ETV Bharat / state

ಮೃತ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಗೆ ಪಿಂಚಣಿ ನೀಡುವಂತೆ ನಿರ್ದೇಶಿಸಿದ್ದ ಆದೇಶಕ್ಕೆ ಹೈಕೋರ್ಟ್ ವಿಭಾಗಿಯ ಪೀಠ ತಡೆ - ಬಸಪ್ಪ ಹಿತ್ತಲಮನಿ

ಮೃತ ಸ್ವಾತಂತ್ರ ಹೋರಾಟಗಾರನ ಪತ್ನಿಯ ಪಿಂಚಣಿಗೆ ನಿರ್ದೇಶಿಸಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್​ ವಿಭಾಗಿಯ ಪೀಠದಿಂದ ತಡೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Jul 25, 2023, 9:40 PM IST

ಬೆಂಗಳೂರು : ಮೃತ ಸ್ವಾತಂತ್ರ್ಯ ಹೋರಾಟಗಾರನ ವೃದ್ಧ ಪತ್ನಿಗೆ ಪಿಂಚಣಿ ಮತ್ತು ಹಿಂಬಾಕಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಏಕ ಸದಸ್ಯ ಪೀಠ ಹೊರಡಿಸಿದ್ದ ತೀರ್ಪನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿ ಆದೇಶಿಸಿದೆ.

ಪಿಂಚಣಿ ಮತ್ತು ಹಿಂಬಾಕಿ ಪಾವತಿಸಲು ಸೂಚನೆ ನೀಡಿದ್ದ ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಮತ್ತು ಕೆ. ರಾಜೇಶ್​ ರೈ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಅಲ್ಲದೇ, ಕೇಂದ್ರ ಸರ್ಕಾರಿ ಸನ್ಮಾನ್ ಪಿಂಚಣಿ ಯೋಜನೆಯ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು 2014ರಲ್ಲಿ ಮಾರ್ಗಸೂಚಿ ಪ್ರಕಟಿಸಿದೆ. ಅದನ್ನು ರಾಜ್ಯ ಸರ್ಕಾರ ಸಹ ಪಾಲಿಸುತ್ತಿದೆ. ಆ ಮಾರ್ಗಸೂಚಿ ಪ್ರಕಾರ, ಸ್ವಾತಂತ್ರ್ಯ ಹೋರಾಟಗಾರ ಅಥವಾ ಹೋರಾಟಗಾರ್ತಿ ಸಾವನ್ನಪ್ಪಿದ ನಂತರ ಅವರ ಹೆಸರಿನಲ್ಲಿ ಪಿಂಚಣಿ ವಿತರಿಸುವಂತಿಲ್ಲ. ಜತೆಗೆ, ಹೋರಾಟಗಾರ ಮತ್ತು ಹೋರಾಟಗಾರ್ತಿ ವಿಷಯವು ಪರಿಶೀಲನೆಯಲ್ಲಿದ್ದರೂ ಸಹ ಪಿಂಚಣಿ ಪಾವತಿಸುವಂತಿಲ್ಲ. ಅದರಂತೆ ರಾಜ್ಯ ಸರ್ಕಾರವು ಪ್ರಕರಣದಲ್ಲಿ ಮೃತ ಸ್ವಾತಂತ್ರ್ಯ ಹೋರಾಟಗಾರನ ವೃದ್ಧ ಪತ್ನಿಯಾದ ಬೆಳಗಾವಿಯ ನಿವಾಸಿ ಸಾವಂತ್ರವ್ವ (89) ಅವರಿಗೆ ಪಿಂಚಣಿ ನಿರಾಕರಿಸಿ, ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಸೂಕ್ತವಾಗಿದೆ ಎಂದು ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.

