ETV Bharat / state

ಎಪಿಎಂಪಿ ಮಾರುಕಟ್ಟೆಗಳಲ್ಲಿ ಮಧ್ಯಸ್ಥಗಾರರ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ - ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ‌

ಮಾರುಕಟ್ಟೆಗಳಲ್ಲಿ ರೈತರು ಹಾಗೂ ವ್ಯಾಪಾರಗಾರರ ನಡುವಿನ ಗೊಂದಲ ನಿವಾರಣೆಗೆ ಮಧ್ಯಸ್ಥಗಾರರ ಸಮಿತಿ ರಚನೆ ಮಾಡುವಂತೆ ಹೈಕೋರ್ಟ್​ ಸರ್ಕಾರಕ್ಕೆ ಸೂಚನೆ ನೀಡಿದೆ.

ಹೈಕೋರ್ಟ್
high court
author img

By

Published : Sep 22, 2022, 8:34 AM IST

ಬೆಂಗಳೂರು: ಎಪಿಎಂಸಿ ಮಾರುಕಟ್ಟೆಗಳಲ್ಲಿ ರೈತರು ಹಾಗೂ ಖರೀದಿದಾರರ ನಡುವೆ ಎದುರಾಗುವ ವಿವಾದಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಮಧ್ಯಸ್ಥಗಾರರ ಸಮಿತಿ ರಚನೆ ಮಾಡುವಂತೆ ಹೈಕೋರ್ಟ್​ ಸರ್ಕಾರಕ್ಕೆ ಸೂಚನೆ ನೀಡಿದೆ.

ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ‌ಯಲ್ಲಿ (ಎಪಿಎಂಸಿ) ಸ್ಥಳೀಯ ಹೂಬೆಳೆಗಾರರು ಹಾಗೂ ವ್ಯಾಪಾರಸ್ಥರಿಗೆ ಮೂಲಸೌಕರ್ಯ ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಕಸಬಾ ಹೋಬಳಿಯ ಬಚ್ಚಳ್ಳಿಯ ಗ್ರಾಮದ ಎಸ್.ಕ್ಯಾತಪ್ಪ ಹಾಗೂ ತಿರುಮಲ ಫ್ಲವರ್ ಸ್ಟಾಲ್‌ ಮಾಲೀಕ ಜಿ.ಎಂ.ಶ್ರೀಧರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಅಲ್ಲದೇ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ಕಾಯ್ದೆ 1966ರ ಕಲಂ 84ರ ಪ್ರಕಾರ, ಮಾರುಕಟ್ಟೆಗಳಲ್ಲಿ ರೈತರು ಹಾಗೂ ವ್ಯಾಪಾರಗಾರರ ನಡುವಿನ ಗೊಂದಲ ನಿವಾರಣೆಗೆ ಮಧ್ಯಸ್ಥಗಾರರ ಸಮಿತಿ ರಚನೆ ಮಾಡುವುದಕ್ಕೆ ಅವಕಾವಿದೆ. ಈ ಹಿನ್ನೆಲೆಯಲ್ಲಿ ಕಾಯ್ದೆಯ ಸೆಕ್ಷನ್​ 84 ಅನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬೇಕು ಎಂದು ಕೋರ್ಟ್‌ ತಿಳಿಸಿದೆ.

ರೈತರು, ವ್ಯಾಪಾರಿಗಳು, ಏಜೆಂಟರು ಮತ್ತು ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳೀಯವಾಗಿ ಇತ್ಯರ್ಥಪಡಿಸಲು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ಸಹಾಯವನ್ನು ಪಡೆದು ಎಪಿಎಂಸಿ ನಿರ್ದೇಶಕರು, ಅಧಿಕಾರಿಗಳು ಹಾಗೂ ಪಾಲುದಾರರಿಗೆ ಒಂದು ಅಥವಾ ಎರಡು ದಿನಗಳ ತರಬೇತಿ ಕಾರ್ಯಾಗಾರ ಏರ್ಪಡಿಸಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ: ವಿನಾಕಾರಣ ಅರ್ಜಿ ಸಲ್ಲಿಸಿದವರಿಗೆ 5 ಲಕ್ಷ ರೂ ದಂಡ : ಹೈಕೋರ್ಟ್​

ಪ್ರಕರಣದ ಹಿನ್ನೆಲೆ: ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆಡಳಿತ ವೈಫಲ್ಯದಿಂದ ಇಡೀ ಪ್ರದೇಶ ಕೊಳಚೆಯಿಂದ ಕೂಡಿದೆ. ಈ ವೈಫಲ್ಯಕ್ಕೆ ಸಮಿತಿ ಆಡಳಿತ ಮಂಡಳಿಯ ವೈಫಲ್ಯವೇ ಕಾರಣವಾಗಿದೆ. ಮಾರುಕಟ್ಟೆಯಲ್ಲಿ ಅವ್ಯವಸ್ಥೆ ಸರಿಪಡಿಸುವಂತೆ ಸ್ಥಳೀಯ ಹೂವು ಬೆಳೆಗಾರರು ಮತ್ತು ವ್ಯಾಪಾರಸ್ಥರು ಅಧಿಕಾರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಮಾರುಕಟ್ಟೆಯಲ್ಲಿರುವ ಕಸ, ರಸ್ತೆ, ಬೀದಿ ದೀಪ, ಗೇಟ್‌ಗಳನ್ನು ಹಾಕಿ ವಾಹನಗಳ ಸಂಚಾರ ನಿರ್ಬಂಧಿಸಬೇಕು ಎಂದು ಮನವಿ ಮಾಡಿದ್ದರೂ ಅಧಿಕಾರಿಗಳು ಈವರೆಗೂ ಕ್ರಮಕ್ಕೆ ಮುಂದಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.