ETV Bharat / state

ಆಧಾರ್ ಸಾಫ್ಟ್‌ವೇರ್, ದತ್ತಾಂಶ ಸಂಗ್ರಹಕ್ಕಾಗಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ: ಸುಪ್ರೀಂನಲ್ಲಿ ಪರಿಹಾರ ಕಂಡುಕೊಳ್ಳುವಂತೆ ಹೈಕೋರ್ಟ್ ಸೂಚನೆ

author img

By

Published : Oct 20, 2022, 2:25 PM IST

Updated : Oct 20, 2022, 2:43 PM IST

ಅಮೆರಿಕ ಮೂಲದ ನಾಲ್ಕು ಕಂಪನಿಗಳಿಗೆ ಆಧಾರ್​ ಕಾರ್ಡ್‌ನ ಬಯೋಮೆಟ್ರಿಕ್, ಸಾಪ್ಟ್‌ವೇರ್ ಮತ್ತು ದತ್ತಾಂಶ ಸಂಗ್ರಹಿಸಲು ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಪರಿಹಾರ ಪಡೆದುಕೊಳ್ಳುವಂತೆ ಸೂಚನೆ ನೀಡಿದೆ.

ಹೈಕೋರ್ಟ್
high court

ಬೆಂಗಳೂರು: ಆಧಾರ್​ ಕಾರ್ಡ್‌ನ ಬಯೋಮೆಟ್ರಿಕ್, ಸಾಪ್ಟ್‌ವೇರ್ ಮತ್ತು ದತ್ತಾಂಶ ಸಂಗ್ರಹಿಸಲು ಅಮೆರಿಕ ಮೂಲದ ನಾಲ್ಕು ಕಂಪನಿಗಳಿಗೆ ಗುತ್ತಿಗೆ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಇತ್ಯರ್ಥ ಪಡಿಸಿರುವ ಹೈಕೋರ್ಟ್, ಈ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಪರಿಹಾರ ಪಡೆದುಕೊಳ್ಳಬಹುದು ಎಂದು ಸೂಚನೆ ನೀಡಿತು.

ನಿವೃತ್ತ ಸೇನಾ ಅಧಿಕಾರಿ ಮ್ಯಾಥ್ಯೂ ಥಾಮಸ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಅವರಿದ್ದ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೇ, ಇದೇ ವಿಚಾರವಾಗಿ ಈ ಹಿಂದೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಹೀಗಾಗಿ, ಸುಪ್ರೀಂಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚನೆ ನೀಡಿತು. ಜತೆಗೆ, ಸುಪ್ರೀಂಕೋರ್ಟ್​ ಸೂಚನೆ ನೀಡಿದಲ್ಲಿ ಮತ್ತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ ಎಂದು ತಿಳಿಸಿ ಅರ್ಜಿ ಇತ್ಯರ್ಥ ಪಡಿಸಿತು.

ಇದನ್ನೂ ಓದಿ: ಮಕ್ಕಳ ಪೋಷಣೆಗೆ ಮೆಕ್ಸಿಕೋ ಪತ್ನಿ - ಭಾರತದ ಪತಿ ನಡುವೆ ಸಂಧಾನ ಮಾಡಿದ ಹೈಕೋರ್ಟ್

ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಿಡಿಯೋ ಕಾನ್ಪೆರೆನ್ಸ್ ಮೂಲಕ ಹಾಜರಾಗಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್, ದೇಶದ ಪ್ರಜೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸುವುದು ಮತ್ತು ವರ್ಗಾಯಿಸುವ ಅಧಿಕಾರವನ್ನು ವಿದೇಶಿ ಕಂಪನಿಗಳಿಗೆ ನೀಡಲಾಗಿದೆ. ಪ್ರಸ್ತುತ ದೇಶದಲ್ಲಿ ಸಾಮಾನ್ಯ ಪ್ರಜೆಯಿಂದ ಸೇನಾ ಅಧಿಕಾರಿಗಳವರೆಗೂ ಆಧಾರ್ ಕಾರ್ಡ್ ಪಡೆದುಕೊಂಡಿದ್ದು, ಅವರ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಗಳನ್ನು ಲಿಂಕ್ ಮಾಡಲಾಗಿದೆ.

ಈ ಎಲ್ಲ ಮಾಹಿತಿ ವಿದೇಶಿ ಕಂಪನಿಗಳಿಗೆ ರವಾನೆ ಆದಲ್ಲಿ ದೇಶದ ಭದ್ರತೆಗೆ ಧಕ್ಕೆಯಾಗಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅಲ್ಲದೇ, ಸುಪ್ರೀಂಕೋರ್ಟ್‌ಗೆ ಇರುವ ಎಲ್ಲ ಅಧಿಕಾರ ಹೈಕೋರ್ಟ್‌ಗೂ ಇದೆ. ಆದ್ದರಿಂದ ಅರ್ಜಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಒಂದೇ ಹೆಸರಿನಲ್ಲಿ ಮತ್ತೊಂದು ಸಂಘ ಕಟ್ಟಲು ಅವಕಾಶವಿಲ್ಲ: ಹೈಕೋರ್ಟ್‌

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಆಧಾರ್ ಕಾರ್ಡ್ ಸಂಬಂಧ ಗೌಪ್ಯತೆ ಹಕ್ಕು ಉಲ್ಲಂಘನೆ ವಿಚಾರವಾಗಿ ಅರ್ಜಿದಾರರು ಈ ಹಿಂದೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದೀಗ ಮತ್ತೆ ನಿಮ್ಮ ವಾದವನ್ನು ಸುಪ್ರೀಂಕೋರ್ಟ್ ಮುಂದೆ ಇಡವುದು ಸೂಕ್ತ ಎಂದು ಅಭಿಪ್ರಾಯ ಪಟ್ಟ ಹೈಕೋರ್ಟ್, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ತಿಳಿಸಿ ಅರ್ಜಿ ಇತ್ಯರ್ಥ ಮಾಡಿತು.

ಇದನ್ನೂ ಓದಿ: ಸುಪ್ರೀಂಕೋರ್ಟ್​ ಆದೇಶ ಪಾಲಿಸದ ಲೋಕಾಯುಕ್ತ: ಹೈಕೋರ್ಟ್​ ನೋಟಿಸ್

Last Updated : Oct 20, 2022, 2:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.