ. ಆದರೆ, ನ್ಯಾಯಾಲಯದಿಂದ ಸೂಚನೆ ನೀಡಲು ಅವಕಾಶವಿಲ್ಲ ಎಂದು ಪೀಠ ತಿಳಿಸಿತು.

ವಿಚಾರಣೆ ವೇಳೆ ಅರ್ಜಿದಾರ ವಕೀಲರು, ಮಳೆ ನೀರು ಕೋಯ್ಲು ಪದ್ದತಿ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾರಂಭದಲ್ಲಿ ಜನ ತಾತ್ಸಾರ ಮನೋಭಾವ ಹೊಂದಿದ್ದರು. ಆದರೆ, ಸರ್ಕಾರ ಯೋಜನೆ ಜಾರಿ ಮಾಡಿದ ಬಳಿಕ ಇತರರು ತಮ್ಮ ಮನೆಗಳಲ್ಲಿ ಮಳೆ ನೀರು ಕೋಯ್ಲು ಪದ್ದತಿ ಜಾರಿ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಮೂವಿಂಗ್ ಗಾರ್ಡನ್​ ಪದ್ದತಿ ಜಾರಿ ಮಾಡಿದಲ್ಲಿ ಜನ ಅನುಸರಿಯಲಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅಲ್ಲದೇ, ಬೆಂಗಳೂರಲ್ಲಿ ಹೆಚ್ಚಾಗುತ್ತಿರುವ ವಾಹನಗಳ ಸಂಖ್ಯೆಯಿಂದ ಮಾಲಿನ್ಯವೂ ಹೆಚ್ಚಾಗುತ್ತಿದೆ. ಇದೇ ರೀತಿ ಮುಂದುವರೆದಲ್ಲಿ ಮುಂದೊಂದು ದಿನ ಬೆಂಗಳೂರು ನಗರವೂ ದೆಹಲಿ ಮಾದರಿಯಾಗಲಿದೆ. ಹೀಗಾಗಿ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿದರು. ಜತೆಗೆ, ಮೂವಿಂಗ್ ಗಾರ್ಡನ್​ ಪದ್ದತಿ ಜಾರಿ ಮಾಡಿದಲ್ಲಿ ಬೆಂಗಳೂರಿನಲ್ಲಿ ಆಮ್ಲಜನಕದ ಪ್ರಮಾಣ ಹೆಚ್ಚಾಗಲಿದೆ. ಮತ್ತು ಪರಿಸರ ಮಾಲಿನ್ಯ ಕಡಿಮೆಯಾಗಿಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಮನವಿ ತಿರಸ್ಕರಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.

ಇದನ್ನೂ ಓದಿ: ದತ್ತು ಮಕ್ಕಳು ಸಹ ಅನುಕಂಪದ ಆಧಾರದ ಉದ್ಯೋಗಕ್ಕೆ ಅರ್ಹರು ; ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.