ETV Bharat / state

ಎನ್​ಆರ್​ಐಗಳಿಗೆ ನೆಲೆಸಿರುವ ದೇಶದಿಂದಲೇ ಮತಚಲಾಯಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​ - ಈಟಿವಿ ಭಾರತ ಕನ್ನಡ

ಎನ್​ಆರ್​ಐಗಳಿಗೆ ನೆಲೆಸಿರುವ ದೇಶದಿಂದಲೇ ಮುಂಬರುವ ಚುನಾವಣೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

high court
ಹೈಕೋರ್ಟ್​
author img

By

Published : May 2, 2023, 2:58 PM IST

Updated : May 2, 2023, 5:30 PM IST

ಬೆಂಗಳೂರು: ಇದೇ ಮೇ 10 ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ವಿಶ್ವದ ವಿವಿಧ ದೇಶಗಳಲ್ಲಿ ನೆಲೆಸಿರುವವರಿಗೆ ಅಲ್ಲಿಂದಲೇ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಸಾಗರೋತ್ತರ ಅನಿವಾಸಿ ಭಾರತೀಯ(ಎನ್‌ಆರ್‌ಐ)ರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ರದ್ದಗೊಳಿಸಿದೆ. ಸಾಗರೋತ್ತರ ಕನ್ನಡಿಗರು ಸಂಘದ ಜಂಟಿ ಕಾರ್ಯದರ್ಶಿ ಮತ್ತು 2008ರಿಂದ ಸೌದಿ ಅರೇಬಿಯಾದಲ್ಲಿ ಶುಶ್ರೂಷಕರಾಗಿ ಸೇವೆ ಸಲ್ಲಿಸುತ್ತಿರುವ ಎಂ ರವಿ ಎಂಬುವರು, ಚುನಾವಣೆಗೆ ಭಾರತೀಯ ರಾಯಭಾರ ಕಚೇರಿಗಳಲ್ಲಿ ಮತಗಟ್ಟೆ ತೆರೆಯುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ವಿಜಯ್‌ಕುಮಾರ್ ಎ ಪಾಟೀಲ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಅಲ್ಲದೆ, ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡಬೇಕು ಎನ್ನುವರು ದೀರ್ಘಕಾಲದ ಚುನಾವಣಾ ನ್ಯಾಯಶಾಸ್ತ್ರಕ್ಕೆ ವಿರುದ್ಧವಾಗಿದೆ. ಹೀಗಾಗಿ ಅರ್ಜಿಯನ್ನು ಪರಿಗಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.

ವಿಚಾರಣೆ ವೇಳೆ ಹಾಜರಿದ್ದ ಕೇಂದ್ರ ಚುನಾವಣಾ ಆಯೋಗದ ಪರ ವಕೀಲರು, ಮತದಾನ ಒಂದು ಮೂಲಭೂತ ಹಕ್ಕಲ್ಲ. ಅದು ಕಾನೂನಿನ ಜೀವವಾಗಿದೆ. ಹೀಗಾಗಿ ಇದೊಂದು ಕಾನೂನಾಗಿದೆ. ಇದನ್ನು ಹಕ್ಕಾಗಿ ಪರಿಗಣಿಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಶ್ವದ ವಿವಿಧ ದೇಶಗಳಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಮಂದಿ ಭಾರತೀಯರು ನೆಲೆಸಿದ್ದಾರೆ. ಫಿಲಫೈನ್ಸ್, ಇಟಲಿಯಂತಹ ದೇಶಗಳು ತಮ್ಮ ಅನಿವಾಸಿ ನಿವಾಸಿಗರಿಗೆ ಮತದಾನದ ಹಕ್ಕನ್ನು ನೀಡಿದೆ. ಅದೇ ರೀತಿಯಲ್ಲಿ ಭಾರತೀಯರಿಗೂ ಅವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು.

ಅರ್ಜಿಯಲ್ಲಿ ಏನನ್ನು ಕೋರಲಾಗಿತ್ತು? ಕೊರೊನಾ ಸಂದರ್ಭದಲ್ಲಿ ಹೊರ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಕರೆತರುವುದಕ್ಕಾಗಿ ಸಾಗರೋತ್ತರ ಕನ್ನಡಿಗರ ಸಂಘ ರಚನೆಯಾಗಿದೆ. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ತೊಂದರೆಗೆ ಸಿಲುಕಿದವರನ್ನು ಸುರಕ್ಷಿತವಾಗಿ ಕರೆತರುವುದಕ್ಕಾಗಿ ಸಂಘವನ್ನು ಪ್ರಾರಂಭಿಸಲಾಗಿದ್ದು, ಯುನೈಟೆಡ್ ಆಫ್ ಕಿಂಗಡಮ್‌ನಲ್ಲಿ ಸಂಘವನ್ನು ನೋಂದಾಯಿಸಲಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ನೆಲೆಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಸೇವೆ ಸಲ್ಲಿಸುತ್ತಿರುವವರಿಗಾಗಿ ಮತದಾನ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದೇ ರೀತಿಯಲ್ಲಿ ಅನಿವಾಸಿ ಭಾರತೀಯರಿಗೂ ಅವಕಾಶ ಮಾಡಿಕೊಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. ಈ ರೀತಿಯಲ್ಲಿ ಮತದಾನದ ಹಕ್ಕನ್ನು ಅನಿವಾಸಿ ಭಾರತೀಯರಿಗೆ ನೀಡಿದಲ್ಲಿ ಹೆಚ್ಚು ಸಹಕಾರಿಯಾಗಲಿದೆ. ಮತದಾರರ ಹಿತಾಸಕ್ತಿಗಳನ್ನು ರಕ್ಷಣೆ ಮಾಡಿದಂತಾಗುತ್ತದೆ. ಇದಕ್ಕೆ ಅವಕಾಶ ನೀಡದಿದ್ದಲ್ಲಿ ಅನಿವಾಸಿ ಭಾರತೀಯರು ಮತದಾನದ ಹಕ್ಕಿನಿಂದ ವಂಚಿತರಾಗಲಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಿದ್ದರು.

ಪ್ರಕರಣದ ಹಿನ್ನೆಲೆ ಏನು? ಅರ್ಜಿದಾರರು 2023ರ ಏಪ್ರಿಲ್ 17 ರಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಭಾರತದ ಪ್ರಜೆಗಳಾಗಿದ್ದು, ಹೊರ ದೇಶಗಳಲ್ಲಿ ನೆಲೆಸಿರುವವರಿಗೆ ಅಲ್ಲಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಗೆ ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: 15 ದಿನಗಳ ನಂತರ ನಿಮ್ಮ ಸರ್ಕಾರ ಇರಲ್ಲ, ನಿಮಗೆ ಕೊಡಬೇಕಾದ ಶಿಕ್ಷೆಯನ್ನು ಕಾಂಗ್ರೆಸ್ ಪಕ್ಷ ಕೊಡುತ್ತದೆ: ಡಿಕೆ ಶಿವಕುಮಾರ್​

Last Updated : May 2, 2023, 5:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.