ETV Bharat / state

ಡಿ ಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

author img

By

Published : Mar 24, 2023, 10:44 PM IST

ಹೈಕೋರ್ಟ್ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ಮಾ.31ರವರೆಗೆ ವಿಸ್ತರಿಸಿ ಆದೇಶಿಸಿದೆ.

high-court-extends-stay-on-cbi-probe-against-dk
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್..

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ಹೈಕೋರ್ಟ್ ಮಾ.31ರವರೆಗೆ ವಿಸ್ತರಿಸಿ ಆದೇಶಿಸಿದೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಈ ಆದೇಶ ಮಾಡಿದೆ.

ಅರ್ಜಿಯ ಹಿಂದಿನ ವಿಚಾರಣೆ ವೇಳೆ ಡಿ.ಕೆ. ಶಿವಕುಮಾರ್ ಪರ ವಕೀಲರು, ಪ್ರಕರಣ ಕುರಿತು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಿದ ಆದೇಶ ಪ್ರಶ್ನಿಸಲಾದ ಮತ್ತೊಂದು ಅರ್ಜಿ ಬೇರೆ ನ್ಯಾಯಪೀಠದ ಮುಂದಿದೆ. ಅದನ್ನೂ ಇದೇ ಪೀಠದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿದರು. ಇದಕ್ಕೆ ನ್ಯಾಯಪೀಠ ಸಹಮತ ವ್ಯಕ್ತಪಡಿಸಿದ್ದರೂ ಈವರೆಗೂ ಅರ್ಜಿ ವರ್ಗಾವಣೆಯಾಗಿರಲಿಲ್ಲ. ಇದರಿಂದ ಶುಕ್ರವಾರ ಅಸಮಾಧಾನಗೊಂಡ ನ್ಯಾಯಮೂರ್ತಿಗಳು ಮತ್ತೊಂದು ಪೀಠದಲ್ಲಿರುವ ಅರ್ಜಿಯನ್ನು ಏಕೆ ವರ್ಗಾವಣೆಯಾಗಿಲ್ಲ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್, ಆ ಪೀಠದಿಂದ ಅರ್ಜಿ ವರ್ಗಾವಣೆಯಾಗುವುದಕ್ಕೆ ಸಿಬಿಐ ಯಾವುದೇ ಅಭ್ಯಂತರ ವ್ಯಕ್ತಪಡಿಸುವುದಿಲ್ಲ. ಆ ಕುರಿತು ಲಿಖಿತವಾದ ಆದೇಶ ಮಾಡಬಹುದು ಎಂದು ತಿಳಿಸಿದರು. ಅದರಂತೆ ಆದೇಶ ಬರೆಯಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿತು. ಜತೆಗೆ, ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿದೆ.

ಪ್ರಕರಣದ ಹಿನ್ನೆಲೆ ಏನು: ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ. ‘ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು ಇದನ್ನು ರದ್ದುಗೊಳಿಸಬೇಕು’ ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಬಿಐ ತನಿಖೆಗೆ ಹೈಕೋರ್ಟ್ 2023ರ ಫೆಬ್ರುವರಿ 10ರಂದು ಮಧ್ಯಂತರ ತಡೆ ನೀಡಿತ್ತು.

ವಿಚರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ನೆಹರು ಓಲೆಕರ್ ಹೈಕೋರ್ಟ್‌ಗೆ ಅರ್ಜಿ: ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ದೋಷಿಯಾಗಿ ತೀರ್ಮಾನಿಸಿದ ಅಧೀನ ನ್ಯಾಯಾಲಯ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠದ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ, ಓಲೇಕಾರ್ ಪರ ವಕೀಲರು ಹಾಜರಾಗಿ, ಅರ್ಜಿದಾರರನ್ನು ದೋಷಿಯಾಗಿ ತೀರ್ಮಾನಿಸಿ ಅಧೀನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು. ಈಗಾಗಲೇ ಅರ್ಜಿದಾರರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿರುವ ಅಧೀನ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಆ ಮನವಿ ಪರಿಶೀಲಿಸಿದ ನ್ಯಾಯಪೀಠ, ಸರಿಯಾದ ಮಾದರಿಯಲ್ಲಿ ಅರ್ಜಿಯನ್ನು ಸಲ್ಲಿಸಿಲ್ಲ. ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಓಲೇಕಾರ್ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಹಾವೇರಿ ನಗರಸಭೆ ಕಾಮಗಾರಿಗಳಲ್ಲಿ ನಕಲಿ ಬಿಲ್ ಸೃಷ್ಠಿಸಿರುವ ಸಂಬಂಧ ನೆಹರು ಓಲೇಕಾರ್ ಅವರವನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಅವರಿಗೆ ಎರಡು ವರ್ಷ ಸಾಧಾರಣಾ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (91ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ) 2023ರ ಫೆ.13ರಂದು ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಓಲೇಕರ್‌ಗೆ ಹೈಕೊರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಮಾ.3ರಂದು ಓಲೇಕಾರ್‌ಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯನ್ನು ಅಮಾನತ್ತಿನಲ್ಲಿರಿಸಿದ ಹೈಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಇದೀಗ ದೋಷಿಯಾಗಿ ತೀರ್ಮಾನಿಸಿರುವ ಆದೇಶದ ಭಾಗಕ್ಕೆ ತಡೆ ನೀಡಲು ಕೋರಿದ್ದಾರೆ.

ಇದನ್ನೂ ಓದಿ:5 ಮತ್ತು 8ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದೂಡಲು ಮತ್ತೆ ನಿರಾಕರಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.