ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಕೇವಲ 20 ತುರ್ತು ಪ್ರಕರಣಗಳನ್ನಷ್ಟೇ ವಿಚಾರಣೆ ನಡೆಸಲು ಹೈಕೋರ್ಟ್ ತೀರ್ಮಾನಿಸಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ್ ಈ ಆದೇಶ ಹೊರಡಿಸಿದ್ದಾರೆ. ಅದರಂತೆ ಮುಂದಿನ 15 ದಿನಗಳ ಕಾಲ ದಿನಕ್ಕೆ ಕೇವಲ 20 ತುರ್ತು ಪ್ರಕರಣಗಳನ್ನಷ್ಟೇ ವಿಚಾರಣೆ ನಡೆಸಲು ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ಸೂಚಿಸಿದ್ದಾರೆ. ಬೆಳಗಿನ ಕಲಾಪದಲ್ಲಿ 10 ಮತ್ತು ಮಧ್ಯಾಹ್ನದ ಕಲಾಪದಲ್ಲಿ 10 ಪ್ರಕರಣಗಳನ್ನಷ್ಟೇ ವಿಚಾರಣೆ ನಡೆಸಬೇಕೆಂದು ಪರಿಷ್ಕೃತ ಮಾರ್ಗಸೂಚಿ ಎಸ್ಒಪಿಯಲ್ಲಿ (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್) ತಿಳಿಸಿದ್ದಾರೆ.
ಮುಂದಿನ 15 ದಿನಗಳ ಕಾಲ ಹೀಯರಿಂಗ್ ಹಂತದ ತುರ್ತು ಪ್ರಕರಣಗಳನ್ನಷ್ಟೇ ವಿಚಾರಣೆಗೆ ಒಳಪಡಿಸಬೇಕು. ವಕೀಲರು ಇಚ್ಛಿಸಿದರೆ ವಾದ ಮಂಡನೆ ಮಾಡಲು ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಒದಗಿಸಬೇಕು. ಕೋರ್ಟ್ ಆವರಣಕ್ಕೆ ಪೂರ್ವಾನುಮತಿ ಪಡೆದು ವಿಚಾರಣೆಗೆ ಹಾಜರಾಗುವ ವಕೀಲರನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶ ನೀಡುವಂತಿಲ್ಲ. ಮುಂದಿನ 15 ದಿನಗಳ ಕಾಲ ಪರಿಸ್ಥಿತಿ ನೋಡಿಕೊಂಡು ಈ ಮಾರ್ಗಸೂಚಿ ಮಾರ್ಪಾಡು ಮಾಡುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.
ಕೊರೊನಾ ಭೀತಿ: ದಿನಕ್ಕೆ 20 ಪ್ರಕರಣಗಳನ್ನಷ್ಟೇ ವಿಚಾರಣೆ ನಡೆಸಲು ಹೈಕೋರ್ಟ್ ಸೂಚನೆ - Bangalore
ಮುಂದಿನ 15 ದಿನಗಳ ಕಾಲ ದಿನಕ್ಕೆ ಕೇವಲ 20 ತುರ್ತು ಪ್ರಕರಣಗಳನ್ನಷ್ಟೇ ವಿಚಾರಣೆ ನಡೆಸಲು ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ಹೈಕೋರ್ಟ್ ಸೂಚಿಸಿದೆ.