ETV Bharat / state

ಅಕ್ರಮ ಧಾರ್ಮಿಕ ಕೇಂದ್ರಗಳ ಕುರಿತು ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

author img

By

Published : Dec 1, 2022, 10:42 PM IST

ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಸಾರ್ವಜನಿಕ ಸ್ಥಳ ಒತ್ತುವರಿ ಮಾಡಿ ನಿರ್ಮಿಸಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಿರುವ ಬಗ್ಗೆ ಸಮರ್ಪಕ ವಸ್ತುಸ್ಥಿತಿ ವರದಿ ಸಲ್ಲಿಸಲು ಹೈಕೋರ್ಟ್​ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡಿದೆ.

high-court-instructs-to-give-report-on-eviction-of-religious-buildings
ಅಕ್ರಮ ಧಾರ್ಮಿಕ ಕೇಂದ್ರಗಳ ಕುರಿತು ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಸಾರ್ವಜನಿಕ ಸ್ಥಳ ಒತ್ತುವರಿ ಮಾಡಿ ನಿರ್ಮಿಸಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಿರುವ ಮತ್ತು ತೆರವಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿಯುಳ್ಳ ಸಮರ್ಪಕ ವಸ್ತುಸ್ಥಿತಿ ವರದಿಯನ್ನು ಮುಂದಿನ ಮೂರು ವಾರದಲ್ಲಿ ಸಲ್ಲಿಸಬೇಕು ಎಂದು ಹೈಕೋರ್ಟ್ ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ಪೀಠದ ಈ ಸೂಚನೆ ನೀಡಿ‌ ವಿಚಾರಣೆ ಮುಂದೂಡಿತು.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಈ ಹಿಂದೆ ನೀಡಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಸರ್ಕಾರ ಮತ್ತು ಬಿಬಿಎಂಪಿ ಪರ ವಕೀಲರು ಕೋರಿದರು.

ಆ ಮನವಿಗೆ ಒಪ್ಪಿದ ನ್ಯಾಯಪೀಠ, ಹೈಕೋರ್ಟ್ ಹಲವು ಬಾರಿ ನೀಡಿದ ನಿರ್ದೇಶನದ ಹೊರತಾಗಿಯೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಹಾಗೂ ಸರ್ಕಾರ ಸಮರ್ಪಕವಾದ ವಸ್ತುಸ್ಥಿತಿ ವರದಿ ಸಲ್ಲಿಸಿಲ್ಲ. ಇನ್ನೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವುಗೊಳಿಸುವಲ್ಲಿ ಸಾಕಷ್ಟು ವಿಳಂಬವಾಗಿದೆ. ವಾಸ್ತವವಾಗಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಬಿಡಿಎ, ಬಿಬಿಎಂಪಿ ಮತ್ತು ಸರ್ಕಾರ ಪರಸ್ಪರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಅಗತ್ಯವಿದೆ ಎಂದು ತಿಳಿಸಿತು.

ಅಲ್ಲದೇ, ನಗರದಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಸಮರ್ಪಕವಾದ ಪ್ರಮಾಣ ಪತ್ರ ಸಲ್ಲಿಸಬೇಕು. ಹಾಗೆಯೇ, ಸರ್ಕಾರವೂ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ಅದರಲ್ಲಿ 2021ರ ಆ.12ರಿಂದ (ಹೈಕೋರ್ಟ್ ಆದೇಶ ಹೊರಡಿಸಿದ ದಿನ) ವಸ್ತುಸ್ಥಿತಿ ವರದಿ ಸಲ್ಲಿಸುವ ದಿನದವರೆಗೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಒದಗಿಸಬೇಕು. ತೆರವು ಮಾಡಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ಅಂಕಿ - ಅಂಶಗಳನ್ನು ನಿಗದಿತ ಚಾರ್ಟ್ (ನಕ್ಷೆ) ರೂಪದಲ್ಲಿ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಇದನ್ನೂ ಓದಿ : ಬಿಬಿಎಂಪಿ ಚುನಾವಣೆಗೆ ಮತ್ತೆ ಮೂರು ತಿಂಗಳ ಕಾಲಾವಕಾಶ ಕೇಳಿದ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.