ETV Bharat / state

ವಿಚಾರಣೆ ವಿಳಂಬವಾಗುವ ಕಾರಣ ನೀಡಿ ಜಾಮೀನು ಕೋರಿಕೆ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ವಿಳಂಬವಾಗಲಿದೆ. ಹಾಗಾಗಿ ಆರೋಪಿಗೆ ಜಾಮೀನು ನೀಡಬೇಕು ಎಂಬ ವಾದವನ್ನು ತಳ್ಳಿಹಾಕಿರುವ ಹೈಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

High Court
High Court
author img

By

Published : Jul 10, 2020, 10:38 PM IST

ಬೆಂಗಳೂರು: ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ವಿಳಂಬವಾಗಲಿದೆ. ಹಾಗಾಗಿ ಆರೋಪಿಗೆ ಜಾಮೀನು ನೀಡಬೇಕು ಎಂಬ ವಾದವನ್ನು ತಳ್ಳಿಹಾಕಿರುವ ಹೈಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಉಡುಪಿಯ ಹರೀಶ್ ರೆಡ್ಡಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ‌ಯನ್ನು ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರನ ಪರ ವಕೀಲರು ವಾದಿಸಿ, ಮೊದಲಿಗೆ ಎಫ್ಐಆರ್​ನಲ್ಲಿ ಹರಿಶ್ ರೆಡ್ಡಿ ಹೆಸರಿರಲಿಲ್ಲ. ಯಾವುದೇ ಸಾಕ್ಷ್ಯಾಧಾರವಿಲ್ಲದಿದ್ದರೂ ಮೊದಲನೇ‌ ಆರೋಪಿಯ ಹೇಳಿಕೆ ಆಧರಿಸಿ ಅರ್ಜಿದಾರನನ್ನು ಬಂಧಿಸಲಾಗಿದೆ. ಕೊರೊನಾ ಸ್ಥಿತಿಯಿಂದಾಗಿ ವಿಚಾರಣಾ ನ್ಯಾಯಾಲಯದ ವಿಚಾರಣೆ ಶೀಘ್ರವಾಗಿ ನಡೆಯುವ ಸಾಧ್ಯತೆ ಇಲ್ಲ.‌ ಅರ್ಜಿದಾರನಿಗೆ 70 ವರ್ಷದ ತಾಯಿ ಇದ್ದು, ಅವರನ್ನು ಆರೈಕೆ ಮಾಡಲು ಜಾಮೀನು ನೀಡಬೇಕು ಎಂದು ಕೋರಿದರು.

ವಾದವನ್ನು ಒಪ್ಪದ ಪೀಠ, ಅರ್ಜಿದಾರ ಈ ಮೊದಲು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಹೀಗಾಗಿ ಎರಡನೇ ಬಾರಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ. ಇದೀಗ ವಿಚಾರಣೆ ಶೀಘ್ರವಾಗಿ ಮುಗಿಯುವ ಸಾಧ್ಯತೆ ಇಲ್ಲ ಮತ್ತು ಆರೋಪಿಯ ವಯೋವೃದ್ಧ ತಾಯಿಯ ಆರೈಕೆ ಅಗತ್ಯವಿದೆ ಎಂಬ ಅಂಶಗಳ ಆಧಾರದ ಮೇಲೆ ಅರ್ಜಿದಾರನಿಗೆ ಜಾಮೀನು ನೀಡುವುದು ಸೂಕ್ತ ಎನಿಸುವುದಿಲ್ಲ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್ ಅರ್ಜಿ ತಿರಸ್ಕರಿಸಿದೆ.

ಉಡುಪಿಯ ಬ್ರಹ್ಮಾವರ ವೃತ್ತದ ಕೋಟ ಠಾಣೆ ಪೊಲೀಸರು, ಹರೀಶ್ ರೆಡ್ಡಿಯನ್ನು ಕೊಲೆ,‌ ಕೊಲೆ ಯತ್ನ, ಜೀವಬೆದರಿಕೆ ಮತ್ತು ಅಕ್ರಮ ಕೂಟ ಆರೋಪಗಳ ಸಂಬಂಧ ಬಂಧಿಸಿದ್ದಾರೆ.‌ ವಿಚಾರಣಾ ನ್ಯಾಯಾಲಯ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿನ್ನೆಲೆಯಲ್ಲಿ ಹರೀಶ್ ರೆಡ್ಡಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಅರ್ಜಿ ತಿರಸ್ಕರಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.