ETV Bharat / state

ವಿಕಲಚೇತನರ ಸುಗಮ ಸಂಚಾರಕ್ಕೆ ಅಗತ್ಯ ಯೋಜನೆ ರೂಪಿಸಲು ಸಲಹೆ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಷಿಯಲ್ ಕಾಸ್

ವಿಕಲಚೇತನರ ಸುಗಮ ಸಂಚಾರಕ್ಕೆ ಅಗತ್ಯ ಯೋಜನೆ ರೂಪಿಸಲು ಸಲಹೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ಕೊಟ್ಟಿದೆ.

High Court
ಹೈಕೋರ್ಟ್
author img

By ETV Bharat Karnataka Team

Published : Oct 3, 2023, 6:44 PM IST

ಬೆಂಗಳೂರು: ರಾಜ್ಯದಲ್ಲಿ ದೃಷ್ಟಿಹೀನರೂ ಸೇರಿದಂತೆ ವಿಕಲಚೇತನರ ಸುಗಮ ಸಂಚಾರಕ್ಕೆ ಕೈಗೊಳ್ಳಬಹುದಾದ ದೇಶಕ್ಕೆ ಮಾದರಿಯಾಗುವಂತಹ ಸುರಕ್ಷತಾ ಕ್ರಮಗಳನ್ನು ಒಳಗೊಂಡಿರುವ ಯೋಜನೆ ಜಾರಿಗಾಗಿ ಸಲಹೆಗಳೊಂದಿಗೆ ಮಾಹಿತಿ ನೀಡಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ವಿಕಲಚೇತನರಿಗೆ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಬೆಂಗಳೂರಿನ ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಷಿಯಲ್ ಕಾಸ್ ಮತ್ತು ವಿಕಲಚೇತನ ಆಗಿರುವ ಎನ್. ಶ್ರೇಯಸ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಅರ್ಜಿ 2022ರ ಮೇ ತಿಂಗಳಲ್ಲಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಆಗಸ್ಟ್ 3 ರಂದು ನೋಟಿಸ್ ನೀಡಲಾಗಿದೆ. ಆದರೆ, ಅರ್ಜಿದಾರರ ಮನವಿ ಗಂಭೀರವಾಗಿದ್ದರೂ ಈವರೆಗೂ ಸರ್ಕಾರ ಯಾವುದೇ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿತು.

ಜೊತೆಗೆ, ಅರ್ಜಿದಾರರು ಎತ್ತಿರುವ ವಿಚಾರ ಅತ್ಯಂತ ಗಂಭೀರವಾದುದ್ದಾಗಿದೆ. ಸುಪ್ರೀಂ ಕೋರ್ಟ್ ಹಾಗೂ ಹಲವು ಹೈಕೋರ್ಟ್‌ಗಳು ವಿಕಲಚೇತನರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡುತ್ತಿವೆ. ಆದ್ದರಿಂದ ಈ ಕುರಿತಂತೆ ನಿಲಕ್ಷ್ಯಕ್ಕೆ ಮುಂದಾಗದೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರಾಗಿರುವ ಶ್ರೇಯಸ್ ವಾದ ಮಂಡಿಸಿ, ಖಾಸಗಿ ಸಾರಿಗೆ ಸಂಸ್ಥೆಗಳಾದ ಓಲಾ, ಉಬರ್​ಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಮಾರ್ಗದ ವಿವರವನ್ನು ಧ್ವನಿಯ ಮೂಲಕ ಕೇಳಿಸಿಕೊಳ್ಳಬಹುದಾಗಿದೆ. ಜೊತೆಗೆ, ಯಾವುದೇ ರೀತಿಯ ತೊಂದರೆಗೆ ಸಿಲುಕಿದಲ್ಲಿ ತಕ್ಷಣ ಸಂಬಂಧಿಕರನ್ನು ಸಂಪರ್ಕಿಸಲು ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಈ ಸೌಲಭ್ಯ ಕಲ್ಪಿಸಲು ನಿರ್ದೇಶನ ನೀಡಬೇಕು ಎಂದು ಕೋರಿದರು.

ಬಸ್‌ಗಳಲ್ಲಿ ವಿಕಲಚೇತನರು ಬಂದ ಸಂದರ್ಭದಲ್ಲಿ ನಿರ್ವಾಹಕರು ಹೆಚ್ಚು ಗಮನ ಹರಿಸಿ ಕೂರಿಸುವುದು, ಬಸ್‌ನಿಂದ ಇಳಿಯುವ ಸಂದರ್ಭದಲ್ಲಿ ನೆರವಾಗುತ್ತಾರೆ. ಆದರೆ, ಜನದಟ್ಟಣೆ ಹೆಚ್ಚಾಗಿರುವ ಸಂದರ್ಭಗಳಲ್ಲಿ ಇದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ವಿಕಲಚೇತನರಿಗೆ ನೆರವಾಗುವಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕು ಎಂದು ಮನವಿ ಮಾಡಿದರು.

ಅಲ್ಲದೆ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಈವರೆಗೂ ವಿಕಲಚೇತನರಿಗೆ ಯಾವುದೇ ಸುರಕ್ಷತಾ ಕ್ರಮಗಳು ಇಲ್ಲವಾಗಿವೆ. ಆದ್ದರಿಂದ ಸೂಕ್ತ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಇದನ್ನೂ ಓದಿ: KPSC Jobs: ಕಮರ್ಷಿಯಲ್​ ಟ್ಯಾಕ್ಸ್​ ಅಫೀಸರ್​ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಪಿಎಸ್​ಸಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.