ETV Bharat / state

ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಸದಸ್ಯರ ನೇಮಕ: ಕ್ರಮ ಕೂಗೊಳ್ಳಲು 3 ವಾರ ಕಾಲಾವಕಾಶ ನೀಡಿದ ಹೈಕೋರ್ಟ್

ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ.

high court
ಹೈಕೋರ್ಟ್
author img

By

Published : Jun 21, 2023, 2:20 PM IST

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ನೇಮಕ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿದೆ.

ಹಲವು ತಿಂಗಳಿನಿಂದ ಖಾಲಿಯಿರುವ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ವಕೀಲರಾದ ಸುಧಾ ಕಾಟ್ವ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಮೂರು ವಾರಗಳ ಕಾಲ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಪೀಠ, ಇದು ಕೊನೆಯ ಅವಕಾಶ ಎಂದು ತಿಳಿಸಿ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿ, ಸುಪ್ರೀಂಕೋರ್ಟ್ ಅದೇಶದ ಮೇರೆಗೆ ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳ ವಿರುದ್ಧ ದೂರು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪೊಲೀಸ್ ಪ್ರಾಧಿಕಾರ ರಚಿಸಲಾಗಿದೆ. ಆದರೆ, ಸಕಾಲಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡುತ್ತಿಲ್ಲ. ಪ್ರಾಧಿಕಾರಕ್ಕೆ ಅಗತ್ಯ ಸಿಬ್ಬಂದಿ ಮತ್ತು ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ತಿಳಿಸಿದರು.

ಸ್ವತಂತ್ರ ಮತ್ತು ಶಾಸನಾತ್ಮಕ ಹುದ್ದೆಯಾದ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಬೇಕಿದೆ. ಅಧ್ಯಕ್ಷ ಹುದ್ದೆಯು 2022ರ ಆಗಸ್ಟ್​ 11 ರಿಂದ ಖಾಲಿ ಉಳಿದಿದೆ. ಒಂದು ಸದಸ್ಯ ಸ್ಥಾನ 2020 ರ ಮೇ 8 ರಿಂದ ಮತ್ತು ಮತ್ತೊಂದು ಸದಸ್ಯ ಸ್ಥಾನ 2022 ರ ಡಿ. 28 ರಿಂದ ಖಾಲಿಯಿದೆ. ಸಕಾಲಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸದ ಕಾರಣ ಪ್ರಾಧಿಕಾರ ತನ್ನ ಶಾಸನಾತ್ಮಕ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿಲ್ಲ. ಅಪಾರ ಪ್ರಮಾಣದ ದೂರುಗಳು ಮತ್ತು ಕುಂದುಕೊರತೆಗಳು ವಿಲೇವಾರಿಯಾಗದೇ ಬಾಕಿ ಉಳಿದಿವೆ. ಆದ್ದರಿಂದ ಖಾಲಿ ಇರುವ ಪ್ರಾಧಿಕಾರದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಕೂಡಲೇ ನೇಮಕ ಮಾಡಲು ಸರ್ಕಾರಕ್ಕೆ ಅದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ : ವಿಚ್ಛೇದನ ಪ್ರಕರಣದಲ್ಲಿ ಪತಿ ಪಾಟಿ ಸವಾಲಿನ ವೆಚ್ಚ ಭರಿಸಲು ನಿರ್ದೇಶಿಸಿದ್ದ ಆದೇಶ ರದ್ದು

ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರ್ಜಿದಾರರು: ಪ್ರಾಥಮಿಕ ಶಾಲಾ ಮಕ್ಕಳ (6 ವರ್ಷದೊಳಗಿನ ಶಾಲಾ ಮಕ್ಕಳು) ಸ್ಕೂಲ್ ಬ್ಯಾಗ್ ತೂಕ ಇಳಿಕೆ ಮಾಡುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜಿಯನ್ನು ಹಿಂಪಡೆಯಲಾಗಿದೆ.

ಈ ಸಂಬಂಧ ವಕೀಲರಾದ ರಮೇಶ್ ನಾಯಕ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ವಿಭಾಗಿಯ ಪೀಠ, ಶಾಲಾ ಮಕ್ಕಳ ಸ್ಕೂಲ್ ಬ್ಯಾಗ್ ವಿಚಾರ ಅತ್ಯಂತ ಗಂಭೀರ ವಿಷಯವಾಗಿದೆ. ಆದರೆ, ಅರ್ಜಿದಾರರು ಸೂಕ್ತ ಮಾಹಿತಿ ಇಲ್ಲದೇ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿ ವಜಾಗೊಳಿಸಲು ಮುಂದಾಯಿತು.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಇ-ಮೇಲ್ ಮೂಲಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಬಿಟ್ಟರೆ ಬೇರೇನೂ ಪ್ರಯತ್ನ ಮಾಡಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ಕೊಟ್ಟಿದ್ದೇನೆ ಎಂಬ ಅರ್ಜಿದಾರರ ವಾದಕ್ಕೆ ಯಾವುದೇ ಪುರಾವೆಗಳು ಕಾಣಿಸುತ್ತಿಲ್ಲ. ಅಗತ್ಯ ಮಾಹಿತಿ ಕಲೆ ಹಾಕಿದ ಬಳಿಕ ಅರ್ಜಿದಾರರು ಕೋರ್ಟ್​ಗೆ ಬರಬಹುದಿತ್ತು ಎಂದು ತಿಳಿಸಿತು.

ಈ ವೇಳೆ ಅರ್ಜಿದಾರರೂ ಆಗಿರುವ ವಕೀಲರು ಮತ್ತಷ್ಟು ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿತು. ಜೊತೆಗೆ ಪ್ರಸ್ತುತ ಅರ್ಜಿ ಹಿಂಪಡೆಯಲು ಅವಕಾಶ ಮಾಡಿಕೊಟ್ಟಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.