ETV Bharat / state

ಖಾಸಗಿ ಬಸ್‌ಗಳಿಗೂ 'ಶಕ್ತಿ ಯೋಜನೆ' ವಿಸ್ತರಣೆ ಕೋರಿ ಅರ್ಜಿ: ಹೈಕೋರ್ಟ್ ಹೇಳಿದ್ದೇನು? - ಮಹಿಳೆಯರಿಗೆ ಉಚಿತ ಪ್ರಯಾಣ

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೆ ವಿಸ್ತರಿಸಲು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

high-court-disposed-petition-seeking-extension-of-shakti-scheme-to-private-buses
ಖಾಸಗಿ ಬಸ್‌ಗಳಿಗೂ 'ಶಕ್ತಿ ಯೋಜನೆ' ವಿಸ್ತರಣೆ ಕೋರಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
author img

By ETV Bharat Karnataka Team

Published : Jan 6, 2024, 7:40 AM IST

Updated : Jan 6, 2024, 8:02 AM IST

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ 'ಶಕ್ತಿ ಯೋಜನೆ'ಯನ್ನು ಖಾಸಗಿ ಬಸ್​​ಗಳಿಗೂ ವಿಸ್ತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್​​ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ ಕುಮಾರ್ ಶೆಟ್ಟಿ ಎಂಬುವರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಜ್ಯದಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ 65 ವರ್ಷಗಳ ಇತಿಹಾಸವಿದೆ. ಸುಮಾರು 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಅಧಿಕ ಖಾಸಗಿ ಬಸ್​ಗಳು ಸೇವೆ ಒದಗಿಸುತ್ತಿವೆ. ರಾಜ್ಯದಲ್ಲಿ 75 ಸಾವಿರ ಕಾರ್ಮಿಕರು ಖಾಸಗಿ ಬಸ್​​ಗಳ ಮೇಲೆ ಅವಲಂಬಿತರಾಗಿದ್ದಾರೆ. ಅಲ್ಲದೇ ಬಸ್ ಆಪರೇಟರ್​​ಗಳು ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದು, ವಾರ್ಷಿಕ 1,620 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ ಎಂದರು.

ಆದರೆ, ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಆಪರೇಟರ್​ಗಳ ಸಂಕಷ್ಟ ಪ್ರಾರಂಭವಾಗಿದೆ. ಹಾಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯ ಮಾಡಬೇಕು. ಸರ್ಕಾರಿ ಬಸ್‌ಗಳಂತೆ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಪ್ರಯಾಣ ವೆಚ್ಚವನ್ನು ಸರ್ಕಾರ ಖಾಸಗಿ ಬಸ್ ಆಪರೇಟರ್​ಗಳಿಗೆ ಮರು ಪಾವತಿ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ 2023 ರ ಜುಲೈ 29 ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: 5 ವರ್ಷದೊಳಗಿನ ಮಗು ತಾಯಿಯೊಂದಿಗೆ ನೆಲೆಸಿರುವುದು ಕಾನೂನು ಬಾಹಿರವಲ್ಲ: ಹೈಕೋರ್ಟ್

Last Updated : Jan 6, 2024, 8:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.