ETV Bharat / state

ಬೆಂಗಳೂರಿನ ಕೃಷಿಕ್​ ಸಮಾಜದ ಕಟ್ಟಡ ಬಳಕೆಗೆ ಹೈಕೋರ್ಟ್​ ಅನುಮತಿ

author img

By

Published : Feb 20, 2023, 10:12 PM IST

ಕರ್ನಾಟಕ ಪ್ರದೇಶ ಕೃಷಿಕ್ ಸಮಾಜ ಸಂಸ್ಥೆ ನಿರ್ಮಿಸಿರುವ ಕಟ್ಟಡವನ್ನು ಬಳಸಿಕೊಳ್ಳುವಂತೆ ಕೃಷಿಕ್​ ಸಮಾಜಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

High Court has given permission to agricultural society
ಬೆಂಗಳೂರು:ಕೃಷಿಕ್​ ಸಮಾಜದ ಕಟ್ಟಡ ಬಳಕೆಗೆ ಹೈಕೋರ್ಟ್​ ಅನುಮತಿ

ಬೆಂಗಳೂರು: ನಗರದ ಹಡ್ಸನ್ ವೃತ್ತದ ಬಳಿ ಕರ್ನಾಟಕ ಪ್ರದೇಶ ಕೃಷಿಕ್ ಸಮಾಜ ಸಂಸ್ಥೆ ನಿರ್ಮಿಸಿರುವ ಕಟ್ಟಡವನ್ನು (ಹಾಪ್ ಕಾಮ್ಸ್ ಆಗಿ ಹೆಸರುವಾಸಿಯಾದ) ಉಪಯೋಗಿಸಿಕೊಳ್ಳಲು ಕೃಷಿಕ್ ಸಮಾಜಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಕಬ್ಬನ್ ಉದ್ಯಾನ ವ್ಯಾಪ್ತಿ ಪ್ರದೇಶದಲ್ಲಿ ಅಕ್ರಮವಾಗಿ ಹಲವು ಕಟ್ಟಡ ನಿರ್ಮಿಸಲಾಗಿದೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್.ಉಮೇಶ್ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಆಶೋಕ್​ ಎಸ್​ ಕಿಣಗಿ ಅವರಿದ್ದ ನ್ಯಾಯಪೀಠ, ಕಟ್ಟಡವನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಕೃಷಿಕ್​ ಸಮಾಜಕ್ಕೆ ಅವಕಾಶ ಕಲ್ಪಿಸಿದೆ. ಅರ್ಜಿಯ ಈ ಹಿಂದೆ ನಡೆದ ವಿಚಾರಣೆ ವೇಳೆ ನೀಡಿದ್ದ ನಿರ್ದೇಶನದಂತೆ ಫೆಬ್ರವರಿ 4ರಂದು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪಕ್ಷಗಾರರ ಸಮ್ಮುಖದಲ್ಲಿ ಕೃಷಿಕ್ ಸಮಾಜದ ಕಟ್ಟಡವಿರುವ ಜಾಗದ ಸರ್ವೇ ಕಾರ್ಯ ನಡೆಸಲಾಗಿದೆ. ಈ ಸರ್ವೇ ಪ್ರಕಾರ ಕೃಷಿಕ್ ಸಮಾಜ ಕಟ್ಟಡವು ಕಬ್ಬನ್ ಪಾರ್ಕ್ ಪ್ರದೇಶದ ವ್ಯಾಪ್ತಿಯಿಂದ ಹೊರಗಿದೆ ಎಂದು ತಿಳಿದು ಬಂದಿದೆ ಎಂದು ಬೆಂಗಳೂರು ನಗರ ಸರ್ವೇ ವಲಯದದ ಸಹಾಯಕ ನಿರ್ದೇಶಕಿ ಹರ್ಷ ಕುಮಾರಿ ಅವರು ನ್ಯಾಯಪೀಠಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ದಾಖಲಿಸಿಕೊಂಡ ನ್ಯಾಯಪೀಠ ಕಟ್ಟಡ ಉಪಯೋಗ ಮಾಡಲು ಕೃಷಿಕ್ ಸಮಾಜಕ್ಕೆ ಅನುಮತಿ ನೀಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್, ಈ ಅನುಮತಿ ಅರ್ಜಿ ಕುರಿತ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಪಪಡಿಸಿದೆ.

