ETV Bharat / state

ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ವಿಚಾರ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ - ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ

ಅಪ್ರಾಪ್ತ ಪೀಠಾಧಿಪತಿ ನೇಮಕ ಮಾಡಿದನ್ನು ಪ್ರಶ್ನಿಸಿ ಶಿರೂರು ಮಠದ ಭಕ್ತರಾದ ಲಾತವ್ಯ ಆಚಾರ್ಯ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆ ಹಂಗಾಮಿ ಸಿಜೆ ಎಸ್.ಸಿ ಶರ್ಮಾ ನೇತೃತ್ವದ ವಿಭಾಗೀಯ ಕಳೆದ ಶುಕ್ರವಾರ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ
ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ
author img

By

Published : Sep 29, 2021, 12:56 PM IST

ಬೆಂಗಳೂರು: ಉಡುಪಿಯ ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿಯಾಗಿ ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.

ಬಾಲ ಸನ್ಯಾಸವನ್ನು ನಿರ್ಬಂಧಿಸುವಂತಹ ಯಾವುದೇ ನಿಯಮಗಳು ಅಥವಾ ಶಾಸನಗಳಿಲ್ಲ. ಇನ್ನು ಪ್ರಕರಣದಲ್ಲಿ ಅಪ್ರಾಪ್ತನ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ವಿಫಲರಾಗಿದ್ದಾರೆ. 800 ವರ್ಷಗಳಿಗೂ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯತೆ ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅಪ್ರಾಪ್ತ ಪೀಠಾಧಿಪತಿ ನೇಮಕ ಮಾಡಿದನ್ನು ಪ್ರಶ್ನಿಸಿ ಶಿರೂರು ಮಠದ ಭಕ್ತರಾದ ಲಾತವ್ಯ ಆಚಾರ್ಯ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಸಿಜೆ ಎಸ್.ಸಿ ಶರ್ಮಾ ನೇತೃತ್ವದ ವಿಭಾಗೀಯ ಕಳೆದ ಶುಕ್ರವಾರ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸಿದ ಪೀಠ, ಬೌದ್ಧ ಧರ್ಮದಲ್ಲಿಯೂ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ನೀಡಲಾಗುತ್ತದೆ. 18 ವರ್ಷ ತುಂಬುವ ಮೊದಲು ಸನ್ಯಾಸ ಸ್ವೀಕರಿಸಬಾರದು ಎಂದು ನಿರ್ಧರಿಸುವ ಯಾವುದೇ ಕಾನೂನು ಅಥವಾ ಶಾಸನಾತ್ಮಕ ನಿಯಮಗಳಿಲ್ಲ. ಹೀಗಾಗಿ ಅರ್ಜಿದಾರರ ಮನವಿಯನ್ನು ಪರಿಗಣಿಸಲಾಗದು ಎಂದು ಪೀಠ ತಿಳಿಸಿದೆ.

ಅರ್ಜಿದಾರರ ವಾದ: ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ವಾದಿಸಿ, ಅಷ್ಟಮಠಗಳಿಗೆ ಪ್ರತ್ಯೇಕ ಭಕ್ತಪರಂಪರೆ ಇದ್ದರೂ ವಾದಿರಾಜ ಮಠ ಶಿರೂರು ಮಠಕ್ಕೆ ಪೀಠಾಧಿಪತಿ ನೇಮಿಸಿದೆ. ಇನ್ನು ಅಪ್ರಾಪ್ತರ ಮೇಲೆ ವೈರಾಗ್ಯ ಹೇರುವುದಾಗಲಿ, ಪೀಠಾಧಿಪತಿ ಹೊಣೆ ಹೊರಿಸುವುದಾಗಲಿ ಮಾಡಬಾರದು. ಅಪ್ರಾಪ್ತರು ಆಸ್ತಿ ಹೊಣೆಗಾರಿಕೆ ನಿಭಾಯಿಸುವಂತಿಲ್ಲ. ಆದ್ದರಿಂದ, ಅಪ್ರಾಪ್ತರನ್ನು ಶಿರೂರು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನು ಬಾಹಿರ ಕ್ರಮ ಎಂದಿದ್ದರು.

