ETV Bharat / state

ಘನ ತ್ಯಾಜ್ಯ ನಿರ್ವಹಣೆ ಸಂಬಂಧ ಪ್ರಮಾಣಪತ್ರ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆಗೆ ಹೈಕೋರ್ಟ್​ ಸೂಚನೆ

ಬೆಂಗಳೂರು ನಗರದಲ್ಲಿ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಘನ ತ್ಯಾಜ್ಯದಿಂದ ಪರಿಸರ ಮಾಲಿನ್ಯಕ್ಕೆ ತೊಂದರೆಯಾಗಲಿದೆ. ಘನ ತ್ಯಾಜ್ಯ ನಿರ್ವಹಣೆ ನಿಯಮ ಜಾರಿ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಖುದ್ದು ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ ಮುಂದಿನ ವಿಚಾರಣೆ ವೇಳೆ ಹಾಜರಾಗಿ ಪ್ರಮಾಣಪತ್ರ ಸಲ್ಲಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ.

karnataka High Court
author img

By

Published : Sep 27, 2019, 5:48 AM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ನಿಯಮ-2016 ಜಾರಿಗೆ ತರುವ ಬಗ್ಗೆ ಅಗಸ್ಟ್ 11ರ ಒಳಗೆ ಪ್ರಮಾಣಪತ್ರ ಸಲ್ಲಿಸಲು ನಗರಾಭಿವದ್ಧಿ ಇಲಾಖೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಘನ ತ್ಯಾಜ್ಯ ನಿರ್ವಹಣೆಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡನೆ ಮಾಡಿ, ಘನ ತ್ಯಾಜ್ಯ ನಿರ್ವಹಣೆಯನ್ನು ನಗರದಲ್ಲಿ ಮಾಡಬೇಕು. ನಗರದಲ್ಲಿ ಪ್ರತಿ ದಿನ 5,700 ಟನ್ ಘನ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಆದರೆ ಬಿಬಿಎಂಪಿ ಪ್ರತಿ ದಿನ ಬರೀ 1,250 ಟನ್ ಘನ ತ್ಯಾಜ್ಯ ಉತ್ಪಾದನೆಯಾಗುತ್ತದೆ ಎಂದು ಸುಳ್ಳು ಹೇಳುತ್ತಿದೆ ಎಂದರು.

ಈ ವೇಳೆ ನ್ಯಾಯಾಲಯ‌, ನಗರದಲ್ಲಿ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಘನ ತ್ಯಾಜ್ಯದಿಂದ ಪರಿಸರ ಮಾಲಿನ್ಯಕ್ಕೆ ತೊಂದರೆಯಾಗಲಿದೆ. ಘನ ತ್ಯಾಜ್ಯ ನಿರ್ವಹಣೆ ನಿಯಮ ಜಾರಿ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಖುದ್ದು ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ ಮುಂದಿನ ವಿಚಾರಣೆ ವೇಳೆ ಹಾಜರಾಗಿ ಪ್ರಮಾಣಪತ್ರ ಸಲ್ಲಿಸಬೇಕೆಂದು ಸೂಚಿಸಿ, ನ್ಯಾಯಾಲಯ ವಿಚಾರಣೆ ಮುಂದೂಡಿದೆ.

Intro:ಘನತ್ಯಾಜ್ಯ ನಿರ್ವಹಣೆ .
ಪ್ರಮಾಣ ಪತ್ರ ಸಲ್ಲಿಸಿ ಹೈಕೋರ್ಟ್ ಸೂಚನೆ

ಬೆಂಗಳೂರು

ಸಿಲಿಕಾನ್ ಸಿಟಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ-2016 ಜಾರಿಗೆ ತರುವ ಬಗ್ಗೆ ಅಗಸ್ಟ್ 11ರ ಒಳಗೆ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ನಗರಾಭಿವದ್ಧಿ ಇಲಾಖೆಗೆ ನಿರ್ದೇಶಿಸಿದೆ.

ಘನತ್ಯಾಜ್ಯ ನಿರ್ವಹಣೆ ಗೆ ಸಲ್ಲಿಸಲಾಗಿದ್ದ ಅರ್ಜಿ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು

ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡನೆ ಮಾಡಿ
ಘನತ್ಯಾಜ್ಯ ನಿರ್ವಹಣೆಯನ್ನ ನಗರದಲ್ಲಿ ಮಾಡಬೇಕು. ನಗರದಲ್ಲಿ ಪ್ರತಿ ದಿನ 5,700 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತದೆ. ಆದರೆ ಬಿಬಿಎಂಪಿ ಪ್ರತಿ ದಿನ ಬರೀ 1,250 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತದೆ ಎಂದು ಸುಳ್ಳು ಹೇಳುತ್ತಿದೆ ಎಂದು ತಿಳಿಸಿದರು..

ಈ ವೇಳೆ ನ್ಯಾಯಾಲಯ‌ ನಗರದಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಘನತ್ಯಾಜ್ಯದಿಂದ ಪರಿಸರ ಮಾಲಿನ್ಯಕ್ಕೆ ತೊಂದರೆಯಾಗಲಿದೆ. ಘನತ್ಯಾಜ್ಯ ನಿರ್ವಹಣೆ ನಿಯಮ ಜಾರಿ ಬಗ್ಗೆ ನಗರಾಭಿವದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಖುದ್ದು ಕ್ರಮ ತೆಗೆದುಕೊಂಡು ಮುಂದಿನ ವಿಚಾರಣೆ ವೇಳೆ ಹಾಜರಾಗಿ ಪ್ರಮಾಣ ಪತ್ರ ಸಲ್ಲಿಸಬೇಕೆಂದು ನ್ಯಾಯಲಯ ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆBody:KN_BNG _09_HIGCOURT_7204498Conclusion:KN_BNG _09_HIGCOURT_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.