ETV Bharat / state

ಶಾಲೆ ಬಿಟ್ಟ ಮಕ್ಕಳ ನಿಖರ ಮಾಹಿತಿ ಕಲೆ ಹಾಕಲು ಕಾಲಾವಕಾಶ ನೀಡಿದ ಹೈಕೋರ್ಟ್ - ಬಿಬಿಎಂಪಿಗೆ ಶಾಲೆ ಬಿಟ್ಟ ಮಕ್ಕಳ ಮಾಹಿತಿ ಕಲೆ ಹಾಕಲು ಹೈಕೋರ್ಟ್​​ ಆದೇಶ

ಮನೆ ಮನೆಗೂ ತೆರಳಿ ಜನರಿಗೆ ಸಮೀಕ್ಷೆ ಉದ್ದೇಶ ಮತ್ತು ಮಹತ್ವದ ಬಗ್ಗೆ ತಿಳಿಸಿಕೊಡಲಾಗುತ್ತಿದೆ. ಆದರೆ, ಜನ ಬೇಗ ಮಾಹಿತಿ ಕೊಡಲು ಹಿಂಜರಿಯುತ್ತಾರೆ. ಈ ಬಗ್ಗೆ ಹಲವು ಪ್ರಶ್ನೆ ಕೇಳುತ್ತಾರೆ. ಅವರಿಗೆ ತಿಳಿ ಹೇಳುವುದೇ ದೊಡ್ಡ ಸವಾಲಾಗಿದೆ. ಸಮೀಕ್ಷೆ ನಡೆಸುವ ಸಿಬ್ಬಂದಿಗೆ ಸೂಕ್ತ ತರಬೇತಿಯನ್ನೂ ನೀಡಲಾಗುತ್ತಿದೆ..

High Court
ಹೈಕೋರ್ಟ್
author img

By

Published : Oct 9, 2021, 8:14 PM IST

ಬೆಂಗಳೂರು : ನಗರದಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ನಡೆಸಲಾಗುತ್ತಿರುವ ಸಮೀಕ್ಷೆಯನ್ನು ಪೂರ್ಣಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್ ಎರಡು ತಿಂಗಳ ಕಾಲಾವಕಾಶ ನೀಡಿದೆ.

ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2013ರಲ್ಲಿ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ ಹಾಜರಾಗಿ ನಗರದಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದೆ. 2021ರ ಸೆಪ್ಟೆಂಬರ್ ವೇಳೆಗೆ ಶೇ.51ರಷ್ಟು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಅಲ್ಲದೆ ಮನೆ ಮನೆಗೂ ತೆರಳಿ ಜನರಿಗೆ ಸಮೀಕ್ಷೆ ಉದ್ದೇಶ ಮತ್ತು ಮಹತ್ವದ ಬಗ್ಗೆ ತಿಳಿಸಿಕೊಡಲಾಗುತ್ತಿದೆ. ಆದರೆ, ಜನ ಬೇಗ ಮಾಹಿತಿ ಕೊಡಲು ಹಿಂಜರಿಯುತ್ತಾರೆ. ಈ ಬಗ್ಗೆ ಹಲವು ಪ್ರಶ್ನೆ ಕೇಳುತ್ತಾರೆ. ಅವರಿಗೆ ತಿಳಿ ಹೇಳುವುದೇ ದೊಡ್ಡ ಸವಾಲಾಗಿದೆ. ಸಮೀಕ್ಷೆ ನಡೆಸುವ ಸಿಬ್ಬಂದಿಗೆ ಸೂಕ್ತ ತರಬೇತಿಯನ್ನೂ ನೀಡಲಾಗುತ್ತಿದೆ.

ಆದ್ದರಿಂದ ಉಳಿದ ಸಮೀಕ್ಷೆ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆದರೆ, ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲು ಬಿಬಿಎಂಪಿಗೆ ಎರಡು ತಿಂಗಳ ಕಾಲಾವಕಾಶ ನೀಡಿದ ಪೀಠ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ ನೇಮಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.