ಸೋದೆ ಮಠದ ವಾದ: ಸೋದೆ ವಾದಿರಾಜ ಮಠದ ಪರ ವಕೀಲರು ವಾದಿಸಿ, ಉಡುಪಿಯ ಅಷ್ಟ ಮಠಗಳಲ್ಲಿ ಯಾವುದೇ ಒಂದು ಮಠದ ಪೀಠಾಧಿಪತಿ ಮೃತಪಟ್ಟಾಗ ಅದಕ್ಕೆ ಉತ್ತರಾಧಿಕಾರಿಯನ್ನು ಮತ್ತೊಂದು ಮಠದ ಪೀಠಾಧಿಪತಿ ನೇಮಕ ಮಾಡುತ್ತಾರೆ. ಇನ್ನು ಅರ್ಜಿದಾರರೆಲ್ಲರೂ ಮಠದ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ 2020ರ ಡಿಸೆಂಬರ್‌ನಲ್ಲಿ ಟ್ರಸ್ಟ್ ರಚಿಸಿಕೊಂಡಿದ್ದಾರೆ. ಮೊದಲ ಅರ್ಜಿದಾರ ಲಾತವ್ಯ ಆಚಾರ್ಯ ಅವರ ಮಗನನ್ನು ಮಠದ ಪೀಠಾಧಿಪತಿಯಾಗಿ ಮಾಡಬೇಕುಬ ಎಂದು ನಿರ್ಧರಿಸಿ, ಆಗದಿದ್ದಾಗ ಪಿಐಎಲ್ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದರು.

ಅಮಿಕಸ್ ಕ್ಯೂರಿ ವಾದ : ಅಮಿಕಸ್ ಕ್ಯೂರಿ ಎಸ್.ಎಸ್.ನಾಗಾನಂದ ವಾದಿಸಿ, ಸಂವಿಧಾನದ ವಿಧಿ 26ರಲ್ಲಿ ಧಾರ್ಮಿಕ ಸ್ವಾತಂತ್ರ್ಯಗಳನ್ನು ನೀಡಲಾಗಿದೆ. ಇದರಲ್ಲಿ ಯಾರೂ ಹಸ್ತಕ್ಷೇಪ ಮಾಡುವಂತಿಲ್ಲ. ಮಠಕ್ಕೆ ಶಾಸ್ತ್ರ ಸಂಪ್ರದಾಯಗಳ ಪ್ರಕಾರವೇ ಪೀಠಾಧಿಪತಿ ನೇಮಕ ಮಾಡಲಾಗಿದೆ.

ಅಪ್ರಾಪ್ತ ಎಂಬ ಕಾರಣ ಮುಂದಿಟ್ಟಿದ್ದರೂ, ಧಾರ್ಮಿಕ ವಿಷಯಗಳಿಗೆ ಬಂದಾಗ 14 ವರ್ಷ ವಯಸ್ಸನ್ನು ಪರಿಗಣಿಸಲಾಗುತ್ತದೆ. ಶಾಸ್ತ್ರಗಳ ಪ್ರಕಾರ 14 ವಯಸ್ಸು ದಾಟಿದವರು ವಿರಕ್ತಿ ನಿರ್ಧಾರ ಕೈಗೊಳ್ಳಬಹುದು. ಬೌದ್ಧರಲ್ಲಿ ಚಿಕ್ಕ ಮಕ್ಕಳಿಗೇ ಸನ್ಯಾಸ ನೀಡಲಾಗುತ್ತದೆ. ಈ ಪ್ರಕರಣದಲ್ಲಿ ಮಠಾಧಿಪತಿಗೆ 17 ವರ್ಷವಾಗಿದ್ದು, ಆಸಕ್ತಿಯಿಂದಲೇ ಸನ್ಯಾಸ ದೀಕ್ಷೆ ಪಡೆದಿದ್ದಾರೆ ಎಂದು ವಿವರಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.