ETV Bharat / state

ಐಎಂಎ ವಂಚನೆ ಪ್ರಕರಣ: ಎಲ್‌.ಸಿ ನಾಗರಾಜು ಕೋರಿಕೆ ವಜಾಗೊಳಿಸಿದ ಹೈಕೋರ್ಟ್​

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಮ್ಮ ವಿರುದ್ಧ ಎರಡೆರಡು ಎಫ್‌ಐಆರ್‌ ದಾಖಲಿಸಿದ್ದಾರೆ. ಹೀಗಾಗಿ ಎರಡನೇ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಎಲ್.ಸಿ ನಾಗರಾಜು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಎಲ್‌.ಸಿ ನಾಗರಾಜು ಕೋರಿಕೆ ವಜಾಗೊಳಿಸಿದ ಹೈಕೋರ್ಟ್​

author img

By

Published : Mar 26, 2020, 6:58 PM IST

ಬೆಂಗಳೂರು : ಸಾರ್ವಜನಿಕರಿಗೆ ನೂರಾರು ಕೋಟಿ ರೂಪಾಯಿ ಪಂಗನಾಮ ಹಾಕಿರುವ ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ದಾಖಲಿಸಿರುವ ಎರಡನೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ ನಾಗರಾಜು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಮ್ಮ ವಿರುದ್ಧ ಎರಡೆರಡು ಎಫ್‌ಐಆರ್‌ ದಾಖಲಿಸಿದ್ದಾರೆ. ಹೀಗಾಗಿ ಎರಡನೇ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಎಲ್.ಸಿ ನಾಗರಾಜು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ, ಅರ್ಜಿದಾರರ ಪರ ವಕೀಲರ ವಾದ ಮಾನ್ಯ ಮಾಡಲು ಒಪ್ಪದ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು. ಹೈಕೋರ್ಟ್ ತನ್ನ ಆದೇಶದಲ್ಲಿ, ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಎರಡನೇ ಎಫ್‌ಐಆರ್ ದಾಖಲಿಸಬಹುದು. ಇಂತಹ ಎರಡನೇ ಎಫ್‌ಐಆರ್ ಕೂಡ ಕಾನೂನು ಪ್ರಕಾರ ಊರ್ಜಿತಗೊಳ್ಳುತ್ತದೆ. ಆದರೆ, ಎರಡನೇ ಎಫ್‌ಐಆರ್ ಕುರಿತ ಚಾರ್ಜ್‌ಶೀಟ್ ಅನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ಅರ್ಜಿದಾರರು ಎರಡೂ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ಕೋರಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.