ETV Bharat / state

ಹಸಿರು ಪಟಾಕಿಯಷ್ಟೇ ಮಾರಾಟವಾಗಿದೆಯಾ?: ಸರ್ಕಾರಕ್ಕೆ ಮಾಹಿತಿ ಕೇಳಿದ ಹೈಕೋರ್ಟ್ - ರಾಜ್ಯ ಸರ್ಕಾರ

ಹೈಕೋರ್ಟ್ ನಿರ್ದೇಶನದಂತೆ ದೀಪಾವಳಿ ಬಳಿಕ ಶಬ್ದ ಮಾಲಿನ್ಯದ ಪ್ರಮಾಣ ಅಳೆಯಲಾಗಿದೆ. ಕಳೆದ ದೀಪಾವಳಿಗೆ ಹೋಲಿಸಿದರೆ ಈ ಬಾರಿ ಶೇ.30ರಿಂದ 34ರಷ್ಟು ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿ ಪ್ರಮಾಣ ಪತ್ರ ಸಲ್ಲಿಸಿದರು.

High Court
ಹೈಕೋರ್ಟ್
author img

By

Published : Nov 24, 2020, 3:57 PM IST

ಬೆಂಗಳೂರು : ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಮಾರಾಟ ಮಾಡಲಾಗಿದೆಯೇ ಎಂದು ಪ್ರಶ್ನಿಸಿರುವ ಹೈಕೋರ್ಟ್, ನಿಯಮ ಉಲ್ಲಂಘಿಸಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಸೂಚಿಸಿದೆ.

ಪ್ರಸಕ್ತ ವರ್ಷ ಕೊರೊನಾ ಸೋಂಕು ಇರುವ ಕಾರಣ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ನಗರದ ಚಾರ್ಟರ್ಡ್ ಅಕೌಂಟೆಂಟ್ ಡಾ. ಎ.ಎಸ್. ವಿಷ್ಣು ಭರತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಕೆಎಸ್‌ಪಿಸಿಬಿ ಪರ ವಕೀಲರು ಮಾಹಿತಿ ನೀಡಿ, ಹೈಕೋರ್ಟ್ ನಿರ್ದೇಶನದಂತೆ ದೀಪಾವಳಿ ಬಳಿಕ ಶಬ್ದ ಮಾಲಿನ್ಯದ ಪ್ರಮಾಣದ ಅಳೆಯಲಾಗಿದೆ. ಕಳೆದ ದೀಪಾವಳಿಗೆ ಹೋಲಿಸಿದರೆ ಈ ಬಾರಿ ಶೇ.30ರಿಂದ 34ರಷ್ಟು ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿ ಪ್ರಮಾಣ ಪತ್ರ ಸಲ್ಲಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಮಾರಾಟ ಮಾಡಲಾಗಿದೆಯೇ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು. ಒಂದು ವೇಳೆ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರಾಟ ಮಾಡಿದ್ದರೆ ಹಾಗೂ ಬಳಕೆ ಮಾಡಿದ್ದರೆ, ನಿಯಮ ಉಲ್ಲಂಘಿಸಿದವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ವಿವರ ಸಲ್ಲಿಸಿ ಎಂದು ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿತು.

ಅರ್ಜಿಯ ಕಳೆದ ವಿಚಾರಣೆ ವೇಳೆ ರಾಜ್ಯದಲ್ಲಿ ಹಸಿರು ಮಾರಾಟಕ್ಕೆ ಅನುಮತಿ ನೀಡಿದ್ದ ಹೈಕೋರ್ಟ್, ಇತರ ಪಟಾಕಿಗಳು ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ, ಅಲ್ಲಿ ನೀರಿ ಪ್ರಮಾಣಿತ ಪಟಾಕಿಗಳನ್ನಷ್ಟೇ ಮಾರಾಟ ಮಾಡುವುದನ್ನು ಪರಿಶೀಲಿಸಬೇಕು. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡು ಬಂದರೆ ಕಾನೂನು ರೀತಿ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.