ETV Bharat / state

ನೀಟ್ ಪರೀಕ್ಷೆ ಮುಂದೂಡಿಕೆ ಪ್ರಶ್ನಿಸಿ ಪಿಐಎಲ್: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನೀಟ್ ಮುಂದೂಡಿರುವ ನಿರ್ಧಾರ ಕೈಬಿಡುವಂತೆ ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹುಬ್ಬಳ್ಳಿಯ ಡಾ. ವಿನೋದ್ ಕುಲಕರ್ಣಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

high-court-dismissed-application
ಅರ್ಜಿ ವಜಾಗೊಳಿಸಿದ ಹೈಕೋರ್ಟ್
author img

By

Published : Jun 10, 2021, 8:29 PM IST

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ವೈದ್ಯಕೀಯ ಸ್ನಾತಕೋತ್ತರ "ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ" ನೀಟ್ ಮುಂದೂಡಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಪೀಠ, ಕೋವಿಡ್ ಪರಿಸ್ಥಿತಿಯನ್ನು ಆಧರಿಸಿ ತಜ್ಞರೊಂದಿಗೆ ಚರ್ಚಿಸಿದ ಬಳಿಕವೇ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿದೆ. ಕೇಂದ್ರದ ನಿರ್ಧಾರದಲ್ಲಿ ಯಾವುದೇ ಲೋಪ ಕಾಣುತ್ತಿಲ್ಲ. ವಿದ್ಯಾರ್ಥಿಗಳ ಆರೋಗ್ಯ ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಣಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಕೇಂದ್ರದ ವಾದ
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ, ಕೋವಿಡ್ ಎರಡನೇ ಅಲೆ ಉಲ್ಬಣಗೊಂಡ ಹಿನ್ನೆಲೆ ದೇಶಾದ್ಯಂತ ವೈದ್ಯರ ಕೊರತೆ ಉಂಟಾಗಿದೆ. ಆದ್ದರಿಂದ ಅಂತಿಮ ವರ್ಷದ ಎಂಬಿಬಿಎಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲು ತುರ್ತು ನೇಮಕಾತಿ ಮಾಡಿಕೊಳ್ಳಲಾಗಿದೆ. ಕೋವಿಡ್ ಸೇವೆ ಸಲ್ಲಿಸಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್​ನಲ್ಲಿ ಪ್ರತ್ಯೇಕ ಕೋಟಾ ಮೀಸಲಿಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆಗಸ್ಟ್ 31ರ ಬಳಿಕ ಒಂದು ತಿಂಗಳು ಸಿದ್ಧತೆಗೆ ಅವಕಾಶ ನೀಡಿ ನೀಟ್ ಪರೀಕ್ಷೆ ನಡೆಸಲಾಗುವುದು. ಅಷ್ಟಕ್ಕೂ ನೀಟ್ ಪರೀಕ್ಷೆ ರದ್ದುಪಡಿಸಲಾಗಿಲ್ಲ, ಕೋವಿಡ್ ಹಿನ್ನೆಲೆ ಮುಂದೂಡಲಾಗಿದೆ ಎಂದು ವಿವರಿಸಿದರು.

ಅರ್ಜಿದಾರರ ವಾದ
ಅರ್ಜಿದಾರರಾದ ಡಾ.ವಿನೋದ್ ಕುಲಕರ್ಣಿ ವಾದಿಸಿ, ಕಳೆದ ಬಾರಿ ನೀಟ್ ಮುಂದೂಡುವಂತೆ 5 ರಾಜ್ಯಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಈ ಬಾರಿ ನೀಟ್ ಪರೀಕ್ಷೆಯನ್ನು 2021ರ ಜನವರಿಯಲ್ಲಿ ನಡೆಸಲು ಮೊದಲಿಗೆ ತೀರ್ಮಾನಿಸಲಾಗಿತ್ತು. ನಂತರ ಏಪ್ರಿಲ್ 18ಕ್ಕೆ ಮುಂದೂಡಲಾಯಿತು. ಅದಾದ ಬಳಿಕ ಆಗಸ್ಟ್ 31ರ ಮೊದಲು ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರ ನಾಲ್ಕು ತಿಂಗಳು ಮುಂದೂಡಿತು. ಈಗ ಯಾವಾಗ ಪರೀಕ್ಷೆ ನಡೆಸಲಾಗುತ್ತದೆ ಎಂಬ ಬಗ್ಗೆ ಖಚಿತತೆ ಇಲ್ಲ. ಈ ಅತಂತ್ರ ಸ್ಥಿತಿಯಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ನೀಟ್ ಆಕಾಂಕ್ಷಿಗಳು ಗೊಂದಲದಲ್ಲಿದ್ದಾರೆ. ನೀಟ್ ಮುಂದೂಡಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಏಕಪಕ್ಷೀಯ ಹಾಗೂ ಕಾನೂನು ಬಾಹಿರ. ಹೀಗಾಗಿ ಕೇಂದ್ರದ ನಿರ್ಣಯವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಓದಿ:ಕೋವಿಡ್ ಲಸಿಕಾ ದರ ಮರು ನಿಗದಿ: ಖಾಸಗಿ ಆಸ್ಪತ್ರೆಗಳಲ್ಲಿ ಹೊಸ ದರ ಹೀಗಿದೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.