ETV Bharat / state

ಹೆಚ್‌ಡಿಕೆ ಕುಟುಂಬಸ್ಥರಿಂದ ಜಮೀನು ಒತ್ತುವರಿ ಆರೋಪ: ಕಂದಾಯ ಇಲಾಖೆ ಪ್ರಮಾಣ ಪತ್ರಕ್ಕೆ ಹೈಕೋರ್ಟ್​ ಅಸಮಾಧಾನ - high court of karnataka

ಮಾಜಿ ಮುಖ್ಯಮಂತ್ರಿ ಹೆಚ್.​ಡಿ.ಕುಮಾರಸ್ವಾಮಿ ಮತ್ತು ಕುಟುಂಬಸ್ಥರು ಗೋಮಾಳದ ಜಮೀನನ್ನು ಒತ್ತುವರಿ ಮಾಡಿದ್ದಾರೆ ಎಂದು ಮಾಜಿ ಸಂಸದ ಜಿ.ಮಾದೇಗೌಡ ಲೋಕಾಯುಕ್ತಕ್ಕೆ ದೂರು ನೀಡಿ ತನಿಖೆ ನಡೆಸುವಂತೆ ಕೋರಿದ್ದರು.

high-court-displeased-with-revenue-department-certificate
ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬಸ್ಥರಿಂದ ಜಮೀನು ಒತ್ತುವರಿ ಆರೋಪ
author img

By

Published : Feb 20, 2023, 9:30 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತವರ ಸಂಬಂಧಿಗಳಾದ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ಸಾವಿತ್ರಮ್ಮ ವಿರುದ್ಧ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರದ ಭೂಮಿ ಕಬಳಿಕೆ ಆರೋಪ ಸಂಬಂಧ ಕಂದಾಯ ಇಲಾಖೆಯ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರಿ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಅನುಷ್ಠಾನಗೊಳಿಸುವಂತೆ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಈ ಆದೇಶವನ್ನು ಅನುಷ್ಠಾನ ಮಾಡದ ಕ್ರಮವನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ಕೆ.ರಾಜೇಶ್‌ ರೈ ಅವರ ನೇತೃತ್ವದ ವಿಭಾಗೀಯ ಪೀಠವು ಕಂದಾಯ ಇಲಾಖೆ ವರದಿಗೆ ಅಸಮಾಧಾನ ವ್ಯಕ್ತಪಡಿಸಿತು.

ಮತ್ತೆ ವರದಿ ಸಲ್ಲಿಸಿ: ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಿರುವ ಸರ್ವೆ ನಂಬರ್‌ಗಳ ಕುರಿತ ತಹಶೀಲ್ದಾರ್‌ ರಿಂದ ಹೊರಡಿಸಿರುವ ತೆರವು ನೋಟಿಸ್‌, ಸರ್ಕಾರದ ಭೂಮಿ ಒತ್ತುವರಿ ಮಾಡಿಕೊಂಡಿರುವುದರ ಕುರಿತಾದ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಮಾಡಿರುವ ಆದೇಶ, ಉಪವಿಭಾಗಾಧಿಕಾರಿ ಆದೇಶವನ್ನು ಎತ್ತಿ ಹಿಡಿದಿರುವ ಜಿಲ್ಲಾಧಿಕಾರಿಯ ಆದೇಶ, ಗೋಮಾಳ ಒತ್ತುವರಿ ತೆರವಿನ ಬಳಿಕ ಮಹಜರ್‌ ನಡೆಸಿ, ಅದನ್ನು ವಶಕ್ಕೆ ಪಡೆದಿರುವುದು ಮತ್ತು ಅದನ್ನು ವಶಕ್ಕೆ ಪಡೆದಿರುವ ವರದಿಗಳು, 14 ಎಕರೆ 4 ಗುಂಟೆ ಭೂಮಿಯನ್ನು 8 ಎಕರೆ 30 ಗುಂಟೆಗೆ ಇಳಿಸಿರುವ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಮಾಜಿ ಸಂಸದ ಜಿ.ಮಾದೇಗೌಡರು ಲೋಕಾಯುಕ್ತಕ್ಕೆ ದೂರು ನೀಡಿ, ಕುಮಾರಸ್ವಾಮಿ ಮತ್ತು ಅವರ ಇತರೆ ಕುಟುಂಬ ಸದಸ್ಯರು ಹತ್ತಾರು ಎಕರೆ ಗೋಮಾಳ ಒತ್ತುವರಿ ಮಾಡಿಕೊಂಡಿರುವುದರ ವಿರುದ್ಧ ವಿಸ್ತೃತ ತನಿಖೆ ನಡೆಸುವಂತೆ ಕೋರಿದ್ದರು. ಈ ದೂರನ್ನು ವಿಚಾರಣೆ ನಡೆಸಿದ್ದ ಲೋಕಾಯುಕ್ತರು 2014ರ ಆಗಸ್ಟ್ 5ರಂದು ಒತ್ತುವರಿ ತೆರವು ಮಾಡುವಂತೆ ಕಂದಾಯ ಇಲಾಖೆಗೆ ನಿರ್ದೇಶಿಸಿದ್ದರು. ಅಲ್ಲದೇ, ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಸರ್ವೆ ನಂ. 7, 8, 9, 10, 16, 17 ಮತ್ತು 79ರಲ್ಲಿ ಮಂಜೂರಾಗಿರುವ ಗೋಮಾಳದ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಸ್ತೃತ ತನಿಖೆ ನಡೆಸಬೇಕು. ಒಂದೊಮ್ಮೆ ಆ ಭೂಮಿ ಒತ್ತುವರಿಯಾಗಿದ್ದರೆ ಅದನ್ನು ಒತ್ತುವರಿ ಮಾಡಿಕೊಂಡಿರುವವರಿಂದ ಸರ್ಕಾರಿ ಭೂಮಿ ವಾಪಸ್ ಪಡೆಯಲು ಕಾನೂನಾತ್ಮಕ ಕ್ರಮಕೈಗೊಳ್ಳಬೇಕು.

ಸರ್ಕಾರದ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿರುವವರು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮಕೈಗೊಳ್ಳಬೇಕು. ನಾಲ್ಕು ತಿಂಗಳಲ್ಲಿ ಈ ಕ್ರಮವಾಗಬೇಕು. ಆನಂತರ 15ದಿನಗಳಲ್ಲಿ ರಿಜಿಸ್ಟ್ರಾರ್​ಗೆ ಅನುಪಾಲನಾ ವರದಿ ಸಲ್ಲಿಸುವಂತೆ ಲೋಕಾಯುಕ್ತರು 2014ರ ಆಗಸ್ಟ್ 4ರಂದು ಆದೇಶಿಸಿದ್ದರು. ಇದನ್ನು ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ಎತ್ತಿ ಹಿಡಿದಿತ್ತು. ಈ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಕಡಿಮೆ: ಸ್ಪೀಕರ್ ಕಾಗೇರಿ ಅಸಮಾಧಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.