ETV Bharat / state

ಬಿಸಿಯೂಟದ ಬದಲು ಪಡಿತರ.. ಅಸಮರ್ಪಕ ವಿತರಣೆ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ - Distribution of rations instead of mid day meal

ಉಪ್ಪು ಮತ್ತು ಎಣ್ಣೆಯನ್ನು ಕಡಿಮೆ ದರಕ್ಕೆ ಸಿಗುತ್ತವೆ ಎಂಬ ಕಾರಣಕ್ಕೆ ಹೆಚ್ಚಾಗಿ ನೀಡುವ ಅಗತ್ಯವಿಲ್ಲ. ಅವುಗಳನ್ನು ಕಡಿಮೆ ಮಾಡಿ ಬೇಳೆ ಹಾಗೂ ಇತರೆ ಧವಸಗಳನ್ನು ನೀಡಲು ಕ್ರಮ ಕೈಗೊಳ್ಳಬಹುದು..

High Court dissatisfaction about govt decision
ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ
author img

By

Published : Dec 8, 2020, 9:45 PM IST

Updated : Dec 8, 2020, 9:52 PM IST

ಬೆಂಗಳೂರು : ಲಾಕ್‌ಡೌನ್ ಬಳಿಕ ಸ್ಥಗಿತಗೊಂಡಿರುವ ಬಿಸಿಯೂಟ ಯೋಜನೆ ಬದಲಿಗೆ ಪಡಿತರ ವಿತರಿಸುತ್ತಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪಡಿತರ ಹಂಚಿಕೆಗೆ ಸೂಕ್ತ ನಿಯಮಗಳನ್ನು ಅನುಸರಿಸುವಂತೆ ತಾಕೀತು ಮಾಡಿದೆ.

ಲಾಕ್‌ಡೌನ್ ಬಳಿಕ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ಪರಿಹರಿಸಲು ಕೋರಿ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹಿಂದಿನ ವಿಚಾರಣೆ ವೇಳೆ ಲಾಕ್‌ಡೌನ್ ಬಳಿಕ ಪಡಿತರ ವಿತರಣೆಯಲ್ಲಿ ಆಗುತ್ತಿರುವ ಗೊಂದಲಗಳಿಗೆ ವಿವರಣೆ ನೀಡಲು ಪ್ರಾಥಮಿಕ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿಗಳು ಪಡಿತರವನ್ನು ಯಾವ ರೀತಿಯಲ್ಲಿ ಹಂಚಿಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಕಾರ್ಯದರ್ಶಿ ಸಮರ್ಪಕ ಉತ್ತರ ನೀಡಿಲಿಲ್ಲ. ಮತ್ತೆ ಪ್ರಶ್ನಿಸಿದ ಪೀಠ, ಪ್ರತಿ ಮಗುವಿಗೆ ಎಷ್ಟು ತೊಗರಿ ಬೇಳೆ ವಿತರಿಸುತ್ತೀರಿ ಎಂದು ಪ್ರಶ್ನಿಸಿತು. ಆಗಲೂ ಸಮರ್ಪಕ ಉತ್ತರ ನೀಡದ ಉಮಾಶಂಕರ್, ಮಾರುಕಟ್ಟೆಯಲ್ಲಿ ಬೆಲೆ ಹೇಗಿರುತ್ತದೆಯೋ ಅದರ ಮೇಲೆ ತೊಗರಿ ಬೇಳೆ ಎಷ್ಟು ನೀಡಬೇಕು ಎಂಬುದು ನಿರ್ಧಾರವಾಗುತ್ತದೆ. ಇವೆಲ್ಲವನ್ನೂ ಇಲಾಖೆಯ ಆಯುಕ್ತರು ನೋಡಿಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ : ಕನಿಷ್ಠ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಸಾಧ್ಯವಿಲ್ಲ: ಸಚಿವ ಮಾಧುಸ್ವಾಮಿ

ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಇಲಾಖೆ ಮುಖ್ಯಸ್ಥರಾಗಿ ನಿಮಗೇ ಎಷ್ಟು ತೊಗರಿ ಬೇಳೆ ವಿತರಿಸಬೇಕು ಎಂಬುದರ ಲೆಕ್ಕ ಗೊತ್ತಿಲ್ಲದಿದ್ದರೆ ಹೇಗೆ ಎಂದು ಕಟುವಾಗಿ ಪ್ರಶ್ನಿಸಿತು. ಹಾಗೆಯೇ, ಮಾರುಕಟ್ಟೆ ಬೆಲೆ ಆಧಾರದಲ್ಲಿ ಪಡಿತರ ಎಷ್ಟು ಪ್ರಮಾಣದಲ್ಲಿ ಪಡಿತರ ವಿತರಿಸಬೇಕು ಎಂಬುದನ್ನು ನಿರ್ಧರಿಸುವುದು ಸರಿಯಲ್ಲ. ಬದಲಿಗೆ ಪ್ರತಿ ಮಗುವಿಗೆ ಇಂತಿಷ್ಟು ಎಂದು ಪಡಿತರ ವಿತರಿಸುವ ನಿಯಮಗಳನ್ನು ಅನುಸರಿಸಬೇಕು ಎಂದು ತಾಕೀತು ಮಾಡಿತು.

ಅಲ್ಲದೇ ಉಪ್ಪು ಮತ್ತು ಎಣ್ಣೆಯನ್ನು ಕಡಿಮೆ ದರಕ್ಕೆ ಸಿಗುತ್ತವೆ ಎಂಬ ಕಾರಣಕ್ಕೆ ಹೆಚ್ಚಾಗಿ ನೀಡುವ ಅಗತ್ಯವಿಲ್ಲ. ಅವುಗಳನ್ನು ಕಡಿಮೆ ಮಾಡಿ ಬೇಳೆ ಹಾಗೂ ಇತರೆ ಧವಸಗಳನ್ನು ನೀಡಲು ಕ್ರಮ ಕೈಗೊಳ್ಳಬಹುದು ಎಂದು ಸಲಹೆ ನೀಡಿತು.

ಅಲ್ಲದೇ, ಆಗಸ್ಟ್‌ನಿಂದ ಈವರೆಗೆ ಬಾಕಿ ಇರುವ ಪಡಿತರವನ್ನು ಶೀಘ್ರ ತಲುಪಿಸಲು ಕ್ರಮಕೈಗೊಳ್ಳಬೇಕು. ಹಾಗೆಯೇ, ಮಾರ್ಚ್‌ನಿಂದ ಈವರೆಗೆ ಅಂಗನವಾಡಿಗಳಲ್ಲಿ ಪೂರೈಕೆಯಾಗಿರುವ ಮತ್ತು ವಿತರಣೆಯಾಗಿರುವ ಪಡಿತರದ ಕುರಿತು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಆಹಾರ ಧಾನ್ಯ ಒದಗಿಸಲು ಡಿಸೆಂಬರ್ 5ರಂದೇ ಆದೇಶ ಹೊರಡಿಸಲಾಗಿದೆ. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ ಒಂದು ಕೆಜಿ ಆಯೋಡೈಸ್ಡ್‌ ಉಪ್ಪು, ತೊಗರಿ ಬೇಳೆ ಮತ್ತು ಅಡುಗೆ ಎಣ್ಣೆಯನ್ನು ಐದು ತಿಂಗಳ ಲೆಕ್ಕಾಚಾರದಲ್ಲಿ (ಆಗಸ್ಟ್– 2020 ರಿಂದ ಏಪ್ರಿಲ್–2021 ತನಕ ಅನ್ವಯವಾಗಲಿದೆ) ವಿತರಿಸಲಾಗುವುದು ಎಂದು ಸರ್ಕಾರ ತನ್ನ ವರದಿಯಲ್ಲಿ ತಿಳಿಸಿದೆ.

Last Updated : Dec 8, 2020, 9:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.