ETV Bharat / state

ಅಕ್ರಮ ಆಸ್ತಿ ಗಳಿಕೆ ಆರೋಪ: ಪ್ರಕರಣ ರದ್ದು ಕೋರಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಜಾ - ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ಸಹೋದರರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

high court
ಹೈಕೋರ್ಟ್
author img

By

Published : Mar 29, 2023, 8:24 AM IST

ಬೆಂಗಳೂರು : ಮಾಜಿ ಸಚಿವ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಮತ್ತು ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಇದರಿಂದ, ಶಾಸಕ ರೇಣುಕಾಚಾರ್ಯರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪ್ರಕರಣ ರದ್ದತಿ ಕೋರಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್​ ಅವರಿದ್ದ ನ್ಯಾಯಪೀಠ ಅರ್ಜಿ ವಜಾ ಮಾಡಿ ಆದೇಶಿಸಿತು. ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ಬಿ.ಎಸ್.ಪ್ರಸಾದ್ ವಾದ ಮಂಡಿಸಿ, "ಪ್ರಕರಣ ಸಂಬಂಧ ರೇಣುಕಾಚಾರ್ಯ ವಿರುದ್ಧ 2015 ರಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ನಂತರ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಿದ್ಧಪಡಿಸಿದ್ದಾರೆ. ಆದರೆ, ಅರ್ಜಿದಾರರು ಜನಪ್ರತಿನಿಧಿಯಾಗಿದ್ದಾರೆ. ಅಂತಿಮ ವರದಿ ಸಲ್ಲಿಕೆಗಾಗಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಅಗತ್ಯ. ಸಕ್ಷಮ ಪ್ರಾಧಿಕಾರವಾದ ಸ್ಪೀಕರ್ ಅವರಲ್ಲಿ ಅನುಮತಿ ಕೋರಲಾಗಿದೆ. ಅವರು ಅನುಮತಿ ನೀಡಿದ ಕೂಡಲೇ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ಈ ಹಂತದಲ್ಲಿ ಪ್ರಕರಣದ ಎಫ್‌ಐಆರ್ ರದ್ದುಪಡಿಸಬಾರದು" ಎಂದು ಕೋರಿದ್ದರು. ಈ ಮನವಿ ಪುರಸ್ಕರಿಸಿರುವ ಹೈಕೋರ್ಟ್, ರೇಣುಕಾಚಾರ್ಯ ಅವರ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ : ಅನಧಿಕೃತವಾಗಿ ಗೈರಾದವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗದಿದ್ದಾಗ ವೇತನ ಪಾವತಿಸಬೇಕು: ಹೈಕೋರ್ಟ್

ಪ್ರಕರಣದ ಹಿನ್ನೆಲೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಅವರ ಸಹೋದರರ ವಿರುದ್ಧ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಗುರುಪಾದಯ್ಯ ಮಠದ್ ಎಂಬುವರು ದಾವಣಗೆರೆಯ ಲೋಕಾಯುಕ್ತ ನ್ಯಾಯಾಲಯಕ್ಕೆ 2015 ರ ಏಪ್ರಿಲ್​ 28 ರಂದು ಖಾಸಗಿ ದೂರು ಸಲ್ಲಿಸಿದ್ದರು. ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದಾವಣಗೆರೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ನ್ಯಾಯಾಲಯ ಆದೇಶಿಸಿತ್ತು.

ಇದನ್ನೂ ಓದಿ: ನಮೀಬಿಯಾದಿಂದ ತಂದ ಚಿರತೆ ಸಾವು: ಕಾರ್ಯಪಡೆ ತಜ್ಞರ ಅರ್ಹತೆ, ಅನುಭವದ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ಲೋಕಾಯುಕ್ತ ಪೊಲೀಸರು ರೇಣುಕಾಚಾರ್ಯ ವಿರುದ್ಧ 2015ರ ಮೇ 5 ರಂದು ಎಫ್‌ಐಆರ್ ದಾಖಲಿಸಿ, ಅವರ ಮತ್ತು ಕುಟುಂಬ ಸದಸ್ಯರ ಮನೆ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ವಶಕ್ಕೆ ಪಡೆದುಕೊಂಡಿದ್ದರು. ಇದರಿಂದ 2017ರ ಮಾ.6 ರಂದು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ರೇಣುಕಾಚಾರ್ಯ, ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿದ್ದರು. ಅರ್ಜಿ ಇತ್ಯರ್ಥವಾಗುವರೆಗೆ ತನಿಖೆಗೆ ತಡೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಅದನ್ನು ಹೈ ಕೋರ್ಟ್ ವಜಾಗೊಳಿಸಿತ್ತು.

ಇದನ್ನೂ ಓದಿ: ಬ್ಯಾಂಕ್​ನಲ್ಲಿ ಅಡವಿಟ್ಟಿದ್ದ ಆಸ್ತಿ ಸ್ವಾಧೀನಪಡಿಸಿಕೊಂಡಲ್ಲಿ ಬ್ಯಾಂಕ್​ ಸಹ ತನ್ನ ಹಕ್ಕನ್ನು ಮಂಡಿಸಬಹುದು: ಹೈಕೋರ್ಟ್

ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.