ETV Bharat / state

ಕೆಜಿಎಫ್-2 ಚಿತ್ರದಲ್ಲಿ ಸಂಜಯ್ ದತ್ ನಟನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕೆಜಿಎಫ್-2 ಚಿತ್ರ ಚಿತ್ರೀಕರಣಕ್ಕೆ‌‌ ನೀಡಿರುವ ಅನುಮತಿಯನ್ನು ರದ್ದುಪಡಿಸುವಂತೆ ಕೋರಿ ಹುಬ್ಬಳ್ಳಿಯ ಜಿ.ಶಿವಶಂಕರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

High Court
High Court
author img

By

Published : Aug 17, 2020, 12:47 PM IST

ಬೆಂಗಳೂರು: ಬಾಲಿವುಡ್ ನಟ ಸಂಜಯ್ ದತ್ ನಟಿಸುತ್ತಿರುವ ಕೆಜಿಎಫ್-2 ಸಿನಿಮಾ ಚಿತ್ರೀಕರಣಕ್ಕೆ‌‌ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಚಿತ್ರಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸುವಂತೆ ಕೋರಿ ಹುಬ್ಬಳ್ಳಿಯ ಜಿ.ಶಿವಶಂಕರ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ದೇಶದ್ರೋಹ ಆರೋಪದಡಿ ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದರಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ ಚಿತ್ರಕ್ಕೆ ನೀಡಿರುವ ಅನುಮತಿ ರದ್ದುಪಡಿಸಿಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಶಿಕ್ಷೆಗೆ ಒಳಗಾದ ವ್ಯಕ್ತಿಯೊಬ್ಬರು ಸಿನಿಮಾದಲ್ಲಿ ನಟಿಸಬಾರದು ಎಂದು ಯಾವ ಕಾನೂನು ಹೇಳಿದೆ?, ನಿಮ್ಮ ಅರ್ಜಿದಾರ ಒಬ್ಬರ ನಿಲುವು ಇಡೀ ಕನ್ನಡಿಗರ ನಿಲುವು ಎಂದು ಹೇಗೆ ನಿರ್ಣಯಿಸುತ್ತೀರಿ?, ನಿಮ್ಮ ಅರ್ಜಿದಾರರು ಇಡೀ ಕನ್ನಡಿಗರನ್ನು ಯಾವ ರೀತಿ ಪ್ರತಿನಿಧಿಸುತ್ತಾರೆ ಎಂದು ಪ್ರಶ್ನಿಸಿತು.

ಪೀಠದ ಪ್ರಶ್ನೆಗೆಳಿಗೆ ಅರ್ಜಿದಾರರ ಪರ ವಕೀಲರಿಂದ ಸೂಕ್ತ ಉತ್ತರ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಮನವಿಗೆ ಯಾವುದೇ ಕಾನೂನಾತ್ಮಕ ಆಧಾರವಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.

ಅರ್ಜಿದಾರರ ಮನವಿ ಏನಿತ್ತು?:
ಕೆಜಿಎಫ್-2 ಚಿತ್ರದಲ್ಲಿ ನಟಿಸುತ್ತಿರುವ ಸಂಜಯ್ ದತ್ ವಿರುದ್ಧ ಟಾಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಯೂ ಆಗಿತ್ತು.‌ ಈ ಬಗ್ಗೆ ತಿಳಿದಿದ್ದರೂ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಂಜಯ್ ದತ್ ನಟನೆಯ ಕೆಜಿಎಫ್-2 ಸಿನಿಮಾದ ಚಿತ್ರೀಕರಣಕ್ಕೆ ಹಾಗೂ ಬಿಡುಗಡೆಗೆ ಅನುಮತಿ ನೀಡಿದ್ದಾರೆ.‌ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಸಂಜಯ್ ದತ್ ಅವರನ್ನು ಬಳಸಿಕೊಂಡು ಚಿತ್ರ ನಿರ್ಮಿಸಲಾಗುತ್ತಿದೆ. ಇದರಿಂದ ರಾಜ್ಯದ ಜನತೆಯ ಘನತೆಗೆ ಧಕ್ಕೆ ಉಂಟಾಗಿದೆ‌ ಎಂದು‌ ಅರ್ಜಿದಾರರು ದೂರಿದ್ದರು.

ಅಲ್ಲದೆ ಸಿನಿಮಾದ ಚಿತ್ರೀಕರಣಕ್ಕೆ ಹೊಂಬಾಳೆ ಫಿಲ್ಮ್ ಸಂಸ್ಥೆಗೆ ನೀಡಿರುವ ಅನುಮತಿ ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಮತ್ತು ಅರ್ಜಿ ಇತ್ಯರ್ಥಗೊಳ್ಳುವವರೆಗೆ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದರು. ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೊಂಬಾಳೆ ಫಿಲ್ಮ್ ಸಂಸ್ಥೆ ಹಾಗೂ ನಟ ಸಂಜಯ್ ದತ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.