ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುತ್ತಿರುವ ಕೌನ್ಸೆಲಿಂಗ್‌ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿ, ಅರ್ಜಿಯನ್ನು ಇತ್ಯರ್ಥಗೊಳಿಸಿದೆ.
ರಾಜ್ಯ ಸರ್ಕಾರಿ ಪ್ರಾಥಮಿಕ ಸೇರಿ 110 ಜನರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರು ವರ್ಗಾವಣೆ ನಿಯಮಗಳನ್ನು ಕುರಿತು ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಸೂಕ್ತ ಆದೇಶಗಳನ್ನು ಹೊರಡಿಸಲು ನ್ಯಾಯಪೀಠವು ಶಿಕ್ಷಣ ಇಲಾಖೆಗೆ ಸೂಚಿಸಿತು. ಕೆಎಟಿ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.