ಬೆಂಗಳೂರು: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯನ್ನು ಕೃಷಿ ಜಮೀನಿನಲ್ಲಿ ನಿರ್ಮಾಣ ಮಾಡಿದಕ್ಕೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಪ್ರಕಾಶ್‌ಕುಮಾರ್ ನಾಯ್ಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ, ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಗೋಕಾಕ್ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ರೈತರಿಂದ 426 ಎಕರೆ ಕೃಷಿ ಜಮೀನನ್ನು ಖರೀದಿ ಮಾಡಿ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗಿದೆ ಇದು ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ವಿರುದ್ಧವಾಗಿದೆ. ಅಲ್ಲದೆ ಇದನ್ನ ನಿರ್ಮಾಣ ಮಾಡಲು ಐಡಿಬಿಐ, ಎಸ್‌ಬಿಐ ಸೇರಿ ಇತರೆ ಬ್ಯಾಂಕ್‌ಗಳಿಂದ 500 ಕೋಟಿ ರೂ.ಸಾಲವನ್ನು ಪಡೆದಿದ್ದು, ಅದನ್ನ ಹಿಂದುರಿಗಿಸಿಲ್ಲ. ಕಾನೂನು ಉಲ್ಲಂಘಿಸಿ ಕಾರ್ಖಾನೆ ನಿರ್ಮಾಣ ಮಾಡಿದ್ದಾರೆ. ಹೀಗಾಗಿ ವ್ಯವಸ್ಥಾಪನಾ ಕಮಿಟಿಯನ್ನು ರಚಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯಾಲಯ ರಾಜ್ಯ ಸರಕಾರ, ಆರ್‌ಬಿಐ, ಬೆಳಗಾವಿ ಜಿಲ್ಲಾಧಿಕಾರಿ, ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆಗೆ ನಿರ್ದೇಶಕ ವಸಂತ್ ರಾವ್ ಪಾಟೀಲ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಫೆಬ್ರವರಿ .26ಕ್ಕೆ ಮುಂದೂಡಿಕೆ ಮಾಡಿದೆ