ETV Bharat / state

ಡಿ.ಕೆ.ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

author img

By

Published : Apr 19, 2023, 9:49 PM IST

Updated : Apr 19, 2023, 9:56 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

high-court-extended-the-injunction-cbi-investigation-against-dk-shivakumar
ಡಿ.ಕೆ.ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ.30 ಕ್ಕೆ ಮುಂದೂಡಿದೆ. ತಮ್ಮ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆ ರದ್ದು ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ನಡೆಸಿತು.

ವಿಚಾರಣೆ ವೇಳೆ ಸಿಬಿಐ ಪರ ಹಾಜರಾಗಿ ವಾದ ಮಂಡಿಸಿದ ವಕೀಲ ಪಿ.ಪ್ರಸನ್ನ ಕುಮಾರ್, ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿ ಕುರಿತ ವಿಚಾರಣೆಯನ್ನು ಈಗಾಗಲೇ ಪೂರ್ಣಗೊಳಿಸಿರುವ ನ್ಯಾಯಪೀಠವು (ನ್ಯಾ.ಕೆ. ನಟರಾಜನ್) ತೀರ್ಪು ಕಾಯ್ದಿರಿಸಿದೆ. ಒಂದೊಮ್ಮೆ ಸರ್ಕಾರದ ಆದೇಶವನ್ನು ನ್ಯಾಯಾಲಯವು ರದ್ದುಪಡಿಸಿದರೆ, ಈ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಳ್ಳಲಿದೆ. ಆದ್ದರಿಂದ ನ್ಯಾಯಪೀಠ ಮತ್ತೊಂದು ಅರ್ಜಿ ಕುರಿತ ತೀರ್ಪು ಪ್ರಕಟ ಮಾಡುವವರೆಗೂ ಈ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.

ಸಿಬಿಐ ಪರ ವಕೀಲರ ವಾದವನ್ನು ಪರಿಗಣಿಸಿದ ನ್ಯಾ.ಕೆ. ನಟರಾಜನ್ ಅವರ ಪೀಠ, ಅರ್ಜಿ ವಿಚಾರಣೆಯನ್ನು ಮೇ ಅಂತ್ಯಕ್ಕೆ ಮುಂದೂಡಿತು. ಅಲ್ಲದೆ, ಅರ್ಜಿ ಕುರಿತ ಮುಂದಿನ ವಿಚಾರಣೆಗೆ ಅರ್ಜಿದಾರ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ಸಹ ವಿಸ್ತರಿಸಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ: ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ ೨೦೨೦ರ ಅ.೩ರಂದು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೇ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿರುವ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಬ್ಯಾಂಕ್ ಪಾಸ್‌ಬುಕ್‌ನಲ್ಲಿ ನಮೂದಾಗುವ ಮೊತ್ತವನ್ನು ವ್ಯಕ್ತಿಯ ಆದಾಯವೆಂದು ಪರಿಗಣಿಸಲಾಗದು: ಹೈಕೋರ್ಟ್

Last Updated : Apr 19, 2023, 9:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.