ಪ್ರಕರಣದ ಹಿನ್ನೆಲೆ: ಈ ಹಿಂದೆ ಕೃಷಿಕ್ ಸಮಾಜ ಕಟ್ಟದ ಬಳಕೆಗೆ ಹೈಕೋರ್ಟ್ ನಿರ್ಬಂಧ ಹೇರಿತ್ತು. ಇದರಿಂದ ಅರ್ಜಿಯು 2023ರ ಜ.25ರಂದು ವಿಚಾರಣೆಗೆ ಬಂದಿದ್ದಾಗ ಕೃಷಿಕ್ ಸಮಾಜ ಪರ ವಕೀಲರು ಹಾಜರಾಗಿ, ಕಟ್ಟಡವಿರುವ ಜಾಗ ಕಬ್ಬನ್ ಪಾರ್ಕ್ ಪ್ರದೇಶದ ವ್ಯಾಪ್ತಿಗೆ ಬರುವುದಿಲ್ಲ. ಕೃಷಿ ಭವನವಿರುವ 53,328 ಚದರ ಅಡಿ ಜಾಗವನ್ನು ಕರ್ನಾಟಕ ಪ್ರದೇಶ ಕೃಷಿಕ್ ಸಮಾಜಕ್ಕೆ 99 ವರ್ಷಗಳ ಅವಧಿಗೆ 1966ರಲ್ಲಿ ಸರ್ಕಾರ ಗುತ್ತಿಗೆ ನೀಡಿತ್ತು. ಜಾಗದ ಸಂಬಂಧ ಕೃಷಿಕ್ ಸಮಾಜವು ಈವರೆಗೂ ಆದಾಯ ತೆರಿಗೆ ಪಾವತಿಸುತ್ತಿದೆ ಎಂದು ತಿಳಿಸಿದ್ದರು.

ಅಲ್ಲದೇ, ಈ ಜಾಗವನ್ನು ಕಬ್ಬನ್ ಪಾರ್ಕ್ ಪ್ರದೇಶದಿಂದ ಹೊರಗಿಟ್ಟು ಸರ್ಕಾರ 2015ರ ನ.5ರಂದು ಆದೇಶಿಸಿದೆ. ಇಲ್ಲಿನ ಶೀತಲೀಕರಣ ಕಟ್ಟಡವು 1965ರಿಂದಲೂ ಇದೆ. ಸದ್ಯ ನಿರ್ಮಿಸಲಾಗಿರುವ ಕಟ್ಟಡದ ಜಾಗವು ಕಬ್ಬನ್ ಪಾರ್ಕ್ ಪ್ರದೇಶದ ವ್ಯಾಪ್ತಿಗೆ ಬರುವುದಿಲ್ಲ. ಆದ್ದರಿಂದ ಕಟ್ಟಡ ಬಳಸಲು ಕೃಷಿಕ್ ಸಮಾಜಕ್ಕೆ ಅನುಮತಿ ನೀಡುವಂತೆ ಕೋರಿದ್ದರು. ಅದನ್ನು ಪರಿಗಣಿಸಿದ್ದ ಹೈಕೋರ್ಟ್, ಕರ್ನಾಟಕ ಪ್ರದೇಶ ಕೃಷಿಕ್ ಸಮಾಜದ ಕಟ್ಟಡವು ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ವರದಿ ಸಲ್ಲಿಸವಂತೆ ಬೆಂಗಳೂರು ನಗರ ಸರ್ವೇ ವಲಯದ ಸಹಾಯಕ ನಿರ್ದೇಶಕರಿಗೆ ಆದೇಶಿಸಿತ್ತು. ಈ ಆದೇಶದಂತೆ ಸರ್ವೇ ವಿಭಾಗದ ಅಧಿಕಾರಿಗಳು ವರದಿ ಸಲ್ಲಿಸಿದ್ದರು.

ಇದನ್ನೂ ಓದಿ:ಹೆಚ್‌ಡಿಕೆ ಕುಟುಂಬಸ್ಥರಿಂದ ಜಮೀನು ಒತ್ತುವರಿ ಆರೋಪ: ಕಂದಾಯ ಇಲಾಖೆ ಪ್ರಮಾಣ ಪತ್ರಕ್ಕೆ ಹೈಕೋರ್ಟ್​ ಅಸಮಾಧಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.