ಕ್ವಿಟ್ ಇಂಡಿಯಾದಲ್ಲಿ ಭಾಗಿ : ಭಾರತಬಿಟ್ಟು ಹೋಗಲು ಬ್ರಿಟೀಷರನ್ನು ಆಗ್ರಹಿಸಿ 1942ರಲ್ಲಿ ನಡೆದಿದ್ದ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಸಾವಂತ್ರವ್ವ ಪತಿ ಬಸಪ್ಪ ಹಿತ್ತಲಮನಿ ಭಾಗವಹಿಸಿ ಸ್ವಾತಂತ್ರ್ಯ ಹೋರಾಟ ನಡೆಸಿದ್ದರು. 1969ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಿಂಚಣಿ ಯೋಜನೆ ರೂಪಿಸಲಾಗಿತ್ತು. ಪಿಂಚಣಿ ಕೋರಿ ಅಗತ್ಯ ದಾಖಲೆಗಳೊಂದಿಗೆ ಬಸಪ್ಪ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. 1992 ರ ಸೆ.10ರಂದು ಬಸಪ್ಪಗೆ ಪಿಂಚಣಿ ನೀಡಲು ಸರ್ಕಾರ ಆದೇಶಿಸಿತ್ತು. ಆದರೆ, ದಾಖಲೆಗಳ ಕೊರೆತೆಯಿಂದ ಪಿಂಚಣಿ ಪಾವತಿಯನ್ನು 2000ರಲ್ಲಿ ಸರ್ಕಾರ ಸ್ಥಗಿತಗೊಳಿಸಿತ್ತು.

ಆ ಕ್ರಮ ಪ್ರಶ್ನಿಸಿ ಬಸಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಸಪ್ಪ ಮನವಿ ಪರಿಗಣಿಸಲು ಹೈಕೋರ್ಟ್ ಸೂಚಿಸಿದ್ದರೂ ಸಹ 2002ರಲ್ಲಿ ಸರ್ಕಾರ ಮತ್ತೆ ಪಿಂಚಣಿ ನಿರಾಕರಿಸಿತ್ತು. ಈ ನಡುವೆ 2003ರಲ್ಲಿ ಬಸಪ್ಪ ಸಾವನ್ನಪ್ಪಿದರು. ಇದಾದ 12 ವರ್ಷ ಬಳಿಕ ಅಂದರೆ 2014ರಲ್ಲಿ ಬಸಪ್ಪ ಪತ್ನಿ ಸಾವಂತ್ರವ್ವ ಪಿಂಚಣಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹಲವು ಸುತ್ತಿನ ವ್ಯಾಜ್ಯಗಳು ನಡೆದಿತ್ತು. ಅಂತಿಮವಾಗಿ ಸಾವಂತ್ರವ್ವಗೆ ಪಿಂಚಣಿ ಮತ್ತು ಹಿಂಬಾಕಿ ಪಾವತಿಸುವಂತೆ 2021 ರ ಸೆ. 14ರಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು. ಅದನ್ನು ಸರ್ಕಾರ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿತ್ತು.

ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ, 1992 ರಿಂದ ಬಸಪ್ಪಗೆ ನೀಡುತ್ತಿದ್ದ ಪಿಂಚಣಿಯನ್ನು ಅಗತ್ಯ ದಾಖಲೆಗಳ ಕೊರತೆಯಿಂದ 2000ರಲ್ಲಿ ನಿಲ್ಲಿಸಲಾಗಿತ್ತು. ಬಸಪ್ಪ ಮರಣ ನಂತರದ 12 ವರ್ಷ ಬಳಿಕ ಸಾವಂತ್ರವ್ವ ಪಿಂಚಣಿ ಕೋರಿದ್ದರು. ಸರ್ಕಾರವು ಆಕೆಯ ಮನವಿಯನ್ನು ಕೂಲಂಕಷವಾಗಿ ಪರಿಶೀಲಿಸಿ ನಿಯಮದಲ್ಲಿ ಅವಕಾಶವಿಲ್ಲದ ಕಾರಣ ಪಿಂಚಣಿ ನಿರಾಕರಿಸಿದೆ. ಹೀಗಿದ್ದರೂ ಏಕ ಸದಸ್ಯ ನ್ಯಾಯಪೀಠವು ಸಾವಂತ್ರವ್ವಗೆ ಪಿಂಚಣಿ ನೀಡಲು ನಿರ್ದೇಶಿಸಿರುವುದು ಸರಿಯಲ್ಲ ಎಂದು ಪೀಠ ಅಭಿಪ್ರಾಯಪಟ್ಟು ಈ ಆದೇಶ ನೀಡಿದೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡಲು ವಿಳಂಬ.. ಬ್ಯಾಂಕ್​ ಮತ್ತು ಕೆಂದ್ರಕ್ಕೆ ಹೈಕೋರ್ಟ್​ನಿಂದ ₹ 1 ಲಕ್ಷ ದಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.